ಅಯೋಧ್ಯೆಯಲ್ಲಿ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದ ಶಾಖೆಗೆ ಭೂಮಿಪೂಜೆ‌…81 ನೇ ಜನ್ಮದಿನಾಚರಣೆ ಸಂಭ್ರಮ…

ಅಯೋದ್ಯೆ,ಮೇ27, Tv10 ಕನ್ನಡ
ಮೈಸೂರಿನ ಶ್ರೀ ಅವಧೂತ ದತ್ತಪೀಠ, ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದ ಪೀಠಾಧೀಶರಾದ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರಿಗೆ 81ನೇ ಜನ್ಮದಿನದ ಸಂಭ್ರಮ ಮನೆ ಮಾಡಿದೆ.ಸಾಮಾನ್ಯವಾಗಿ ಸ್ವಾಮೀಜಿಯವರ ಜನ್ಮದಿನ ಆಚರಣೆಯನ್ನು ಮೈಸೂರಿನ ಅವಧೂತ ದತ್ತಪೀಠದಲ್ಲಿ ನೆರವೇರಿಸಲಾಗುತಿತ್ತು. ಈ ಸಂದರ್ಭದಲ್ಲಿ ಅನೇಕ ಧಾರ್ಮಿಕ ಕಾರ್ಯಕ್ರಮಗಳು,ಆಶ್ರಮದ ಆವರಣದಲ್ಲಿರುವ ದೇವಾಲಯಗಳಲ್ಲಿ ದೇವರುಗಳಿಗೆ ವಿಶೇಷ ಪೂಜೆಗಳು ನಡೆಯುತ್ತಿದ್ದವು.ಈ ಬಾರಿ ಸ್ವಾಮೀಜಿಯವರ ಅನುಪಸ್ಥಿತಿಯಲ್ಲಿ ಅವಧೂತ ದತ್ತಪೀಠದಲ್ಲಿ
ಶ್ರೀಗಳ ಜನ್ಮದಿನದ ಪ್ರಯುಕ್ತ ವಿಶೇಷ ಪೂಜಾ ಕಾರ್ಯಗಳು ನೆರವೇರಿವೆ.ಆದರೆ ಈ ಬಾರಿ ಸ್ವಾಮೀಜಿಯವರು ಅಯೋಧ್ಯೆಯಲ್ಲಿ ತಮ್ಮ ಹುಟ್ಟು ಹಬ್ಬವನ್ನು ಆಚರಿಸಿಕೊಂಡಿದ್ದಾರೆ.ಹುಟ್ಟುಹಬ್ಬದ ಸಂಭ್ರಮದ ನಡುವೆ ಅಯೋಧ್ಯೆಯಲ್ಲಿ ಗಣಪತಿ ಸಚ್ಚಿದಾನಂದ ಆಶ್ರಮದ ಶಾಖೆ ಪ್ರಾರಂಭವಾಗುತ್ತಿದ್ದು ಶ್ರೀಗಳು ಸ್ವತಃ ಭೂಮಿ ನೆರವೇರಿಸಿದ್ದಾರೆ.
ಬೆಳಗಿನಿಂದಲೇ ಅಲ್ಲಿ ವಿಶೇಷ ಪೂಜಾ ಕಾರ್ಯಗಳು ಹೋಮಗಳು ನೆರವೇರಿದ್ದು, 11 ಗಂಟೆಗೆ ಭೂಮಿ ಪೂಜೆಯನ್ನು ಸ್ವಾಮೀಜಿ ನೆರವೇರಿಸಿದ್ದಾರೆ.ಲೋಕ ಕಲ್ಯಾಣಾರ್ಥವಾಗಿ ಇಂದು ಪೂಜೆಯನ್ನು ನೆರವೇರಿಸಲಾಗಿದೆ ಎಂದು ಗಣಪತಿ ಸಚ್ಚಿದಾನಂದ ಸ್ವಾಮೀಜಿ ಈ ವೇಳೆ ತಿಳಿಸಿದರು.
ಈ ಸಂದರ್ಭದಲ್ಲಿ ಆಶ್ರಮದ ಕಿರಿಯ ಶ್ರೀಗಳಾದ ಶ್ರೀ ದತ್ತ ವಿಜಯನಂದ ತೀರ್ಥ ಸ್ವಾಮೀಜಿ ಸೇರಿದಂತೆ ಹಲವಾರು ಗುರುವರ್ಯರು ಮತ್ತು ಭಕ್ತರು ಪಾಲ್ಗೊಂಡಿದ್ದರು…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *