ಬಿಜೆಪಿ ಅಭ್ಯರ್ಥಿ ಶ್ರೀವತ್ಸ ಪರ ಮತಯಾಚಿಸಿದ ನಟ ವಸಿಷ್ಠಿಸಿಂಹ ದಂಪತಿ…

ಬಿಜೆಪಿ ಅಭ್ಯರ್ಥಿ ಶ್ರೀವತ್ಸ ಪರ ಮತಯಾಚಿಸಿದ ನಟ ವಸಿಷ್ಠಿಸಿಂಹ ದಂಪತಿ…

ಮೈಸೂರು,ಮೇ7,Tv10 ಕನ್ನಡ
ಕೃಷ್ಣರಾಜ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀವತ್ಸ ಪರ ಚಿತ್ರನಟರಾದ ವಸಿಷ್ಠ ಸಿಂಹ ಮತ್ತು ಹರಿಪ್ರಿಯಾ ದಂಪತಿ ಮೈಸೂರಿನಲ್ಲಿ ಮತಯಾಚಿಸಿದರು.
ಮೈಸೂರಿನ ಚಾಮುಂಡಿಪುರಂ ಬಡಾವಣೆಯಲ್ಲಿರುವ ಅವರ ನಿವಾಸಕ್ಕೆ ಆಗಮಿಸಿದ್ದ ವೇಳೆ ದಂಪತಿ ಸಮೇತ ಮತಯಾಚಿಸಿದರು.
ಇದೇ ಸಂಧರ್ಭದಲ್ಲಿ ವಸಿಷ್ಠ ಸಿಂಹ ರವರು ಮಾತನಾಡಿ ಪ್ರಜಾಪ್ರಭುತ್ವದಲ್ಲಿ ಮತದಾನ ಪ್ರತಿಯೊಬ್ಬ ಭಾರತೀಯನ ಹಕ್ಕು, 18ವರ್ಷದ ಮೇಲ್ಪಟ್ಟ ಯುವಸಮೂಹ ಮೊದಲಭಾರಿ ಮತಚಾಲಾಯಿಸಲು ತೋರುತ್ತಿರುವ ಉತ್ಸಾಹ ನೋಡಿದರೇ ಖುಷಿಯಾಗುತ್ತದೆ, ಹಾಗೆಯೇ ಮನೆಮಂದಿಯೆಲ್ಲರೂ ಮತದಾನದಲ್ಲಿ ಭಾಗವಹಿಸುವಂತೆ ಜನಸಾಮನ್ಯಾರು ಮುಂದಾಗಬೇಕು, 80ವರ್ಷ ಮೇಲ್ಪಟ್ಟವರು ಮನೆಯಲ್ಲಿಯೇ ಮತಚಾಲಾಯಿಸುವ ವ್ಯವಸ್ಥೆ ಜಾರಿಗೆ ತಂದಿರುವ ಚುನಾವಣಾ ಆಯೋಗ ಶ್ಲಾಘನೀಯವಾದ ಕೆಲಸ ಕೈಗೊಂಡಿದೆ, ನಾಗರೀಕರು ಇದರ ಸದುಪಯೋಗ ಪಡಿಸಿಕೊಳ್ಳಬೇಕಿದೆ ಎಂದರು, ಚುನಾವಣೆಯ ಸಂಧರ್ಭದಲ್ಲಿ ಕಾರ್ಯ ನಿರ್ವಹಿಸುವ ಆರಕ್ಷಕರಿಗೆ ಶಿಕ್ಷಕರಿಗೆ ಮತಚಲಾಯಿಸಲು ನೀಡಿರುವ ಅಂಚೆ ಮತದಾನ ಪ್ರಕ್ರಿಯೆ ಮಾದರಿಯಲ್ಲೇ ಮುಂದಿನ ದಿನದಲ್ಲಿ ರಾಜ್ಯದ ವಿವಿಧೆಡೆ ಕೆಲಸ ಮಾಡುವ ಪತ್ರಿಕಾರಂಗ, ದೃಶ್ಯ ಮಾಧ್ಯಮದ ವರದಿಗಾರರು ಛಾಯಾಗ್ರಾಹಕರು ರಾಜ್ಯದ ಸಾವಿರಾರು ಪತ್ರಕರ್ತರಿಗೂ ಸಹ ಅಂಚೆ ಮತದಾನ ಅವಕಾಶ ಕಲ್ಪಿಸಲು ಮುಂದಾಗಬೇಕು ಎಂದು ಮನವಿ ಮಾಡಿದರು…

ಇದೇ ಸಂಧರ್ಭದಲ್ಲಿ ಬಿಜೆಪಿ ಹಿಂದುಳಿದ ವರ್ಗಗಳ ಅಧ್ಯಕ್ಷರಾದ ಜೋಗಿ ಮಂಜು,‌ ವಿಕ್ರಂ ಅಯ್ಯಂಗಾರ್, ಅಜಯ್ ಶಾಸ್ತ್ರಿ, ಲಿಂಗರಾಜು, ಶರತ್ ಭಂಡಾರಿ, ಗುರುಪ್ರಸಾದ್, ಕುಮಾರ್, ಕಾರ್ತಿಕ್, ಆಶೃತ್ ಸಾಥ್ ನೀಡಿದರು…

Spread the love

Related post

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ. ಹನೂರು Tv10 ಕನ್ನಡ21/01/2026 ಹನೂರು :ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವಕ ಚಿರತೆ ದಾಳಿಗೆ ಬಲಿಯಾದ…
ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು… ಮಂಡ್ಯ,ಜ21,Tv10 ಕನ್ನಡಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ಕಾಲುಜಾರಿ ನೀರುಪಾಲಾದ ಘಟನೆ ಕೆ.ಆರ್.ಪೇಟೆ ತಾಲೂಕಿನ ಅಂಚೆಬೀರನಹಳ್ಳಿಯಲ್ಲಿ ನಡೆದಿದೆ.ಆನೆಗೋಳ ಗ್ರಾಮದ ರೈತ…
ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ… ಮೈಸೂರು,ಜ19,Tv10 ಕನ್ನಡ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯನವರ ಮಹತ್ತರ ಯೋಜನೆಯ ನಿಮ್ಹಾನ್ಸ್ ಮಾದರಿಯ ಸಂಸ್ಥೆ ಸ್ಥಾಪನೆಗೆ ಗ್ರೀನ್…

Leave a Reply

Your email address will not be published. Required fields are marked *