ಪಂಚಮುಖಿ ಆಂಜನೇಯ ಸ್ವಾಮಿ ಸನ್ನಿಧಿಯಲ್ಲಿ ಹನುಮಜಯಂತಿ ಸಂಭ್ರಮ…ವಿಶೇಷ ಪೂಜೆ…

ಪಂಚಮುಖಿ ಆಂಜನೇಯ ಸ್ವಾಮಿ ಸನ್ನಿಧಿಯಲ್ಲಿ ಹನುಮಜಯಂತಿ ಸಂಭ್ರಮ…ವಿಶೇಷ ಪೂಜೆ…

  • Temples
  • April 6, 2023
  • No Comment
  • 204

ಮೈಸೂರು,ಏ6,Tv10 ಕನ್ನಡ
ಮೈಸೂರಿನ ಇರ್ವಿನ್ ರಸ್ತೆಯಲ್ಲಿರುವ ಪಂಚಮುಖಿ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಹನುಮ ಜಯಂತಿಯ ಸಂಭ್ರಮ ಮನೆ ಮಾಡಿದೆ.ಹನುಮ ಜಯಂತಿ ಅಂಗವಾಗಿ ವಿಶೇಷ ಅಲಂಕಾರ ಹಾಗೂ ವಿವಿಧ ಬಗೆಯ ನೈವೇದ್ಯ ಮತ್ತು ವಿವಿಧ ಧಾರ್ಮಿಕ ಕೈಂಕರ್ಯಗಳನ್ನು ದೇವಸ್ಥಾನದ ಪ್ರಧಾನ ಅರ್ಚಕ ವಿದ್ವಾನ್ ಎಸ್ ಕೃಷ್ಣಮೂರ್ತಿ ನೆರವೇರಿಸಿದರು.
ಆನಂತರ ಆಂಜನೇಯ ಉತ್ಸವ ಮೂರ್ತಿಯನ್ನು ದೇವಾಲಯದ ಆವರಣದಲ್ಲಿ ಪ್ರದಕ್ಷಿಣೆ ಮಾಡಲಾಯಿತು. ತದನಂತರ ಭಕ್ತಾದಿಗಳಿಗೆ ಪ್ರಸಾದ ವಿನಿಯೋಗ ಮಾಡಲಾಯಿತು.ಇದೇ ಸಂಧರ್ಭದಲ್ಲಿ ಮಾತನಾಡಿದ ವಿಧ್ವಾನ್.ಎಸ್.ಕೃಷ್ಣಮೂರ್ತಿ ಜೀವನದಲ್ಲಿ ಕೇವಲ ಹಣ ಸಂಪಾದಿಸಿದರೆ ನೆಮ್ಮದಿ ಸಿಗದು. ಭಕ್ತಿ, ಸತ್ಸಂಗ, ದಾನ, ಧರ್ಮ, ಆಧ್ಯಾತ್ಮ ಚಿಂತನೆಗಳಿಂದ ನೆಮ್ಮದಿ ಸಿಗುತ್ತದೆ. ಅದನ್ನೇ ಮುಕ್ತಿ ಎನ್ನುವರು ಎಂದು ಹಿತನುಡಿ ತಿಸಿಳಿದರು.
ಕಾರ್ಯಕ್ರಮದಲ್ಲಿ ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷರಾದ ಡಿ ಟಿ ಪ್ರಕಾಶ್, ಬ್ರಾಹ್ಮಣ ಯುವ ವೇದಿಕೆ ಪ್ರಧಾನ ಕಾರ್ಯದರ್ಶಿ ವಿಕ್ರಮ ಅಯ್ಯಂಗಾರ್, ಸುರೇಶ್, ಚರಣ್, ಗುರು, ಇರಲಾಲ್, ಹಾಗೂ ಇನ್ನಿತರರು ಭಾಗವಹಿಸಿದ್ದರು…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *