ಹೈಕಮಾಂಡ್ ಗೆ ಎಟಿಎಂ ಆಗಲು ಕಾಂಗ್ರೆಸ್ ರಾಜ್ಯದಲ್ಲಿ ಹುನ್ನಾರ ನಡೆಸುತ್ತಿದೆ…ಬಿ.ವೈ.ವಿಜಯೇಂದ್ರ…

ಹೈಕಮಾಂಡ್ ಗೆ ಎಟಿಎಂ ಆಗಲು ಕಾಂಗ್ರೆಸ್ ರಾಜ್ಯದಲ್ಲಿ ಹುನ್ನಾರ ನಡೆಸುತ್ತಿದೆ…ಬಿ.ವೈ.ವಿಜಯೇಂದ್ರ…

ಮೈಸೂರು,ಏ22,Tv10 ಕನ್ನಡ
ರಾಜ್ಯದಲ್ಲಿ ಕಾಂಗ್ರೆಸ್ ಗೆದ್ದು ಹೈಕಮಾಂಡ್ ಗೆ ಎಟಿಎಂ ಆಗಲು ಹುನ್ನಾರ ನಡೆಸುತ್ತಿದೆ ಎಂದು ಶಿಕಾರಿಪುರ ಬಿಜೆಪಿ ಅಭ್ಯರ್ಥಿ ಬಿ.ವೈ.ವಿಜಯೇಂದ್ರ ಮೈಸೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಟೀಕಿಸಿದ್ದಾರೆ.
ಕಾಂಗ್ರೆಸ್ ದೇಶದಾದ್ಯಂತ ದಿವಾಳಿ ಆಗಿದೆ. ಈ ಬಾರಿಯ ಚುನಾವಣೆಯಲ್ಲಿ ಆಡಳಿತ ಹಿಡಿದು ಹೈ ಕಮಾಂಡ್ ಗೆ ಎಟಿಎಂ ಆಗಲು ಹುನ್ನಾರ ನಡೆಸುತ್ತಿದೆ. ಇಂತಹ ಬೆಳವಣಿಗೆಗರ ರಾಜ್ಯದ ಜನತೆ ಅವಕಾಶ ನೀಡುವುದಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕಾಂಗ್ರೆಸ್ ನ ಹುನ್ನಾರ ತಿಳಿದಿರುವ ರಾಜ್ಯದ ಮತದಾರರು ಬಿಜೆಪಿಯನ್ನು ಚುನಾಯಿಸಲಿದ್ದಾರೆಂದು ತಿಳಿಸಿದರು.
ಈ ಚುನಾವಣೆಯಲ್ಲಿ ಅತಂತ್ರ ಸ್ಥಿತಿ ಬಂದರೆ ನಮ್ಮ ಪಕ್ಷ ಅಧಿಕಾರಕ್ಕೆ ಬರಲಿದೆ ಎಂಬ ಕನಸನ್ನು ಜೆಡಿಎಸ್ ಕಾಣುತ್ತಿದೆ.
ಇವೆಲ್ಲವನ್ನು ಅರಿತಿರುವ ರಾಜ್ಯದ ಮತದಾರ ಈ ಸಾರಿ ಡಬ್ಬಲ್ ಇಂಜಿನ್ ಸರ್ಕಾರ ಬಿಜೆಪಿಯನ್ನು ಸಂಪೂರ್ಣವಾಗಿ ಬೆಂಬಲಿಸಿ ಗೆಲ್ಲಿಸಲಿದ್ದಾರೆಂಬ ವಿಶ್ವಾಸ ತಮಗಿದೆ ಎಂದು ಹೇಳಿದರು.
ಜಗದೀಶ್ ಶೆಟ್ಟರ್ ಕಾಂಗ್ರೆಸ್ ಪಕ್ಷ ಸೇರಿರುವುದರಿಂದ ಬಿಜೆಪಿ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದರು.
ವರುಣಾದಲ್ಲಿಯೂ ನಮ್ಮ ಪಕ್ಷದ ಅಭ್ಯರ್ಥಿ ವಿ. ಸೋಮಣ್ಣ ಅವರು ಸಿದ್ದರಾಮಯ್ಯ ವಿರುದ್ಧ ಜಯ ಗಳಿಸಲಿದ್ದಾರೆಂದು ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿದರು. ನಮ್ಮ ತಂದೆ ಯಡಿಯೂರಪ್ಪನವರನ್ನು ರಾಜಕೀಯವಾಗಿ ಮುಗಿಸಲು ಸಾಧ್ಯವಿಲ್ಲ. ಅವರೊಂದು ಶಕ್ತಿ ಎಂದು ಟೀಕಾಕಾರರಿಗೆ ಉತ್ತರ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ರಾಜೇಂದ್ರ, ಕೆಆರ್ ಕ್ಷೇತ್ರದ ಅಭ್ಯರ್ಥಿ ಶ್ರೀವತ್ಸ, ಮೇಯರ್ ಶಿವಕುಮಾರ್ , ನಗರ ಕಾರ್ಯಾಧ್ಯಕ್ಷ ಗಿರಿಧರ್ ಹಾಗೂ ವಕ್ತಾರ ಮೋಹನ್ ಉಪಸ್ಥಿತರಿದ್ದರು…

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *