ಮತದಾನದ ಸಂದರ್ಭದಲ್ಲಿ ಎನ್ ಸಿ ಸಿ ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳ ಸಹಕಾರ ಅಗತ್ಯ…ಜಿಲ್ಲಾಧಿಕಾರಿ…ಡಾ.ಕೆ ವಿ ರಾಜೇಂದ್ರ

ಮತದಾನದ ಸಂದರ್ಭದಲ್ಲಿ ಎನ್ ಸಿ ಸಿ ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳ ಸಹಕಾರ ಅಗತ್ಯ…ಜಿಲ್ಲಾಧಿಕಾರಿ…ಡಾ.ಕೆ ವಿ ರಾಜೇಂದ್ರ

ಮತದಾನದ ಸಂದರ್ಭದಲ್ಲಿ ಎನ್ ಸಿ ಸಿ ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳ ಸಹಕಾರ ಅಗತ್ಯ…ಜಿಲ್ಲಾಧಿಕಾರಿ…ಡಾ.ಕೆ ವಿ ರಾಜೇಂದ್ರ

ಮೈಸೂರು,ಏ17,Tv10 ಕನ್ನಡ
2023 ರ ಸಾರ್ವರ್ತಿಕ ಚುನಾವಣೆಯು ಮೇ 10 ರಂದು ನಡೆಯಲಿದ್ದು ಮತದಾನದಲ್ಲಿ ಮೂಲ ಸೌಕರ್ಯಗಳ ಅಗತ್ಯತೆಗಾಗಿ ಎನ್ ಸಿ ಸಿ ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳ ಸಹಕಾರ ಅಗತ್ಯವಾಗಿದ್ದು ಅವರ ಸಹಕಾರ ಪಡೆದುಕೊಳ್ಳಿ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಮುಖ್ಯ ಚುನಾವಣಾ ಅಧಿಕಾರಿಯಾದ ಡಾ. ಕೆ ವಿ ರಾಜೇಂದ್ರ ಸಲಹೆ ನೀಡಿದರು.ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಏರ್ಪಡಿಸಲಾಗಿದ್ದ ಮತದಾನಿಗಳಿಗೆ ವ್ಯವಸ್ಥೆ ಕಲ್ಪಿಸುವ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ವಯಸ್ಸಾದ ಮತದಾರರನ್ನು ಜೋಪಾನವಾಗಿ ಮತಗಟ್ಟೆಗೆ ಕರೆದು ತಂದು ಮತ ಹಾಕಿಸಲು ಸಹಾಯ ಮಾಡುವ ಹಾಗೂ ಕೆಲ ಮತದಾರರು ಮತಗಟ್ಟೆಯವರೆಗೂ ಬರಲು ತೊಂದರೆ ಇದ್ದಲ್ಲಿ ಅಂತವರನ್ನು ವ್ಹೀಲ್ ಚೇರ್ ಮುಖಾಂತರ ಮತಗಟ್ಟೆಗೆ ಕರೆದು ತಂದು ಮತ ಹಾಕಿಸುವ ಕಾರ್ಯಕ್ಕೆ ಈ ಎನ್.ಸಿ.ಸಿ ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಧಿಗಳು ಸಹಕರಿಸುವಂತೆ ಅಧಿಕಾರಿಗಳು ಅಗತ್ಯ ಕ್ರಮ ವಹಿಸಬೇಕು ಎಂದು ತಿಳಿಸಿದರು.
ಮತಗಟ್ಟೆಗಳಲ್ಲಿ ಪುರುಷ ಹಾಗೂ ಮಹಿಳೆಯ ಸರದಿ ಸಾಲುಗಳ ನಿರ್ವಹಣೆಗೂ ಕೂಡ ಎನ್ ಸಿಸಿ ವಿದ್ಯಾರ್ಧಿಗಳಿಗೆ ಶಿಕ್ಷಕರು ತರಬೇತಿಯನ್ನು ನೀಡಬೇಕು. ಮಕ್ಕಳನ್ನು ಈ ರೀತಿಯ ಕಾರ್ಯಗಳಿಗೆ ಬಳಸಿಕೊಳ್ಳುವುದರಿಂದ ಅವರಿಗೆ ಪ್ರಜಾಪ್ರಭುತ್ವದ ಬಗ್ಗೆ ಜ್ಞಾನ ಹೆಚ್ಚಾಗುತ್ತದೆ ಎಂದು ಅವರು ತಿಳಿಸಿದರು.
ಮತದಾನಕ್ಕೆ ಮೂರು ದಿನ ಬಾಕಿ ಇರುವ ಸಂದರ್ಭದಲ್ಲಿ ಸೀರೆ ಹಂಚುವುದು ಹಣ ಹಂಚುವುದು ಮತದಾರರಿಗೆ ಆಮಿಷ ಒಡ್ಡುವುದು ಹಾಗೂ ಇನ್ನಿತರ ಅನೈತಿಕ ಚಟುವಟಿಕೆಗಳು ನಡೆಯುವುದು ಹೆಚ್ಚಾಗಿರುವುದರಿಂದ ಅಧಿಕಾರಿಗಳು ಹಾಗೂ ಸ್ಥಳೀಯವಾಗಿರುವ ಶಿಕ್ಷಕರು ದಕ್ಷತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಗಾಯತ್ರಿ , ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶರಾದ ರಾಮಚಂದ್ರರಾಜೇ ಅರಸ್ ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು…

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *