ಒಡಿಶಾ ರೈಲು ದುರಂತ ಪ್ರಕರಣ…ತುರ್ತು ಸಭೆ ನಡೆಸಿ ಮಾಹಿತಿ ಪಡೆದ ಪ್ರಧಾನಿ ನ.ಮೋ…
- TV10 Kannada Exclusive
- June 3, 2023
- No Comment
- 35
ನವದೆಹಲಿ,ಜೂ3,Tv10 ಕನ್ನಡ
ಒಡಿಶಾದ ಬಾಲಸೋರ್ ನಲ್ಲಿ ನಡೆದ ರೈಲು ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಪ್ರಧಾನಿ ನರೇಂದ್ರ ಮೋಧಿ ತುರ್ತು ಸಭೆ ನಡೆಸಿದ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಸಭೆಯಲ್ಲಿ ಕೇಂದ್ರ ಸಚಿವ ಅಮಿತ್ ಶಾ, ಕಾರ್ಯಾಚರಣೆ ನಡೆಸುತ್ತಿರುವ ರಕ್ಷಣಾ ಪಡೆಯ ಮುಖ್ಯಸ್ಥರು, ರೈಲ್ವೇ ಸಚಿವಾಲಯ ಮುಖ್ಯಸ್ಥರು ಪಾಲ್ಗೊಂಡಿದ್ದರು.
ದೇಶದಲ್ಲಿ ನಡೆದ ನಾಲ್ಕನೇ ಮಹಾ ರೈಲು ಅಪಘಾತ ಇದಾಗಿದೆ. ರೈಲು ಅಪಘಾತ ನಡೆದ ಸ್ಥಳಕ್ಕೆ ಪ್ರಧಾನಿ ನೀಡಲಿದ್ದಾರೆ. ನಂತರ ಗಾಯಾಳುಗಳು ದಾಖಲಾಗಿರುವ ಆಸ್ಪತ್ರೆಗೆ ಭೇಟಿ ನೀಡಲಿದ್ದಾರೆ.
ಕೋರಮಂಡಲ್ ಎಕ್ಸ್‌ಪ್ರೆಸ್, ಬೆಂಗಳೂರು–ಹೌರಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ಮತ್ತು ಸರಕು ಸಾಗಣೆ ರೈಲುಗಳ ಮಧ್ಯೆ ಒಡಿಶಾದ ಬಾಲಸೋರ್‌ನಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ ಕನಿಷ್ಠ 261 ಮಂದಿ ಮೃತಪಟ್ಟು, ಸುಮಾರು 900ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.ಘಟನೆಗೆ ಕಾರಣ ಏನು ಎಂಬ ಬಗ್ಗೆ ಅಧಿಕಾರಿಗಳಿಂದ ಪ್ರಧಾನಿ ಮಾಹಿತಿ ಪಡೆದುಕೊಂಡಿದ್ದಾರೆ.ಮೃತರ ಕುಟುಂಬಕ್ಕೆ ರೈಲ್ವೆ ಇಲಾಖೆಯಿಂದ 10 ಲಕ್ಷ ಹಾಗೂ ಪ್ರಧಾನಿ ಪರಿಹಾರ ನಿಧಿಯಿಂದ 2 ಲಕ್ಷ ಘೋಷಣೆ ಮಾಡಲಾಗಿದೆ…