ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವದ ಹಬ್ಬ ಆಚರಿಸಿ…ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಕರೆ…

ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವದ ಹಬ್ಬ ಆಚರಿಸಿ…ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಕರೆ…

ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವದ ಹಬ್ಬ ಆಚರಿಸಿ…ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಕರೆ…

ಮೈಸೂರು,ಮೇ5,Tv10 ಕನ್ನಡ
ಮೇ 10 ರಂದು ನಡೆಯಲಿರುವ ಸಾರ್ವತ್ರಿಕ ವಿಧಾನಸಭೆ ಚುನಾವಣೆಯಲ್ಲಿ ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವದ ಹಬ್ಬ ಆಚರಿಸಿ ಎಂದು ಜಿಲ್ಲಾಧಿಕಾರಿಗಳಾದ ಡಾ ಕೆ.ವಿ.ರಾಜೇಂದ್ರ ಅವರು ಕರೆ ನೀಡಿದ್ದಾರೆ.
ಇಂದು ನಗರದಲ್ಲಿನ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿ ಸ್ವೀಪ್ ವತಿಯಿಂದ ಆಯೋಜಿಸಲಾಗಿದ್ದ ವಿಂಟೇಜ್ ಕಾರು ಮತ್ತು ಟಾಂಗಾ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಚುನಾವಣಾ ಅಕ್ರಮಗಳನ್ನು ತಡೆಯುವ ನಿಟ್ಟಿನಲ್ಲಿ ಈಗಾಗಲೇ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದ್ದು ಮತದಾರರು ಯಾವುದೇ ಆಮಿಷಗಳಿಗೆ ಒಳಗಾಗದೆ ನೈತಿಕ ಮತದಾನ ಮಾಡುವ ಮೂಲಕ ದೇಶದ ಭವಿಷ್ಯವನ್ನು ಕಾಪಾಡಿಕೊಳ್ಳಬೇಕು ಎಂದು ತಿಳಿಸಿದರು.
ಚುನಾವಣೆಯಂದು ಸಾರ್ವತ್ರಿಕ ರಜೆ ಇರುವ ಕಾರಣ ಅಂದು ಮನೆಯಲ್ಲಿಯೇ ಕೂರದೆ ಪ್ರತಿಯೊಬ್ಬರೂ ಮತದಾನದಲ್ಲಿ ಪಾಲ್ಗೊಳ್ಳಬೇಕು ಹಾಗೂ 80 ವರ್ಷ ಮೇಲ್ಪಟ್ಟವರಿಗೆ ಮತದಾನ ಪ್ರಕ್ರಿಯೆ ಈಗಾಗಲೇ ಆರಂಭಗೊಂಡಿದ್ದು ವಯಸ್ಸಾದವರು ಮತದಾರರು ಮತಗಟ್ಟೆಗೆ ಬರಲಾಗದಿದ್ದರೆ ಅಂಥವರಿಗೆ ವಾಹನದ ವ್ಯವಸ್ಥೆ ಬೇಕಿದ್ದಲ್ಲಿ ಬೂತ್ ಮಟ್ಟದ ಅಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ತಿಳಿಸಿದರು.
ರಾಜ್ಯದಲ್ಲಿ ಮೈಸೂರು ತನ್ನ ಸಾಂಸ್ಕೃತಿಕತೆಯಿಂದ ಹೆಸರುವಾಸಿಯಾಗಿದ್ದು, ಇಂದಿಗೂ ಹೆಚ್ಚಾಗಿ ಟಾಂಗಾ ಗಾಡಿಗಳ ಬಳಕೆ ನಗರದಲ್ಲಿದೆ. ವಿಟೇಂಜ್ ಕಾರು ಗಳ ಪ್ರಾಮುಖ್ಯತೆ ಹಾಗೂ ಪರಿಸರಕ್ಕೆ ಹಾನಿಯಾಗದ ರೀತಿ ಅವುಗಳ ಮರುಬಳಕೆ ಬಗ್ಗೆ ಅರಿವನ್ನ ಹೊಂದಿರಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ನಗರ ಪೊಲೀಸ್ ಆಯುಕ್ತರಾದ ರಮೇಶ್ ಬಾನೋತ್ , ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಕೆ.ಎಂ.ಗಾಯಿತ್ರಿ ,ನಗರ ಪಾಲಿಕೆ ಆಯುಕ್ತರಾದ ಲಕ್ಷ್ಮಿಕಾಂತ ರೆಡ್ಡಿ, ಪ್ರಾಚ್ಯ ವಸ್ತು ಸಂಗ್ರಹಾಲಯ ಇಲಾಖೆಯ ಆಯುಕ್ತರಾದ ದೇವರಾಜು ಹಾಗೂ ಅಂತರಾಷ್ಟ್ರೀಯ ಯೋಗಪಟುವಾದ ಖುಷಿ ಅವರು ಸೇರಿದಂತೆ ಇತರರು ಉಪಸ್ಥಿತರಿದ್ದರು…

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *