ಲಷ್ಕರ್ ಠಾಣಾ ಪೊಲೀಸರಿಂದ ಪಥಸಂಚಲನ…ಸಾರ್ವಜನಿಕರಿಗೆ ಅಭಯ…

ಲಷ್ಕರ್ ಠಾಣಾ ಪೊಲೀಸರಿಂದ ಪಥಸಂಚಲನ…ಸಾರ್ವಜನಿಕರಿಗೆ ಅಭಯ…

ಮೈಸೂರು,ಏ7,Tv10 ಕನ್ನಡ
ಚುನಾವಣೆ ಸಮೀಪಿಸುತ್ತಿದ್ದಂತೆಯೇ ಮೈಸೂರು ನಗರ ಪೊಲೀಸರು ಅಲರ್ಟ್ ಆಗಿದ್ದಾರೆ.ಶಾಂತಿಯುತ ಮತದಾನ ನಡೆಸಲು ಖಾಕಿ ಪಡೆ ಸಜ್ಜಾಗಿದೆ.ಸಮಾಜಘಾತುಕ ಶಕ್ತಿಗಳನ್ನ ಸೆದೆಬಡಿಯಲು ಸನ್ನದ್ದರಾಗಿದ್ದಾರೆ.ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದಂತೆ ಮುನ್ನೆಚ್ಚರಿಕೆ ಕ್ರಮಕ್ಕೆ ಮುಂದಾಗಿದ್ದಾರೆ.ಇಂದು ಲಷ್ಕರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪಥಸಂಚಲನ ನಡೆಸಿ ಸಾರ್ವಜನಿಕರಿಗೆ ಅಭಯ ನೀಡಿದ್ದಾರೆ.ಚುನಾವಣಾ ಪ್ರಕ್ರಿಯೆಯಲ್ಲಿ ನಿರ್ಭಯವಾಗಿ ಪಾಲ್ಗೊಳ್ಳುವಂತೆ ಆತ್ಮಸ್ಥೈರ್ಯ ತುಂಬಿದ್ದಾರೆ.ಲಷ್ಕರ್ ಠಾಣೆ ನಿರೀಕ್ಷಕರಾದ ಸಂತೋಷ್ ರವರ ನೇತೃತ್ವದಲ್ಲಿ 250 ಕ್ಕೂ ಹೆಚ್ಚು ಪೊಲೀಸರು ರೂಟ್ ಮಾರ್ಚ್ ನಲ್ಲಿ ಭಾಗವಹಿಸಿ ಸಾರ್ವಜನಿಕರಿಗೆ ನಿಮ್ಮೊಂದಿಗೆ ನಾವಿದ್ದೇವೆ ಎಂಬ ಸಂದೇಶ ರವಾನಿಸಿದ್ದಾರೆ.ಚುನಾವಣೆ ವೇಳೆ ಅಹಿತಕರ ಘಟನೆಗೆ ಕಾರಣರಾಗುವ ಕಿಡಿಗೇಡಿಗಳಿಗೆ ಎಚ್ಚರಿಕೆಯ ಗಂಟೆ ರವಾನಿಸಿದ್ದಾರೆ.ಸಿಐಎಸ್ ಎಫ್ ಸಿಬ್ಬಂದಿಗಳು,ಮಹಿಳಾ ಪೊಲೀಸರು ಸೇರಿದಂತೆ ಇಲಾಖೆಯ ವಿವಿದ ವಿಭಾಗದ ಸಿಬ್ಬಂದಿಗಳು ಪಥಸಂಚಲನದಲ್ಲಿ ಭಾಗಿಯಾಗಿ ಸಾರ್ವಜನಿಕರಿಗೆ ಮುಕ್ತ ಚುನಾವಣೆ ನಡೆಸುವ ಸಂದೇಶ ರವಾನಿಸಿದ್ದಾರೆ…

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *