ಹಣದ ಹೊಳೆ ಹರಿಯುತ್ತಿರುವ ಆರೋಪ…ಹುಣಸೂರಿನಲ್ಲಿ ತಪಾಸಣೆ ಚುರುಕು…

ಹಣದ ಹೊಳೆ ಹರಿಯುತ್ತಿರುವ ಆರೋಪ…ಹುಣಸೂರಿನಲ್ಲಿ ತಪಾಸಣೆ ಚುರುಕು…

ಹುಣಸೂರು,ಏ21,Tv10 ಕನ್ನಡ
ಹುಣಸೂರು ವಿಧಾನಸಭಾ ಕ್ಷೇತ್ರ ಹೈ ವೋಲ್ಟೇಜ್ ಕ್ಷೇತ್ರವಾಗಿ ಪರಿಣಮಿಸುತ್ತಿದೆ.ಜೆಡಿಎಸ್ ಹಾಗೂ ಕಾಂಗ್ರೆಸ್ ನಡುವೆ ನೇರ ಹಣಾಹಣಿ ನಡೆಯುತ್ತಿದೆ.ತಾನೇನೂ ಹಿಂದಿಲ್ಲ ಎಂಬಂತೆ ಬಿಜೆಪಿ ಸಹ ಗೆಲುವು ಸಾಧಿಸಬೇಕೆಂಬ ಹುಮ್ಮಸ್ಸಿನಲ್ಲಿ ತನ್ನ ಪ್ರಯತ್ನ ನಡೆಸುತ್ತಿದೆ.ಈ ಮಧ್ಯೆ ಕ್ಷೇತ್ರದಲ್ಲಿ ಹಣದ ಹೊಳೆ ಹರಿಯುತ್ತಿರುವ ಬಗ್ಗೆ ಸಾಕಷ್ಟು ಆರೋಪಗಳೂ ಸಹ ಕೇಳಿ ಬರುತ್ತಿದೆ.ಈ ಹಿನ್ನಲೆ ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆ ಚುರುಕುಗೊಳಿಸಲಾಗುತ್ತಿದೆ.ಚುನಾವಣಾಧಿಕಾರಿಗಳು ರಾತ್ರಿ ಕಾರ್ಯಾಚರಣೆಯನ್ನ ಸದ್ದಿಲ್ಲದೆ ಕೈಗೊಳ್ಳುತ್ತಿದ್ದಾರೆ.ಮಾಹಿತಿ ಬಂದ ಕಡೆ ಧಿಢೀರ್ ದಾಳಿ ನಡೆಸುತ್ತಿದ್ದಾರೆ.ನಿನ್ನೆ ತಡರಾತ್ರಿ ಹೊಸರಾಮನಹಳ್ಳಿ ಬಳಿ ಹಣ ಹಂಚಲಾಗುತ್ತಿದೆ ಎಂಬ ಮಾಹಿತಿ ಬಂದೊಡನೆ ಚುನಾವಣಾಧಿಕಾರಿ ಮನು,ತಹಸೀಲ್ದಾರ್ ಅಶೋಕ್ ನೇತೃತ್ವದ ತಂಡ ಮಧ್ಯರಾತ್ರಿಯಲ್ಲಿ ಹಾಜರಾಗಿದ್ದಾರೆ.ಆದರೆ ಬಂದದಾರಿಗೆ ಸುಂಕವಿಲ್ಲವೆಂಬಂತೆ ಬರಿಗೈಲಿ ಹಿಂದಿರುಗಿದ್ದಾರೆ.ಆದರೂ ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆ ಬಿಗಿಗೊಳಿಸಲಾಗಿದೆ.ಮನುಗನಹಳ್ಳಿ ಸೇರಿದಂತೆ ಎಲ್ಲಾ ಚೆಕ್ ಪೋಸ್ಟ್ ಗಳಲ್ಲೂ ತಪಾಸಣೆ ಬಿಗಿಗೊಳಿಸಿದ್ದಾರೆ…

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *