ಕುವೆಂಪುನಗರ ಠಾಣಾ ಪೊಲೀಸರ ಕಾರ್ಯಾಚರಣೆ…ಪ್ಯೂಮಾ ಷೋರೂಂ ನಲ್ಲಿ ಕಳವು ಮಾಡಿದ್ದ ಆರೋಪಿ ಸೆರೆ…

ಮೈಸೂರು,ಜೂ2,Tv10 ಕನ್ನಡ
ಪ್ಯೂಮಾ ಷೋರೂಂ ನ ಶೆಟರ್ ಮುರಿದು ಕಳ್ಳತನ ಮಾಡಿದ್ದ ಆರೋಪಿಯನ್ನ ಬಂಧಿಸುವಲ್ಲಿ ಕುವೆಂಪುನಗರ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ.ಪ್ರಜ್ವಲ್(20) ಬಂಧಿತ ಆರೋಪಿ.ಬಂಧಿತನಿಂದ ಕೃತ್ಯಕ್ಕೆ ಬಳಸಿದ ಒಂದು ದ್ವಿಚಕ್ರ ವಾಹನ.ಎರಡು ಮೊಬೈಲ್ ಹಾಗೂ 5500/ ರೂ ನಗದು ವಶಪಡಿಸಿಕೊಂಡಿದ್ದಾರೆ.ಷೆಟರ್ ಮುರಿದು ಷೋರೂಂ ನಲ್ಲಿದ್ದ 27 ಸಾವಿರ ನಗದು ಹಾಗೂ 20 ಸಾವಿರ ಮೌಲ್ಯದ ಪಾದರಕ್ಷೆಗಳು,ಕ್ಯಾಪ್ ಹಾಗೂ ಪರ್ಸ್ ಗಳನ್ನ ಮೇ 7 ರಂದು ಪ್ರಜ್ವಲ್ ದೋಚಿ ಪರಾರಿಯಾಗಿದ್ದ. ಪ್ರಕರಣ ದಾಖಲಿಸಿಕೊಂಡ ಕುವೆಂಪುನಗರ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಆರೋಪಿಯು ತನ್ನ ಸಹಚರರಾದ ನಿತಿನ್,ಭಾಷಾ,ಚೇತನ್ ಎಂಬುವರ ಜೊತೆ ಸೇರಿ ಮೈಸೂರು,ಬೆಂಗಳೂರು,ಹೊಸಪೇಟೆ,ಅರಸೀಕೆರೆ ಸೇರಿದಂತೆ ವಿವಿದೆಡೆ ಇದೇ ರೀತಿ ಅಪರಾಧಗಳಲ್ಲಿ ಪಾಲ್ಗೊಂಡಿರುವುದು ತನಿಖೆ ವೇಳೆ ಬೆಳಕಿಗೆ ಬಂದಿದೆ.ಯಶಸ್ವಿ ಕಾರ್ಯಾಚರಣೆಯನ್ನ ನಗರ ಪೊಲೀಸ್ ಆಯುಕ್ತ ಡಾ.ಬಿ.ರಮೇಶ್ ಹಾಗೂ ಡಿಸಿಪಿ ಮುತ್ತುರಾಜ್ ಪ್ರಶಂಸಿಸಿದ್ದಾರೆ.

ಸಂಚಾರ ಮತ್ತು ಅಪರಾಧ ವಿಭಾಗದ ಡಿಸಿಪಿ ಜಾಹ್ನವಿ ರವರ ಮಾರ್ಗದರ್ಶನದಲ್ಲಿ.ಕೆ.ಆರ್.ಉಪವಿಭಾಗದ ಎಸಿಪಿ ಗಂಗಾಧರಸ್ವಾಮಿ ರವರ ಉಸ್ತುವಾರಿಯಲ್ಲಿ ಕುವೆಂಪುನಗರ ಠಾಣೆ ಪಿಐ ನಾರಾಯಣ ಸ್ವಾಮಿ ನೇತೃತ್ವದಲ್ಲಿ ಪಿಎಸ್ಸೈ ಗಳಾದ ಗೋಪಾಲ್,ಕು.ರಾಧಾ ಎಎಸ್ಸೈ ಗಳಾದ ಕಾಂತರಾಜು,ಮಹದೇವ ಹಾಗೂ ಸಿಬ್ಬಂದಿಗಳಾದ ವಿರೂಪಾಕ್ಷ,ಮಂಜುನಾಥ್,ಆನಂದ್,ಪುಟ್ಟಪ್ಪ,ಹಜರತ್,ಸುರೇಶ್,ನಾಗೇಶ್ ಶ್ರೀನಿವಾಸ್,ರವರು ಕಾರ್ಯಾಚರಣೆಯನ್ನ ಯಶಸ್ವಿಗೊಳಿಸಿದ್ದಾರೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *