ಕೆ.ಆರ್‌. ಕ್ಷೇತ್ರದಲ್ಲಿ ಯುವ ಮತದಾರರನ್ನು ಸಂಘಟಿಸಿ…ಬಿಜೆಪಿ ಅಭ್ಯರ್ಥಿ ಶ್ರೀವತ್ಸ ಕರೆ…

ಕೆ.ಆರ್‌. ಕ್ಷೇತ್ರದಲ್ಲಿ ಯುವ ಮತದಾರರನ್ನು ಸಂಘಟಿಸಿ…ಬಿಜೆಪಿ ಅಭ್ಯರ್ಥಿ ಶ್ರೀವತ್ಸ ಕರೆ…

ಮೈಸೂರು,ಏ18,Tv10 ಕನ್ನಡ
ಏಪ್ರಿಲ್ 20 ರಂದು ಕೆ.ಆರ್.ಕ್ಷೇತ್ರದ ಅಭ್ಯರ್ಥಿ ಶ್ರೀವತ್ಸ ನಾಮಪತ್ರ ಸಲ್ಲಿಸಲಿದ್ದಾರೆ.ನಾಮಪತ್ರ ಸಲ್ಲಿಕೆಗೂ ಮುನ್ನ ಯುವಮತದಾರರನ್ನ ಸಂಘಟಿಸುವಂತೆ ಕರೆ ನೀಡಿದ್ದಾರೆ.ಬಿಜೆಪಿ ಕಚೇರಿಯಲ್ಲಿ ಯುವಕಾರ್ಯಕರ್ತರನ್ನ ಉದ್ದೇಶಿಸಿ ಮಾತನಾಡಿದ ಶ್ರೀವತ್ಸ ತಮ್ಮ ನಾಮಪತ್ರ ಸಲ್ಲಿಕೆ ಕಾರ್ಯಕ್ರಮಕ್ಕೂ ಮುನ್ನ ನಡೆಯುವ ಮೆರವಣಿಗೆಯಲ್ಲಿ ಕೃಷ್ಣರಾಜ ಕ್ಷೇತ್ರದ ಯುವ ಮತದಾರು ಹಾಗೂ ಹೊಸದಾಗಿ ಮತ ಹಾಕುವವರನ್ನು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಂಘಟನೆ ಮಾಡಬೇಕೆಂದು ಮನವಿ ಮಾಡಿದರು.
ಯುವ ಮತದಾರರು ಮೆರವಣಿಗೆಯಲ್ಲಿ ಭಾಗವಹಿಸುವಂತೆ ಪ್ರೇರೇಪಿಸುವ ಕುರಿತು ಸೂಚನೆ ನೀಡಲು ಈ ಸಭೆ ಕರೆಯಲಾಗಿತ್ತು. ಹೊಸ ಮತದಾರರಿಗೆ ಈಗ 18 ತುಂಬಿರುತ್ತದೆ. ಹೀಗಾಗಿ ಐದು ವರ್ಷಗಳ ಹಿಂದೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರದ ದುರಾಡಳಿತದ ತಿಳಿವಳಿಕೆ ಇರುವುದಿಲ್ಲ. ಅವರಿಗೆ ಅದನ್ನು ಮನವರಿಗೆ ಮಾಡಿಕೊಟ್ಟು ಬಿಜೆಪಿಯ ಕಾರ್ಯಕ್ರಮಗಳು ಹಾಗೂ ಆಶಯಗಳನ್ನು ತಿಳಿಸಿ ಪಕ್ಷ ಅಧಿಕಾರಕ್ಕೆ ತರಲು ಸಹಕರಿಸುವಂತೆ ಮನವಿ ಮಾಡಲು ಕಾರ್ಯಕ್ರಮಕ್ಕೆ ಯುವಕರನ್ನು ಕರೆತನ್ನಿ ಎಂದು ಸಲಹೆ ನೀಡಿದರು.

ಸಂಸದರಾದ ಪ್ರತಾಪಸಿಂಹ ಮಾತನಾಡಿ, ಮೈಸೂರಿನಲ್ಲಿ ಕೃಷ್ಣರಾಜ ಕ್ಷೇತ್ರದಲ್ಲಿ ಶ್ರೀವತ್ಸ ಅವರಿಗೆ ಟಿಕೆಟ್ ನೀಡಿರುವುದರಿಂದ ಹೊಸಬರಿಗೆ ಅವಕಾಶ ದೊರೆತಂತಾಗಿದೆ. ನಾನು ಚುನಾವಣೆಗೆ ಸ್ಪರ್ಧಿಸಿದಾಗ ಈ ಭಾಗದಲ್ಲಿ ಕಾಂಗ್ರೆಸ್ ಪ್ರಾಬಲ್ಯವಿದ್ದರೂ ನನ್ನನ್ನು 31,000 ಮತಗಳ ಅಂತರದಲ್ಲಿ ಕ್ಷೇತ್ರದ ಜನತೆ ಗೆಲ್ಲಿಸಿದ್ದೀರಿ. ಇದೇ ರೀತಿ ಶ್ರೀವತ್ಸ ಅವರನ್ನು 30,000 ಮತಗಳ ಅಂತರದಿಂದ ಗೆಲ್ಲಿಸಬೇಕೆಂದು ಮನವಿ ಮಾಡಿದರು.
ಯಾರಿಗೂ ಸ್ಥಾನ ಮಾನ ಶಾಶ್ವತವಲ್ಲ. ನಾನು 30 ರಿಂದ 40 ವರ್ಷ ರಾಜಕಾರಣ ಮಾಡಿದೆ ಎಂಬುದು ಶಾಶ್ವತವಲ್ಲ. ಈ ಅವಧಿಯಲ್ಲಿ ಎಷ್ಟು ಕೆಲಸ ಮಾಡಿದ್ದೇವೆ ಎಂಬುದು ಮುಖ್ಯ. ನಾವು ಸತ್ತ ನಂತರವೂ ನೆನಪಿಸಿಕೊಳ್ಳುವ ಕೆಲಸ ಮಾಡಬೇಕು. ಹೊಸಬರಿಗೆ ಅವಕಾಶ ನೀಡಬೇಕೆಂದು ಪಕ್ಷವು ತೆಗೆದುಕೊಂಡ ನಿರ್ಧಾರಗಳಿಂದ ಯಾರೂ ವಿಚಲಿತರಾಗಬಾರದು ಎಂದರು.

ಸಭೆಯಲ್ಲಿ ವಿಭಾಗ ಪ್ರಭಾರಿ ಮೈ.ವಿ. ರವಿಶಂಕರ್, ರಾಜ್ಯ ಯುವಮೋರ್ಚಾ ಉಪಾಧ್ಯಕ್ಷ ಜಯಶಂಕರ್, ಕೆ.ಎಂ. ನಿಶಾಂತ್, ನಗರ ಪ್ರಧಾನ ಕಾರ್ಯದರ್ಶಿ ಸೋಮಸುಂದರ್, ವಾಣೀಶ್, ಹರ್ಷ, ಕೀರ್ತಿ, ಧನುಷ್, ಪ್ರಜೀಶ್, ಭರತ್, ಸಚಿನ್, ವಿನಯ್ ಹಾಗು ನೂರಾರು ಯುವಕರು ಉಪಸ್ಥಿತರಿದ್ದರು…

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *