ಸೆನ್ ಪೊಲೀಸರ ಕಾರ್ಯಾಚರಣೆ…ಕಳುವಾದ 3.5 ಲಕ್ಷ ಮೌಲ್ಯದ 15 ಮೊಬೈಲ್ ಗಳು ವಶಕ್ಕೆ…ವಾರಸುದಾರರಿಗೆ ರಿಟರ್ನ್…

ಸೆನ್ ಪೊಲೀಸರ ಕಾರ್ಯಾಚರಣೆ…ಕಳುವಾದ 3.5 ಲಕ್ಷ ಮೌಲ್ಯದ 15 ಮೊಬೈಲ್ ಗಳು ವಶಕ್ಕೆ…ವಾರಸುದಾರರಿಗೆ ರಿಟರ್ನ್…

ಮೈಸೂರು,ಏ1,Tv10 ಕನ್ನಡ
ವಿವಿದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳುವಾದ ಮೊಬೈಲ್ ಗಳನ್ನ ಪತ್ತೆಹಚ್ಚುವಲ್ಲಿ ಸೆನ್ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.3.5 ಲಕ್ಷ ಮೌಲ್ಯದ 15 ಮೊಬೈಲ್ ಗಳನ್ನ ವಶಪಡಿಸಿಕೊಳ್ಳಲಾಗಿದ್ದು ಇಂದು ನಗರ ಪೊಲೀಸ್ ಆಯುಕ್ತ ಬಿ.ರಮೇಶ್ ವಾರಸುದಾರರಿಗೆ ಹಿಂದಿರುಗಿಸಿದ್ದಾರೆ.

ಮೊಬೈಲ್ ಗಳನ್ನ ಕಳೆದುಕೊಂಡ ಮಾಲೀಕರು CEIR( central equipment identity register) ಪೋರ್ಟಲ್ ನಲ್ಲಿ ಭರ್ತಿ ಮಾಡಿ ಆನ್ ಲೈನ್ ನಲ್ಲಿ ದೂರು ದಾಖಲಿಸಿದ್ದರು.ಕಳುವಾದ ಮೊಬೈಲ್ ಗಳನ್ನ ಪತ್ತೆಹಚ್ಚಲು ಕಾನೂನು ಮತ್ತು ಸುವ್ಯವಸ್ಥೆ ಯ ಡಿಸಿಪಿ ಎನ್.ಮುತ್ತುರಾಜ್ ಮಾರ್ಗದರ್ಶನದಲ್ಲಿ ಹಾಗೂ ದೇವರಾಜ ವಿಭಾಗದ ಎಸಿಪಿ ಶಾಂತಮಲ್ಲಪ್ಪ ನೇತೃತ್ವದಲ್ಲಿ ತಂಡ ರಚಿಸಲಾಗಿತ್ತು.ಸೆನ್ ಠಾಣೆಯ ಇನ್ಸ್ಪೆಕ್ಟರ್ ಯೋಗಾಂಜನಪ್ಪ,ಪಿಎಸ್ಸೈ ಗಳಾದ ಪೂಜಾ ಹತ್ತರಿಕಿ,ಸಿದ್ದೇಶ್ ಹಾಗೂ ಸಿಬ್ಬಂದಿಗಳು ಮಾಹಿತಿ ಸಂಗ್ರಹಿಸಿ ಕಾರ್ಯಾಚರಣೆ ನಡೆಸಿ ಕಳುವಾದ ಮೊಬೈಲ್ ಗಳನ್ನ ವಶಪಡಿಸಿಕೊಂಡಿದ್ದಾರೆ.

ಸಾರ್ವಜನಿಕರು ಪೋರ್ಟಲ್ ನ ಸದುಪಯೋಗಪಡಿಸಿಕೊಳ್ಳುವಂತೆ ನಗರ ಪೊಲೀಸ್ ಆಯುಕ್ತ ಬಿ.ರಮೇಶ್ ಮನವಿ ಮಾಡಿದ್ದಾರೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *