ಪರೀಕ್ಷೆಯಲ್ಲಿ ಫೇಲ್… ವಿದ್ಯಾರ್ಥಿನಿ ಆತ್ಮಹತ್ಯೆ…
- CrimeMysore
- June 7, 2023
- No Comment
- 120
ಪರೀಕ್ಷೆಯಲ್ಲಿ ಫೇಲ್… ವಿದ್ಯಾರ್ಥಿನಿ ಆತ್ಮಹತ್ಯೆ…
ಮೈಸೂರು,ಜೂ7,Tv10 ಕನ್ನಡ
ಪರೀಕ್ಷೆಯಲ್ಲಿ ಫೇಲಾಗಿದ್ದಕ್ಕೆ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನ ಶ್ರೀರಾಂಪುರ ಬಡಾವಣೆಯಲ್ಲಿ ನಡೆದಿದೆ.
ತಮಿಳುನಾಡಿನ ನೀಲಗಿರಿ ಜಿಲ್ಲೆಯ ಜಿಷ್ಣ(19) ಮೃತ ವಿದ್ಯಾರ್ಥಿನಿ.
ಮೈಸೂರಿನ ಶ್ರೀರಾಂಪುರದ ಖಾಸಗಿ ಪದವಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಈ ಘಟನೆ ನಡೆದಿದೆ.
ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಷಯದಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದ ಜಿಷ್ಣ, ಈ ಬಾರಿಯ ಸೆಮಿಸ್ಟರ್‌ನಲ್ಲಿ ಕಡಿಮೆ ಅಂಕಗಳಿಸಿ ಫೇಲಾಗಿದ್ದರೆಂದು ಹೇಳಲಾಗಿದರ. ಇದರಿಂದ ಮನನೊಂದು ಕಾಲೇಜಿನ ಹಾಸ್ಟೆಲ್ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಈ ಸಂಬಧ ಮೈಸೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…