ಕಾಂಗ್ರೆಸ್ ಪಕ್ಷ ಈಗ ಮದ್ದೂರು ಸೆಟಲ್ ಟ್ರೈನ್ ನಂತಾಗಿದೆ… ಸಂಸದ ಶ್ರೀನಿವಾಸ ಪ್ರಸಾದ್ ವ್ಯಂಗ್ಯ…

ಕಾಂಗ್ರೆಸ್ ಪಕ್ಷ ಈಗ ಮದ್ದೂರು ಸೆಟಲ್ ಟ್ರೈನ್ ನಂತಾಗಿದೆ… ಸಂಸದ ಶ್ರೀನಿವಾಸ ಪ್ರಸಾದ್ ವ್ಯಂಗ್ಯ…

ಮೈಸೂರಿನಲ್ಲಿ,ಏ27,Tv10 ಕನ್ನಡ
ಕಾಂಗ್ರೆಸ್ ಪಕ್ಷ ಮದ್ದೂರು ಸೆಟಲ್ ಟ್ರೈನ್ ನಂತಾಗಿದೆ ಎಂದು ಸಂಸದ ಶ್ರೀನಿವಾಸ್ ಪ್ರಸಾದ್ ವ್ಯಂಗ್ಯವಾಡಿದ್ದಾರೆ.ಮೈಸೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡದ ಶ್ರೀನಿವಾಸ್ ಪ್ರಸಾದ್ ಮದ್ದೂರು ಸೆಟಲ್ ಟ್ರೈನ್ ಎಂದರೇ ಏನು ಗೊತ್ತಾ, ಅದು ಮದ್ದೂರು ಬಿಟ್ಟು ಯಾವಾಗ ಬೆಂಗಳೂರು ಸೇರುತ್ತೆ ಎಂಬುದೇ ಗೊತ್ತಾಗಲ್ಲ ಅದೇ ಪರಿಸ್ಥಿಯಲ್ಲಿ ಇಂದು ಕಾಂಗ್ರೆಸ್ ಇದೆ ಆದರೂ ಅಧಿಕಾರದ ಕನಸು ಕಾಣುತ್ತಿದ್ದಾರೆ ಎಂದು ಟೀಕಿಸಿದರು.
ವರುಣಾ ಕ್ಷೇತ್ರದಲ್ಲಿ ಒಂದು ಲಕ್ಷ ಮತಗಳ ಅಂತರದಲ್ಲಿ ಗೆಲ್ಲುವುದಾಗಿ ಸಿದ್ದರಾಮಯ್ಯ ಹೇಳಿದ್ದಾರೆ.ಇದು ಸಾಧ್ಯವಾ ಎಂದು ಪ್ರಶ್ನಿಸಿದರು.ಒಬ್ಬರು 36 ಸಾವಿರ ಮತಗಳ ಅಂತರದಿಂದ ಇನ್ನೊಬ್ಬ ಮಹಾ ಪುರುಷ 29 ಸಾವಿರ ಮತಗಳ ಅಂತರದಿಂದ ಸೋತರು ಎಂದು ಸಿದ್ದು ಹಾಗೂ ಮಹದೇವಪ್ಪ ಅವರ ಹೆಸರೇಳದೆ ಶ್ರೀನಿವಾಸ್ ಪ್ರಸಾದ್ ಟೀಕಿಸಿದರು.
ಸಿದ್ದರಾಮಯ್ಯ ಒಬ್ಬ ಮಾನಸಿಕ ರೋಗಿ, ದಡ್ಡ ಎಂದು ಕಿಡಿಕಾರಿದರು.
ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕರಾಗಿದ್ದ ಸಿದ್ದರಾಮಯ್ಯ ಮಾತನಾಡುವ ಮೊದಲು ಸ್ವಲ್ಪ ಯೋಚನೆ ಮಾಡಿ ಮಾತನಾಡಬೇಕು.
ಮೈಸೂರಿನ 11 ಕ್ಷೇತ್ರಗಳಲ್ಲಿ ನಾವು ಈ ಬಾರಿ ಹೆಚ್ಚಿನ ಸ್ಥಾನ ಗೆಲ್ಲುವ ವಿಶ್ವಾಸವಿದೆ.
ಡಿಕೆಶಿ ರಕ್ತದಲ್ಲಿ ಬರೆದು ಕೊಡುತ್ತೇನೆ ಎನ್ನುತ್ತಾರೆ, ಒಂದು ರಾಷ್ಟ್ರೀಯ ಪಕ್ಷದ ರಾಜ್ಯದ ಅದ್ಯಕ್ಷರಾಗಿ ಮಾತನಾಡುವ ರೀತಿ ಇದೇನಾ ಎಂದು ಪ್ರಶ್ನಿಸಿದರು.ಈಗಾಗಲೇ ಡಿಕೆಶಿ ಮೇಲೆ ಇಡಿ ಕತ್ತಿ ತೂಗಾಡುತ್ತಿದೆ. ಯಾವಾಗ ಎಲ್ಲಿ ಏನಾಗುತ್ತೋ ಗೊತ್ತಿಲ್ಲ. ಆರೂವರೆ ಸಾವಿರ ಕೋಟಿ ಒಡೆಯ ಮುಖ್ಯಮಂತ್ರಿ ಆಗಿ ಏನು ಆಡಳಿತ ಕೊಡುತ್ತಾರೆ ಎಂದು ಪ್ರಶ್ನಿಸಿದರು.
ಬಸವರಾಜ್ ಬೊಮ್ಮಾಯಿ ಉತ್ತಮವಾಗಿ ಆಡಳಿತ ಕೊಟ್ಟಿದ್ದಾರೆ ಯಾವುದೇ ಸಮಸ್ಯೆಗಳು ಬಂದರು ಕೂಲ್ ಆಗಿ ಪರಿಹಾರ ನೀಡುತ್ತಾ ಅತ್ಯುತ್ತಮ ಬಜೆಟ್ ಮಂಡನೆ ಮಾಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು…

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *