ಮತದಾನಕ್ಕೆ ಕ್ಷಣಗಣನೆ…48 ಗಂಟೆ ಮುನ್ನ ಚುನಾವಣಾ ಚರ್ಚೆ, ಸಂವಾದ, ಸಮೀಕ್ಷೆಗಳಿಗೆ ನಿರ್ಬಂಧ…

ಮತದಾನಕ್ಕೆ ಕ್ಷಣಗಣನೆ…48 ಗಂಟೆ ಮುನ್ನ ಚುನಾವಣಾ ಚರ್ಚೆ, ಸಂವಾದ, ಸಮೀಕ್ಷೆಗಳಿಗೆ ನಿರ್ಬಂಧ…

ಮೈಸೂರು,ಮೇ9,Tv10 ಕನ್ನಡ
ಕರ್ನಾಟಕ ವಿಧಾನಸಭಾ ಚುನಾವಾಣೆಗೆ ಮೇ 10 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ ಮತದಾನ ಮುಕ್ತಾಯ ಸಮಯದ ಪೂರ್ವ 48 ಗಂಟೆ ಅವಧಿಯಲ್ಲಿ ಅಂದರೆ (ಮೇ 08ರ ಸಾಯಂಕಾಲ 6 ಗಂಟೆಯಿಂದ ಮೇ 10ರ ಸಾಯಂಕಾಲ 6.30 ರವರೆಗೆ ಚುನಾವಣೆಗೆ ಸಂಬಂಧಿಸಿದಂತೆ ಮತದಾರರ ಮೇಲೆ ಪ್ರಭಾವ ಬೀರುವ ರೀತಿ, ಮಾಧ್ಯಮಗಳು, ಟಿ.ವಿ. ವಾಹಿನಿಗಳಲ್ಲಿ ಸಿನಿಮಾಟೋಗ್ರಾಫಿ, ಚರ್ಚೆ, ಸಂವಾದ, ಸಂದರ್ಶನ, ವಿಶ್ಲೇಷಣೆ, ಚುನಾವಣೋತ್ತರ ಸಮೀಕ್ಷೆ, ಹೀಗೆ ಯಾವುದೇ ಜಾಹೀರಾತು ಹಾಗೂ ಸುದ್ದಿಯನ್ನು ವಿದ್ಯುನ್ಮಾನ ವಾಹಿನಿ, ಕೇಬಲ್ ಟಿ.ವಿ., ರೇಡಿಯೋ, ಸಾಮಾಜಿಕ ಜಾಲತಾಣ ಹಾಗೂ ಡಿಜಿಟಲ್ ಮಾಧ್ಯಮಗಳಲ್ಲಿ ಪ್ರಸಾರ ಮಾಡುವುದಾಗಲಿ ಅಥವಾ ಬಿತ್ತರಿಸುವುದನ್ನು ಪ್ರಜಾ ಪ್ರತಿನಿಧಿ ಕಾಯ್ದೆ-1951ರ ಸೆಕ್ಷನ್ 125 ರಂತೆ ನಿರ್ಬಂಧಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಡಾ: ರಾಜೇಂದ್ರ ಕೆ.ವಿ. ಅವರು ತಿಳಿಸಿದ್ದಾರೆ.
ಒಂದು ವೇಳೆ ನಿಯಮ ಉಲ್ಲಂಘಿಸಿ ಚುನಾವಣಾ ಫಲಿತಾಂಶದ ಮೇಲೆ ಪ್ರಭಾವ ಬೀರುವ ಸುದ್ದಿ ಬಿತ್ತರಿಸಿದಲ್ಲಿ ಅಂತಹವರ ವಿರುದ್ಧ ಪ್ರಜಾ ಪ್ರಾತಿನಿಧ್ಯ ಕಾಯ್ದೆ-1951ರ ಕಲಂ 126ರ ಅನ್ವಯ 2 ವರ್ಷಗಳ ಶಿಕ್ಷೆ ಅಥವಾ ದಂಡ, ಇಲ್ಲವೆ ಶಿಕ್ಷೆ ಮತ್ತು ದಂಡ ಎರಡನ್ನೂ ವಿಧಿಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಮತದಾನ ಪೂರ್ವ 48 ಗಂಟೆ ಅವಧಿಯಲ್ಲಿ ಮಾಧ್ಯಮಗಳು, ವಿದ್ಯುನ್ಮಾನ ವಾಹಿನಿ, ಕೇಬಲ್ ಟಿ.ವಿ, ರೇಡಿಯೋ, ಸಾಮಾಜಿಕ ಜಾಲತಾಣ ಹಾಗೂ ಡಿಜಿಟಲ್ ಮಾಧ್ಯಮ ಸಂಸ್ಥೆಗಳು ಬಿತ್ತರಿಸುವ ಚುನಾವಣಾ ಸುದ್ದಿಯಲ್ಲಿ ಯಾವುದೇ ಅಭ್ಯರ್ಥಿ ಅಥವಾ ರಾಜಕೀಯ ಪಕ್ಷದ ಪರವಾಗಿರುವ ಮತ್ತು ಚುನಾವಣಾ ಫಲಿತಾಂಶದ ಮೇಲೆ ಪ್ರಭಾವ ಬೀರುವಂತಹ ಪ್ಯಾನಲಿಸ್ಟ್ ಅಭಿಪ್ರಾಯಗಳು, ಮನವಿಗಳು ಇಲ್ಲದಿರುವುದನ್ನು ಖಚಿತಪಡಿಸಿಕೊಳ್ಳಬೇಕು. ಇದಲ್ಲದೆ ಯಾವುದೇ ಅಭಿಪ್ರಾಯ ಸಂಗ್ರಹದ ಫಲಿತಾಂಶ ಪ್ರಕಟ, ವಿಶ್ಲೇಷಣೆ, ಪ್ರದರ್ಶನ ಮಾಡುವುದನ್ನು ಸಹ ನಿರ್ಬಂಧಿಸಲಾಗಿದೆ.
ಎಕ್ಸಿಟ್ ಪೋಲ್‌ ನಿಷೇಧ
ಮತದಾನದ ಪೂರ್ವ 48 ಗಂಟೆ ಮತ್ತು ಮತದಾನದ ಸಮಯ ಮುಗಿದ ನಂತರದ ಅರ್ಧ ಗಂಟೆ ವರೆಗೂ ಯಾವುದೇ ಸುದ್ದಿ ವಾಹಿನಿ, ಕೇಬಲ್ ಟಿ.ವಿ. ಸೇರಿದಂತೆ ಇನ್ನಿತರ ಡಿಜಿಟಲ್ ಮಾಧ್ಯಮಗಳು ಎಕ್ಸಿಟ್ ಪೋಲ್ ಪ್ರಸಾರ ಮಾಡುವುದನ್ನು ನಿಷೇಧಿಸಲಾಗಿದೆ. ಹೀಗಾಗಿ ಎಲ್ಲಾ ಮಾಧ್ಯಮ ಸಂಸ್ಥೆಗಳು ಚುನಾವಣಾ ಆಯೋಗವು ಕಾಲ ಕಾಲಕ್ಕೆ ಹೊರಡಿಸುವ ಎಲ್ಲಾ ಮಾರ್ಗದರ್ಶನಗಳನ್ನು ಪಾಲಿಸಬೇಕೆಂದು ಅವರು ತಿಳಿಸಿದ್ದಾರೆ.

Spread the love

Related post

ಟೋಲ್ ನಲ್ಲಿ ರಾಜಕೀಯ ಪುಡಾರಿಗಳ ಪುಂಡಾಟ…ಮಹಿಳಾ ಸಿಬ್ಬಂದಿಯನ್ನ ಎಳೆದಾಡಿ ರಂಪಾಟ…

ಟೋಲ್ ನಲ್ಲಿ ರಾಜಕೀಯ ಪುಡಾರಿಗಳ ಪುಂಡಾಟ…ಮಹಿಳಾ ಸಿಬ್ಬಂದಿಯನ್ನ ಎಳೆದಾಡಿ ರಂಪಾಟ…

ಮಂಡ್ಯ,ನ22,Tv10 ಕನ್ನಡ ಬೆಂಗಳೂರು ಮೈಸೂರು ಹೈವೇ ಟೋಲ್ ನಲ್ಲಿ ರಾಜಕೀಯ ಪುಡಾರಿಗಳು ನಡೆಸಿದ ಪುಂಡಾಟ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.ಟೋಲ್ ದುಡ್ಡು ಕಟ್ಟದೇ ಸಿಬ್ಬಂದಿಗಳ ವಿರುದ್ದ ತಿರುಗಿ ಬಿದ್ದಿದ್ದಾರೆ.ಟೋಲ್ ಕಟ್ಟಿ…
ವಕ್ಫ್ ಬೋರ್ಡ್ ಆಸ್ತಿ ವಿವಾದ…ಮೈಸೂರಿನಲ್ಲಿ ಬಿಜೆಪಿ ಯಿಂದ ಪ್ರತಿಭಟನೆ…

ವಕ್ಫ್ ಬೋರ್ಡ್ ಆಸ್ತಿ ವಿವಾದ…ಮೈಸೂರಿನಲ್ಲಿ ಬಿಜೆಪಿ ಯಿಂದ ಪ್ರತಿಭಟನೆ…

ಮೈಸೂರು,ನ22,Tv10 ಕನ್ನಡ ರಾಜ್ಯದಲ್ಲಿ ವಖ್ಫ್ ಬೋರ್ಡ್ ಆಸ್ತಿ ವಿವಾದ ತಾರಕಕ್ಕೆ ಏರುತ್ತಿದೆ.ರಾಜ್ಯ ಸರ್ಕಾರದ ವಿರುದ್ಧ ಮೈಸೂರಿನಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ ನಡೆಸಿದೆ.ಮೈಸೂರು ನಗರ ಮತ್ತು ಗ್ರಾಮಾಂತರ ಬಿಜೆಪಿ ವತಿಯಿಂದ…
ಅಕ್ರಮ ಗ್ಯಾಸ್ ರೀಫಿಲ್ಲಿಂಗ್ ಅಡ್ಡೆ ಮೇಲೆ ಪೊಲೀಸರ ದಾಳಿ…ಓರ್ವನ ಬಂಧನ…ವಾಣಿಜ್ಯ ಹಾಗೂ ಗೃಹಬಳಕೆಯ 119 ಸಿಲಿಂಡರ್ ಸೀಜ್…

ಅಕ್ರಮ ಗ್ಯಾಸ್ ರೀಫಿಲ್ಲಿಂಗ್ ಅಡ್ಡೆ ಮೇಲೆ ಪೊಲೀಸರ ದಾಳಿ…ಓರ್ವನ ಬಂಧನ…ವಾಣಿಜ್ಯ ಹಾಗೂ…

ಮೈಸೂರು,ನ21,Tv10 ಕನ್ನಡ ಸಿಸಿಬಿ ಹಾಗೂ ಸರಸ್ವತಿಪುರಂ ಠಾಣೆ ಮತ್ತು ಆಹಾರ ಇಲಾಖೆ ಅಧಿಕಾರಿಗಳು ಅಕ್ರಮವಾಗಿ ನಡೆಸುತ್ತಿದ್ದ ಗ್ಯಾಸ್ ರೀಫಿಲ್ಲಿಂಗ್ ಅಡ್ಡೆ ಮೇಲೆ ದಾಳಿ ನಡೆಸಿ ಓರ್ವನನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.…

Leave a Reply

Your email address will not be published. Required fields are marked *