ಅರಮನೆ ಆವರಣದಲ್ಲಿ ಮತದಾನ ಜಾಗೃತಿ…ಪ್ರಜಾಪ್ರಭುತ್ವದಲ್ಲಿ ಹಕ್ಕು ಚಲಾಯಿಸಿ…ಜಾವಗಲ್ ಶ್ರೀನಾಥ್ ಕರೆ…

ಅರಮನೆ ಆವರಣದಲ್ಲಿ ಮತದಾನ ಜಾಗೃತಿ…ಪ್ರಜಾಪ್ರಭುತ್ವದಲ್ಲಿ ಹಕ್ಕು ಚಲಾಯಿಸಿ…ಜಾವಗಲ್ ಶ್ರೀನಾಥ್ ಕರೆ…

ಅರಮನೆ ಆವರಣದಲ್ಲಿ ಮತದಾನ ಜಾಗೃತಿ…ಪ್ರಜಾಪ್ರಭುತ್ವದಲ್ಲಿ ಹಕ್ಕು ಚಲಾಯಿಸಿ…ಜಾವಗಲ್ ಶ್ರೀನಾಥ್ ಕರೆ…

ಮೈಸೂರು,ಏ6,Tv10 ಕನ್ನಡ
ಜಿಲ್ಲಾಡಳಿತ ಹಾಗೂ ಜಿಲ್ಲಾ ಸ್ವೀಪ್ ಸಮಿತಿಯ ವತಿಯಿಂದ ಅರಮನೆ ಮುಂಭಾಗದಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.ಕಾರ್ಯಕ್ರಮವನ್ನ ಉದ್ಘಾಟಿಸಿ ಮಾತನಾಡಿದ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಪ್ರತಿಯೊಬ್ಬರು ಚುನಾವಣೆಯಲ್ಲಿ ಪಾಲ್ಗೋಂಡು ಮತದಾನವನ್ನು ಮಾಡಿ ನಿಮ್ಮ ಅಕ್ಕಪಕ್ಕದಲ್ಲಿನ ಸಾರ್ವಜನಿಕರಲ್ಲಿಯೂ ಕೂಡ ಮತದಾನದ ಬಗ್ಗೆ ಅರಿವು ಮೂಡಿಸಿ ಎಂದರು.
ಜಿಲ್ಲೆಯಲ್ಲಿ 18 ವರ್ಷ ಮೇಲ್ಪಟ್ಟ ಯುವ ಮತದಾರರ ಸಂಖ್ಯೆ ಹೆಚ್ಚಿದೆ ಪ್ರತಿಯೊಬ್ಬ ಯುವ ಮತದಾರರು ಕೂಡ ಈ ಬಾರಿಯ ಚುನಾವಣೆಯಲ್ಲಿ ಸಕ್ರಿಯವಾಗಿ ಭಾಗಿಯಾಗಿ ಎಂದರು. ಏಪ್ರಿಲ್ 1 ಕ್ಕೆ 18 ವರ್ಷ ತುಂಬಿದ ಯುವಕ ಯುವತಿಯರಿಗೂ ಈ ಬಾರಿ ಮತದಾನವನ್ನು ಮಾಡಲು ಅವಕಾಶವನ್ನು ಕಲ್ಪಿಸಲಾಗಿದೆ. ಪ್ರತಿಯೊಬ್ಬರು ಚುನಾವಣಾ ಪಟ್ಟಿಯನ್ನು ನೋಡಿಕೊಂಡು ಮತದಾನದಲ್ಲಿ ಪಾಲ್ಗೊಳ್ಳಿ ಎಂದು ಕರೆ ನೀಡಿದರು.
ಮತದಾರರ ಪಟ್ಟಿಯಿಂದ ಹೆಸರುಗಳು ಕೈ ಬಿಟ್ಟು ಹೋಗದಂತೆ ಮತ್ತು ಮರಣ ಹೊಂದಿದವರ ಪಟ್ಟಿಯ ಬಗ್ಗೆ ಗಮನಹರಿಸಬೇಕು. 80 ವರ್ಷ ಮೇಲ್ಪಟ್ಟಿದ್ದು ಮತಗಟ್ಟೆಗೆ ಬಂದು ಮತ ಹಾಕಲು ಸಾಧ್ಯವಾಗದವರಿಗೆ 12 ಡಿ ಮೂಲಕ ಮತದಾನ ಮಾಡಲು ಅವಕಾಶವಿದೆ. ಸಿ-ವಿಜಿಲ್ ಆಫ್ ಮೂಲಕ ಚುನಾವಣಾ ಸಂಬಂಧಿತ ದಾಖಲಾದ ದೂರುಗಳಿಗೆ ನೂರು ನಿಮಿಷಗಳಲ್ಲಿ ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಕರ್ನಾಟಕ ವಿಧಾನಸಭಾ ಚುನಾವಣೆ 2023 ರ ಹಿನ್ನೆಲೆಯಲ್ಲಿ ಜಿಲ್ಲೆಯ ಮತದಾರರಲ್ಲಿ ಮತದಾನ ಮಾಡುವ ಕುರಿತು ಅರಿವು ಮೂಡಿಸುವ ಸಲುವಾಗಿ ಜಿಲ್ಲೆಯ ಐಕಾನ್ ಆಗಿ ನೇಮಕವಾಗಿರುವ ಅಂತರಾಷ್ಟ್ರೀಯ ಮಟ್ಟದ ಕ್ರಿಕೆಟ್ ಪಟು ಜಾವಗಲ್ ಶ್ರೀನಾಥ್ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿ ಪ್ರಜಾಪ್ರಭುತ್ವ ನಿರ್ಮಾಣವಾಗುವುದು ಕೇವಲ ಮತದಾನದಿಂದ. ಪ್ರತಿಯೊಬ್ಬ ಪ್ರಜೆಯ ಮತದಾನವು ಕೂಡ ಉತ್ತಮ ಪ್ರಜಾಪ್ರಭುತ್ವ ನಿರ್ಮಾಣ ಮಾಡಲು ಸಾಧ್ಯವಾಗುವುದು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆಯ ಅಯುಕ್ತರಾದ ಲಕ್ಷ್ಮಿಕಾಂತ್ ರೆಡ್ಡಿ, ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಾದ ಕೆ.ಎಂ.ಗಾಯಿತ್ರಿ, ಪೋಲಿಸ್ ವರಿಷ್ಠಾಧಿಕಾರಿಗಳಾದ ಸೀಮಾ ಲಾಟ್ಕರ್ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು, ವೀಕಲ ಚೇತನರು ಮತ್ತು ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *