ಏ30 ರಂದು ಮೈಸೂರಿನಲ್ಲಿ ಪ್ರಧಾನಿ ನ.ಮೋ.ರೋಡ್ ಶೋ…ಮಾಹಿತಿ ನೀಡಿದ ಶಾಸಕ ಎಸ್.ಎ.ರಾಮದಾಸ್…

ಏ30 ರಂದು ಮೈಸೂರಿನಲ್ಲಿ ಪ್ರಧಾನಿ ನ.ಮೋ.ರೋಡ್ ಶೋ…ಮಾಹಿತಿ ನೀಡಿದ ಶಾಸಕ ಎಸ್.ಎ.ರಾಮದಾಸ್…

ಮೈಸೂರು, ಏ.28,Tv10 ಕನ್ನಡ ಚುನಾವಣೆ ಹಿನ್ನಲೆ ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 30ರಂದು ಮೈಸೂರಿನಲ್ಲಿ ರೋಡ್ ಶೋ ನಡೆಸಲಿದ್ದಾರೆ.ಮೋಧಿ ಕಾರ್ಯಕ್ರಮದ ಕುರಿತಂತೆ ಶಾಸಕ ಎಸ್.ಎ.ರಾಮದಾಸ್ ಮಾಹಿತಿ ನೀಡಿದ್ದಾರೆ.ಸಂಜೆ ಮೋಧಿ ರವರು ಮೈಸೂರಿಗೆ ಆಗಮಿಸಲಿದ್ದು, ಅವರನ್ನು ಮೈಸೂರು ಶೈಲಿಯಲ್ಲಿ ಸಾಂಪ್ರದಾಯಿಕವಾಗಿ ಬರಮಾಡಿಕೊಳ್ಳಲಾಗುವುದು.ಮೈಸೂರಿನ ಸಂಪ್ರದಾಯದಂತೆ ನಾದ ಸ್ವರ, ಪೂರ್ಣಕುಂಭದೊಂದಿಗೆ ಪ್ರಧಾನಿ ಮೋದಿಯವರನ್ನ ಅದ್ದೂರಿಯಾಗಿ ಸ್ವಾಗತ ಮಾಡಲಾಗುತ್ತದೆ. ಜೊತೆಗೆ ದಸರಾ ಸಾಂಪ್ರದಾಯಿಕ ಮಾದರಿಯಲ್ಲಿ ಮೈಸೂರಿನ ಸಂಪ್ರದಾಯದ ಉಡುಗೆ ತೊಡುಗೆಗಳ ಮೂಲಕ ಅವರನ್ನ ಸ್ವಾಗತಿಸಿ, ಮೋದಿ ಅವರಿಗೆ ಮೈಸೂರು ಸಿಲ್ಕ್ ವಸ್ತ್ರ, ಮೈಸೂರು ವಿಳ್ಳೆದೆಲೆ, ಗೊಂಬೆ, ಗಂಧದ ಕಡ್ಡಿ ಸೇರಿದಂತೆ ಮೈಸೂರಿನ ಹಲವು ಪದಾರ್ಥಗಳನ್ನು ನೀಡಲಾಗುವುದೆಂದರು.
ಭಾನುವಾರ ಸಂಜೆ 5 ಗಂಟೆ ಸುಮಾರಿಗೆ ಪ್ರಧಾನಿ ಮೋದಿ ಮೈಸೂರಿನ ಗನ್ ಹೌಸ್ ಸರ್ಕಲ್ ನಿಂದ ರೋಡ್ ಶೋ ಆರಂಭಿಸಲಿದ್ದಾರೆ. ಗನ್ ಹೌಸ್ ನಿಂದ ಪಾಠಶಾಲೆ, ಕೆ.ಆರ್ ಸರ್ಕಲ್, ಸಯ್ಯಾಜಿರಾವ್ ರಸ್ತೆ ಮೂಲಕ ಮಿಲೇನಿಯಂ ಸರ್ಕಲ್ ವರೆಗೂ ರೋಡ್ ಶೋ ನಡೆಯಲಿದೆ ಎಂದು ತಿಳಿಸಿದರು.
ಮಾರ್ಗ ಮಧ್ಯೆ ಮೋದಿಯವರ ಜೀವನದ ಯಶೋಗಾಥೆ ಸಾರುವ ಕಟೌಟ್ ಗಳನ್ನ ಅಳವಡಿಸಲಾಗುತ್ತದೆ. ಈ ರಾಲಿ ಕೇವಲ ರೋಡ್ ಶೋ ಮಾಡಿ ಹೋಗುವಂತದ್ದಲ್ಲ. ಅವರು ನಡೆದು ಬಂದ ಹಾದಿಯನ್ನೂ ತೋರಿಸುವ ಪ್ರಯತ್ನ ನಡೆಯುತ್ತದೆ ಎಂದರು.
ಸೀನಿಯರ್ ಸಿಟಿಜನ್ ಗೂ ಕೂಡ ಕುಳಿತು ನೋಡಲು ಕುರ್ಚಿಗಳ ವ್ಯವಸ್ಥೆ ಮಾಡಲಾಗುತ್ತದೆ. ಐದು ಸ್ಥಳಗಳಲ್ಲಿ ಸೀನಿಯರ್ ಸಿಟಿಜನ್ಸ್ ಕೂರಲು ವ್ಯವಸ್ಥೆ ಮಾಡಲಾಗುತ್ತದೆ.
ಒಟ್ಟು 4 ಕಿ.ಮೀ ರೋಡ್ ಶೋ ನಡೆಯಲಿದ್ದು, ಒಂದು ಲಕ್ಷಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆ ಇದೆ ಎಂದು ಶಾಸಕ ರಾಮದಾಸ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಸಂಸದ ಪ್ರತಾಪ್ ಸಿಂಹ, ಅಭ್ಯರ್ಥಿ ಶ್ರೀವತ್ಸ, ಮುಖಂಡರುಗಲಾದ ರವಿಶಂಕರ್, ಯಶಸ್ವಿನಿ ಸೋಮಶೇಖರ್, ಹೆಚ್. ವಿ. ರಾಜೀವ್ ಉಪಸ್ಥಿತರಿದ್ದರು…

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *