ಮದುವೆ ಆಗಿಲ್ಲವೆಂದು ಹಂಗಿಸಿದ ಸ್ನೇಹಿತ ಕೊಲೆ…5 ತಿಂಗಳಾದ್ರೂ ಪೊಲೀಸರಿಗೆ ಚೆಳ್ಳೆಹಣ್ಣು ತಿನ್ನಿಸುತ್ತಿರುವ ಆರೋಪಿ…ಸಾಮೂಹಿಕ ಆತ್ಮಹತ್ಯೆಗೆ ನಿರ್ಧರಿಸಿರುವ ಕುಟುಂಬ…ಸಾಥ್ ನೀಡಿದ ಗ್ರಾಮಸ್ಥರು…

ಹುಣಸೂರು,ಮೇ17,Tv10 ಕನ್ನಡ
ಕ್ಷುಲ್ಲಕ ಕಾರಣಕ್ಕೆ ಸ್ನೇಹಿತನನ್ನ ಕೊಲೆ ಮಾಡಿದ ಆರೋಪಿ 5 ತಿಂಗಳಾದರೂ ಪೊಲೀಸರಿಗೆ ಚೆಳ್ಳೆಹಣ್ಣು ತಿನ್ನಿಸುತ್ತಿದ್ದಾನೆ.ಕೊಲೆ ಆರೋಪಿಯನ್ನ ಅರೆಸ್ಟ್ ಮಾಡದ ಪೊಲೀಸರ ವಿರುದ್ದ ಕುಟುಂಬಸ್ಥರು ಆಕ್ರೋಷ ವ್ಯಕ್ತಪಡಿಸುತ್ತಿದ್ದಾರೆ.ಆರೋಪಿಯನ್ನ ಬಂಧಿಸಿ ಕಾನೂನು ಕ್ರಮ ಜರುಗಿಸದಿದ್ದಲ್ಲಿ ಪೊಲೀಸ್ ಠಾಣೆ ಮುಂದೆ ಸಾಮೂಹಿಕ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಎಚ್ಚರಿಸಿದ್ದಾರೆ.ಕುಟುಂಬಸ್ಥರಿಗೆ ಗ್ರಾಮಸ್ಥರೂ ಸಹ ಸಾಥ್ ನೀಡಿದ್ದಾರೆ.ಹುಣಸೂರು ತಾಲೂಕು ಹರವೆ ಗ್ರಾಮದಲ್ಲಿ ಘಟನೆ ಬೆಳಕಿಗೆ ಬಂದಿದೆ.

ಸಣ್ಣಸ್ವಾಮಿ ನಾಯಕ ಕೊಲೆಯಾದ ಆರೋಪಿ.ಕುಮಾರ್@ಬಂಗಾರಿ ಕೊಲೆ ಮಾಡಿ ತಲೆ ಮರೆಸಿಕೊಂಡಿರುವ ಆರೋಪಿ.8-1-23 ರಂದು ಘಟನೆ ನಡೆದಿದೆ.ಸಣ್ಣಸ್ವಾಮಿ ನಾಯಕ ಹಾಗೂ ಬಂಗಾರಿ ಪರಿಚಯಸ್ಥರು.ಹರವೇ ಗ್ರಾಮದ ನಿವಾಸಿಗಳು.ಕುಮಾರ್@ಬಂಗಾರಿಗೆ ಮದುವೆ ಆಗಿಲ್ಲ.ಈ ವಿಚಾರದಲ್ಲಿ ಸಣ್ಣಸ್ವಾಮಿ ನಾಯಕ ಆಗಾಗ ಹಂಗಿಸುತ್ತಿದ್ದ.ಇದೇ ವಿಚಾರದಲ್ಲಿ ಇಬ್ಬರ ನಡುವೆ ಆಗಾಗ ಜಗಳ ಆಗುತ್ತಿತ್ತು.ಜನವರಿ 8 ರಂದು ಕುಡಿದ ಮತ್ತಿನಲ್ಲಿದ್ದ ಇಬ್ಬರೂ ಇದೇ ವಿಚಾರದಲ್ಲಿ ಗಲಾಟೆ ಮಾಡಿಕೊಂಡಿದ್ದಾರೆ.ಈ ವೇಳೆ ಕುಮಾರ್ ಚಾಕುವಿನಿಂದ ಸಣ್ಣಸ್ವಾಮಿಗೆ ಇರಿದಿದ್ದಾನೆ.ಗಾಯಗೊಂಎ ಸಣ್ಣಸ್ವಾಮಿ ನಾಯಕನನ್ನ ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೃತಪಟ್ಟಿದ್ದಾನೆ.ಕೊಲೆ ಮಾಡಿದ ಕುಮಾರ್ ತಲೆ ಮರೆಸಿಕೊಂಡಿದ್ದಾನೆ.ಘಟನೆ ನಡೆದು 5 ತಿಂಗಳಾದ್ರೂ ಆರೋಪಿಯನ್ನ ಬಂಧಿಸುವಲ್ಲಿ ಹುಣಸೂರು ಪೊಲೀಸರು ವಿಫಲರಾಗಿದ್ದಾರೆ.ಸಣ್ಣಸ್ವಾಮಿ ನಾಯಕನ ಕುಟುಂಬಕ್ಕೂ ಜೀವಬೆದರಿಕೆ ಇದೆ ಎಂದು ಆರೋಪಿಸುತ್ತಿರುವ ಗ್ರಾಮಸ್ಥರು ಕೂಡಲೇ ಹಂತಕನನ್ನ ಬಂಧಿಸಿ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.ಆರೋಪಿಯನ್ನ ಬಂಧಿಸದಿದ್ದಲ್ಲಿ ಪೊಲೀಸ್ ಠಾಣೆ ಮುಂಭಾಗ ಸಾಮೂಹಿಕ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.ಕೊಲೆ ಆರೋಪಿ ಕುಮಾರ್ ರಾಜಾರೋಷವಾಗಿ ತಿರುಗಾಡುತ್ತಿದ್ದಾನೆಂಬ ಮಾಹಿತಿ ಕೇಳಿಬರುತ್ತಿದೆ.ಇನ್ನಾದರೂ ಹುಣಸೂರು ಠಾಣೆ ಪೊಲೀಸರು ಎಚ್ಚೆತ್ತುಕೊಂಡು ಆರೋಪಿಯನ್ನ ಬಂಧಿಸಿ ಮೃತನ ಕುಟುಂಬಕ್ಕೆ ನ್ಯಾಯ ಒದಗಿಸಬೇಕಿದೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *