ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್: ರಾಜ್ಯ ಬಿಜೆಪಿ ವಿರುದ್ಧ ಕೆಂಡಾಮಂಡಲ

ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್: ರಾಜ್ಯ ಬಿಜೆಪಿ ವಿರುದ್ಧ ಕೆಂಡಾಮಂಡಲ

  • Politics
  • April 17, 2023
  • No Comment
  • 195

ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್: ರಾಜ್ಯ ಬಿಜೆಪಿ ವಿರುದ್ಧ ಕೆಂಡಾಮಂಡಲ.
ಬೆಂಗಳೂರು,ಏಪ್ರಿಲ್,13 ಟಿಕೆಟ್ ಕೈತಪ್ಪಿದ ಹಿನ್ನೆಲೆ ಬಿಜೆಪಿಯ ಮತ್ತೊಂದು ವಿಕೆಟ್ ಪತನವಾಗಿದ್ದು, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಇಂದು ಅಧಿಕೃತವಾಗಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದರು.
ಇಂದು ಕೆಪಿಸಿಸಿ ಕಚೇರಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರಿದರು. ಇದರೊಂದಿಗೆ 35 ವರ್ಷಕ್ಕೂ ಹೆಚ್ಚು ಕಾಲ ಬಿಜೆಪಿಯೊಂದಿಗಿನ ನಂಟು ಕಳೆದುಕೊಂಡರು.

ಕಾಂಗ್ರೆಸ್ ಸೇರ್ಪಡೆಯಾದ ಬಳಿಕ ಮಾತನಾಡಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್, ರಾಜ್ಯ ಬಿಜೆಪಿ ಕೆಲವೇ ಕೆಲವು ವ್ಯಕ್ತಿಗಳ ಹಿಡಿತದಲ್ಲಿದೆ. ರಾಜ್ಯ ಬಿಜೆಪಿ ಬೆಳವಣಿಗೆ ವರಿಷ್ಠರ ಗಮನಕ್ಕೆ ಬಂದಿಲ್ಲ ಅನ್ನಿಸುತ್ತೆ. ಕೆಲ ಬಿಜೆಪಿ ನಾಯಕರು ತಮ್ಮ ಹಿತಾಸಕ್ತಿಗಾಗಿ ಕೆಲಸ ಮಾಡುತ್ತಿದ್ದಾರೆ. ನಾನು ಮೋದಿ, ಅಮಿತ್ ಶಾ, ಜೆ.ಪಿ.ನಡ್ಡಾ ಟೀಕೆ ಮಾಡುತ್ತಿಲ್ಲ. ಲಿಂಗಾಯತ ನಾಯಕರಲ್ಲಿ ಬಿಎಸ್ವೈ ಬಿಟ್ಟರೆ ನಾನೇ ಹಿರಿಯ. ಅದಕ್ಕಾಗಿ ನನ್ನನ್ನು ಪಕ್ಷದಿಂದ ಹೊರಹಾಕಿರಬೇಕು ಎಂದು ಟೀಕಿಸಿದರು.
ರಾಜ್ಯದಲ್ಲಿ ಬಿಜೆಪಿ ಪಕ್ಷ ಕಟ್ಟಿ ಬೆಳೆಸಿದ್ದೇನೆ. ಬಿಜೆಪಿ ನನಗೆ ಎಲ್ಲಾ ಗೌರವ ಹಾಗೂ ಸ್ಥಾನಮಾನ ಕೊಟ್ಟಿದೆ. ಅದಕ್ಕೆ ಪ್ರತಿಯಾಗಿ ಬಿಜೆಪಿ ಕಟ್ಟಿ ಬೆಳೆಸುವ ಕೆಲಸ ಮಾಡಿದ್ದೇನೆ. ಪಕ್ಷ ಕೊಟ್ಟ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿಭಾಯಿಸಿದ್ದೇನೆ. ಟಿಕೆಟ್ ಇಲ್ಲ ಎಂದಾಗ ನನಗೆ ಆಘಾತವಾಯಿತು. ನಾನು ಜನಸಂಘ, ಸಂಘ ಪರಿವಾರದ ಕುಟುಂಬದಿಂದ ಬಂದ ವ್ಯಕ್ತಿ. ಕಳೆದ 6 ತಿಂಗಳಿನಿಂದ ಕಡೆಗಣಿಸಿದ್ದರು, ನನಗೆ ಗೌರವ ಕೊಡಲಿಲ್ಲ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು..

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *