ಮೈಸೂರು ಮಹಾನಗರ ಪಾಲಿಕೆ ಇಂಜಿನಿಯರ್ ಮಹೇಶ್ ಕುಮಾರ್ ಮನೆ ಮೇಲೆ ಲೋಕಾಯುಕ್ತ ದಾಳಿ…ದಾಖಲೆಗಳ ಪರಿಶೀಲನೆ…
- MysoreTV10 Kannada Exclusive
- May 31, 2023
- No Comment
- 125
ಮೈಸೂರು,ಜೂ1,Tv10 ಕನ್ನಡ
ಬೆಳ್ಳಬೆಳಗ್ಗೆ ಮೈಸೂರಿನಲ್ಲಿ ಲೋಕಾಯುಕ್ತ ಮೈಸೂರು ಮಹಾನಗರ ಪಾಲಿಕೆ ಇಂಜಿನಿಯರ್ ಮನೆ ಮೇಲೆ ದಾಳಿ ನಡೆಸಿದೆ.
ಮೈಸೂರು ಮಹಾನಗರ ಪಾಲಿಕೆ ಅಧಿಕಾರಿ ಮಹೇಶ್ ಕುಮಾರ್ ವಿರುದ್ದ ಕಾರ್ಯಾಚರಣೆ ನಡೆದಿದೆ.
ಮೈಸೂರಿನ ನಿವೇದಿತಾ ನಗರ ಸಂಕ್ರಾಂತಿ ವೃತ್ತದಲ್ಲಿರುವ ಮನೆಯಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ.
ತೋಟದ ಮನೆ ಸೇರಿ ಹಲವು ಕಡೆ ದಾಳಿ ನಡೆಸಲಾಗಿದೆ. 13 ತಂಡದಿಂದ ಏಕಕಾಲಕ್ಕೆ ದಾಳಿ ನಡೆಸಲಾಗಿದೆ.ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಬಗ್ಗೆ ಬಂದ ದೂರಿನ ಆಧಾರದ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.ದಾಖಲೆಗಳ ಪರಿಶೀಲನೆ ನಡೆಯುತ್ತಿದೆ…