ಸಾಲಭಾದೆ ಹಿನ್ನಲೆ…ಮೈಸೂರು ಜಿಲ್ಲೆಯಲ್ಲಿ ಇಬ್ಬರು ರೈತರು ಆತ್ಮಹತ್ಯೆ…

ಮೈಸೂರು,ಮೇ28,Tv10 ಕನ್ನಡ
ಸಾಲಭಾದೆ ತಾಳದೆ
ಮೈಸೂರು ಜಿಲ್ಲೆಯಲ್ಲಿ ಇಬ್ಬರು ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಸುರೇಶ್ (58) ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಹುಣಸೂರು ತಾಲ್ಲೂಕು ಶ್ಯಾನಭೋಗನಹಳ್ಳಿಯಲ್ಲಿ ಘಟನೆ ನಡೆದಿದೆ.
ಎರಡು ಎಕರೆ ಜಮೀನು ಹೊಂದಿದ್ದ ಸುರೇಶ್ ಬ್ಯಾಂಕ್ ಸೊಸೈಟಿ ಸೇರಿ 7 ಲಕ್ಷ ಸಾಲ ಮಾಡಿದ್ದರು.
ಬೆಳೆ ಕೈ ಕೊಟ್ಟ ಹಿನ್ನೆಲೆ‌ ಜಮೀನಿನಲ್ಲಿ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮತ್ತೊಂದು ಪ್ರಕರಣದಲ್ಲಿ ಹುಣಸೂರಿನ
ಕರ್ಣಕುಪ್ಪೆ ಗ್ರಾಮದ ರಾಜಶೆಟ್ಟಿ (78) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
5 ಎಕರೆ ಜಮೀನು ಹೊಂದಿದ್ದ ರಾಜಶೆಟ್ಟಿ
ತಂಬಾಕು ರಾಗಿ ಬೆಳೆ ಬೆಳೆದಿದ್ದರು.
ಬ್ಯಾಂಕ್ ಸೊಸೈಟಿ ಮಹಿಳಾ ಸಂಘ ಕೈ ಸಾಲ ಸೇರಿ ಸುಮಾರು 8 ಲಕ್ಷ ಸಾಲ ಮಾಡಿದ್ದರು.
ಸಾಲ ತೀರಿಸಲಾಗದೆ ಹೆಚ್ಚಾಗಿದ್ದ ಬಡ್ಡಿಯಿಂದ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *