ವಿಶ್ವ ಪರಿಸರ ದಿನಾಚರಣೆ…ಸಾರ್ವಜನಿಕರಿಗೆ ಬಟ್ಟೆ ಬ್ಯಾಗ್ ವಿತರಿಸುವ ಮೂಲಕ ಜಾಗೃತಿ ಅಭಿಯಾನ…

ಮೈಸೂರು,ಜೂ5,Tv10 ಕನ್ನಡ ಪ್ರಜ್ಞಾವಂತ ನಾಗರಿಕ ವೇದಿಕೆ ಹಾಗೂ ಕೆಎಂಪಿ ಕೆ ಚಾರಿಟೇಬಲ್ ಟ್ರಸ್ಟ್
ವತಿಯಿಂದ ವಿಶ್ವ ಇಂದು ಪರಿಸರ ದಿನಾಚರಣೆಯನ್ನ ಅರ್ಥಪೂರ್ಣವಾಗಿ ಆಚರಿಸಲಾಯಿತು‌.ದೇವರಾಜ ಮಾರುಕಟ್ಟೆ ಬಳಿ ಸಾರ್ವಜನಿಕರಿಗೆ ಬಟ್ಟೆ ಬ್ಯಾಗ್ ವಿತರಿಸುವ ಮೂಲಕ ಸ್ವಚ್ಛತಾ ಜಾಗೃತಿ ಮೂಡಿಸಲಾಯಿತು.ಮೇಯರ್ ಶಿವಕುಮಾರ್ ಪ್ಲಾಸ್ಟಿಕ್ ಮುಕ್ತ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿದರು.ನಂತರ ಮಾತನಾಡಿ ಇಂದಿನ ಕಾಲಘಟ್ಟದಲ್ಲಿ ಸ್ವಚ್ಛತೆ ಎಲ್ಲಿ ಆರಂಭಗೊಳ್ಳ ಬೇಕಂದರೆ ಪ್ರಾಥಮಿಕ ಹಂತದಲ್ಲಿ ಜನಸಾಮಾನ್ಯರಿಗೆ ಅರಿವು ಮೂಡಿಸಿದಾಗ ಕಂಡ ಕಂಡಲ್ಲಿ ಎಸೆಯುವ ಮನಸ್ಥಿತಿ ತಗ್ಗಲಿದೆ.ಪ್ರಸ್ತುತ ಪ್ಲಾಸ್ಟಿಕ್ ತ್ಯಾಜ್ಯದ ಕೊಂಪೆ ನಮ್ಮ ಪರಿಸರವನ್ನು ಆವರಿಸಿಕೊಂಡಿದೆ, ಇದರಿಂದ ವಿವಿಧ ರೀತಿಯ ಸಾಂಕ್ರಾಮಿಕ ಖಾಯಿಲೆಗಳು ಸೃಷ್ಠಿಯಾಗುತ್ತಿದೆ. ಪರಿಸರವನ್ನು ನಾವು ಆರಾಧಿಸಿದರೆ ಅವುಗಳು ನಮ್ಮನ್ನು ಹಾಗೂ ನಮ್ಮ ಮುಂದಿನ ಪೀಳಿಗೆಯನ್ನು ಕಾಯುತ್ತವೆ. ಆರೋಗ್ಯವಂತ ಸಮಾಜ ನಿರ್ಮಾಣ ಮಾಡಲು ಸಂಘ ಸಂಸ್ಥೆಗಳ ವಿವಿಧ ಬಗ್ಗೆಯ ಕಾರ್ಯಕ್ರಮಗಳು ಸಹಕಾರಿ ಈ ನಿಟ್ಟಿನಲ್ಲಿ ಕೆಎಂಪಿ ಕೆ ಚಾರಿಟೇಬಲ್ ಟ್ರಸ್ಟ್ ಯುವಕರ ಕಾರ್ಯ ಶ್ಲಾಘನೀಯ, ಯಾವುದೇ ಕಾರ್ಯಕ್ರಮ ಆಯೋಜಿಸಿಕೊಂಡು ಬರುವುದು ಸುಲಭ ಆದರೆ ಅದನ್ನು ನಿರಂತವಾಗಿ ಕೊಂಡ್ಯೊಯುವುದು ಬಹುದೊಡ್ಡ ಸಾಧನೆಯಾಗಿದೆ ಇದಕ್ಕೆಲ್ಲ ನಮ್ಮ ಕಣ್ಮುಂದೆ ಇಂಥಹ ಸಂಘಟನೆಗಳೇ ಸಾಕ್ಷಿಯಾಗಿವೆ.
ಪ್ಲಾಸ್ಟಿಕ್ ಅನ್ನು ಮಿತವಾಗಿ ಬಳಸಿ ಪರಿಸರವನ್ನು ಉಳಿಸಿ ಎಂಬ ಘೋಷವಾಕ್ಯ ನಮ್ಮೆಲ್ಲ ಕೇರಿಗಳಲ್ಲಿಮೊಳಗಲಿ ಎಂದು ಆಶಿಸಿದರು.

ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡರಾದ ಆರ್ ರಘು ಕೌಟಿಲ್ಯ, ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷರಾದ ಡಿಟಿ ಪ್ರಕಾಶ್, ಹಿರಿಯ ಸಮಾಜ ಸೇವಕರಾದ ಕೆ ರಘುರಾಮ್ ವಾಜಪೇಯಿ, ನಗರಪಾಲಿಕಾ ಸದಸ್ಯರಾದ ಪ್ರಮೀಳಾ ಬರತ್, ಪ್ರಜ್ಞಾವಂತ ನಾಗರಿಕ ವೇದಿಕೆ ಅಧ್ಯಕ್ಷರಾದ ಕಡಕೋಳ ಜಗದೀಶ್, ಕೆ ಎಂ ಪಿ ಕೆ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾದ ವಿಕ್ರಮ ಅಯ್ಯಂಗಾರ್, ಹಿರಿಯ ಆರೋಗ್ಯ ನಿರೀಕ್ಷಕ ಶಿವಪ್ರಸಾದ್, ಪರಿಸರ ಇಂಜಿನಿಯರ್ ಜ್ಯೋತಿ, ಕಿರಿಯ ಆರೋಗ್ಯ ನಿರೀಕ್ಷಕರು ಪ್ರೀತಿ
ವಿದ್ಯಾರಣ್ಯ ಟ್ರಸ್ಟ್ ಅಧ್ಯಕ್ಷರಾದ ರವಿಶಂಕರ್, ಬೈರತಿ ಲಿಂಗರಾಜು, ಎಸ್ ಎನ್ ರಾಜೇಶ್, ದೂರ ರಾಜಣ್ಣ, ಸುಚೇಂದ್ರ,ವಿಘ್ನೇಶ್ವರ ಭಟ್, ವೆಂಕಟ್ ರಾಮು, ಚರಣ್, ಹಾಗೂ ಇನ್ನಿತರರು ಭಾಗವಹಿಸಿದ್ದರು…

Spread the love

Related post

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ…

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ……

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ… ಮೈಸೂರು,ಆ30,Tv10 ಕನ್ನಡ ಮೈಸೂರು ಮಹಾನಗರ ಪಾಲಿಕೆಯ ಗಾರ್ಬೇಜ್ ಮುಕ್ತ ಪಾಯಿಂಟ್ ಯೋಜನೆ…
ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು… ಮೈಸೂರು,ಆ20,Tv10 ಕನ್ನಡ ಹಳೇ ದ್ವೇಷದ ಹಿನ್ನಲೆ ನಡೆದ ಗಲಾಟೆಯಲ್ಲಿ ಕಾರಿನ ಬ್ಯಾನೆಟ್ ಮೇಲೆ…
50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ… ಮೈಸೂರು,ಆ19,Tv10 ಕನ್ನಡ 14-03-2023 ರ ನಿರ್ದೇಶನ ಉಲ್ಲಂಘಿಸಿ 50-50 ಅನುಪಾತದಡಿ ಹಂಚಿಕೆ ಮಾಡಿರುವ…

Leave a Reply

Your email address will not be published. Required fields are marked *