ಸರಸ್ವತಿಪುರಂ ರೈಲ್ವೆ ಅಂಡರ್ ಬ್ರಿಡ್ಜ್ ಗೆ ಮೇಯರ್ ಭೇಟಿ…ಮಳೆ ನೀರು ಸಮಸ್ಯೆ ಬಗೆಹರಿಸುವಂತೆ ಅಧಿಕಾರಿಗಳಿಗೆ ಸೂಚನೆ…
- MysoreTV10 Kannada Exclusive
- May 30, 2023
- No Comment
- 84
ಸರಸ್ವತಿಪುರಂ ರೈಲ್ವೆ ಅಂಡರ್ ಬ್ರಿಡ್ಜ್ ಗೆ ಮೇಯರ್ ಭೇಟಿ…ಮಳೆ ನೀರು ಸಮಸ್ಯೆ ಬಗೆಹರಿಸುವಂತೆ ಅಧಿಕಾರಿಗಳಿಗೆ ಸೂಚನೆ…
ಮೈಸೂರು,ಮೇ30,Tv10 ಕನ್ನಡ
ಇಂದು ಸರಸ್ವತಿ ಪುರಂನ ರೈಲ್ವೆ ಅಂಡರ್ ಬ್ರಿಡ್ಜ್ ರಸ್ತೆಗೆ ಮೇಯರ್ ಶಿವಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಳೆ ಬಂದಾಗ ನೀರು ಸರಾಗವಾಗಿ ಹರಿದು ಹೋಗದ ಹಿನ್ನಲೆ ವಾಹನ ಸವಾರರಿಗೆ ಕಿರಿಕಿರಿ ಆಗುತ್ತಿರುವ ಬಗ್ಗೆ ದೂರುಗಳು ಕೇಳಿಬಂದ ಹಿನ್ನಲೆ ಅಧಿಕಾರಿಗಳ ಜೊತೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಬೆಂಗಳೂರಿನಲ್ಲಿ ನಡೆದ ದುರಂತದ ನಂತರ ಮೈಸೂರು ಮಹಾನಗರ ಪಾಲಿಕೆ ಸಹ ಎಚ್ಚೆತ್ತುಕೊಂಡು ಮುನ್ನೆಚ್ಚರಿಕೆ ಕ್ರಮ ವಹಿಸಲು ಮುಂದಾಗಿದೆ. ನೀರಿನಿಂದ ಆಗುತ್ತಿದ್ದ ಸಮಸ್ಯೆಗಳಿಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ವಾರ್ಡ್ ಅಭಿಯಂತರರು, ಸಂಬಂಧಪಟ್ಟ ಅಧಿಕಾರಿವರ್ಗ ಹಾಜರಿದ್ದರು…