ಜೂನ್ 23ರಿಂದ ಆಷಾಡ ಶುಕ್ರವಾರ ಆರಂಭ…ಭಕ್ತರಿಗೆ ಸೌಕರ್ಯ ಕಲ್ಪಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಎಂ.ಸೂಚನೆ…

ಜೂನ್ 23ರಿಂದ ಆಷಾಡ ಶುಕ್ರವಾರ ಆರಂಭ…ಭಕ್ತರಿಗೆ ಸೌಕರ್ಯ ಕಲ್ಪಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಎಂ.ಸೂಚನೆ…

ಮೈಸೂರು,ಜೂ12,Tv10 ಕನ್ನಡ
ಜೂನ್ 23 ರಿಂದ ಆಷಾಢ ಶುಕ್ರವಾರ ಆರಂಭವಾಗಲಿದೆ.ಮೈಸೂರಿನ ಚಾಮುಂಡಿಬೆಟ್ಟದಲ್ಲಿ ನಡೆಯುವ ಈ ಬಾರಿಯ ಆಷಾಡ ಶುಕ್ರವಾರದ ಕಾರ್ಯಕ್ರಮಗಳನ್ನ ಯಶಸ್ವಿಗೊಳಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಡಾ ಹೆಚ್ .ಸಿ ಮಹದೇವಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ‌
ಇಂದು ಮೈಸೂರಿನ ಸರ್ಕಾರಿ ಅತಿಥಿ ಗೃಹದಲ್ಲಿ ನಡೆದ ಸಭೆಯಲ್ಲಿ ಮಾತನಾಡಿ, ಭಕ್ತರಿಗೆ ಅನುಕೂಲವಾಗುವ ಮಾದರಿಯಲ್ಲಿ ಯಾವುದೇ ಅಡಚಣೆ ಉಂಟಾಗದಂತೆ ವ್ಯವಸ್ಥೆಗೊಳಿಸಬೇಕು.
ಪ್ರತಿಯೊಬ್ಬ ಪ್ರಜೆಗೂ ಧಾರ್ಮಿಕ ಸ್ವಾತಂತ್ರ್ಯವಿದೆ ಹೀಗಾಗಿ ಭಕ್ತರಿಗೆ ಯಾವುದೇ ಅಡಚಣೆ ಉಂಟಾಗದಂತೆ ಕೆಲಸ ನಿರ್ವಹಿಸಿ ಎಂದು ಸಚಿವರು ತಿಳಿಸಿದರು.
ಚಾಮುಂಡಿ ಬೆಟ್ಟ ಚಾಮುಂಡೇಶ್ವರಿ ದೇವಸ್ಧಾನದಲ್ಲಿ 2023 ನೇ ಆಷಾಢ ಶುಕ್ರವಾರಗಳು ಹಾಗೂ ಅಮ್ಮನವರ ಜನ್ಮೋತ್ಸವ ಅಂಗವಾಗಿ ಕೈಗೊಳ್ಳಬೇಕಾದ ಸಿದ್ದತೆಗಳ ಬಗ್ಗೆ ಸಂಬಂಧಿಸಿದ ಅಧಿಕಾರಿಗಳು ಅಗತ್ಯ ಕ್ರಮವಹಿಸಬೇಕು ಎಂದು ತಿಳಿಸಿದರು.
ಈ ಹಿಂದೆ ನಡೆದಿರುವ ಕ್ರಮಗಳನ್ನ ಅನುಸರಿ, ಯಾವುದು ಲೋಪದೋಷಗಳು ನಡೆಯದಂತೆ ಎಚ್ಚರಿಕೆ ವಹಿಸಬೇಕು ಎಂದು ಸಲಹೆ ನೀಡಿದರು.
ಈ ವೇಳೆ ಸಭೆಯಲ್ಲಿ ಎನ್.ಆರ್ ಕ್ಷೇತದ ಶಾಸಕರಾದ ತನ್ವಿರ್ ಸೇಠ್, ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರೀಶ್ ಗೌಡ, ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀವತ್ಸ, ಜಿಲ್ಲಾಧಿಕಾರಿ ಡಾ ಕೆವಿ ರಾಜೇಂದ್ರ, ನಗರ ಪೊಲೀಸ್ ಆಯುಕ್ತ ರಮೇಶ್ ಬನೋತ್, ಎಸ್ಪಿ ಸೀಮಾ ಲಾಟ್ಕರ್ ಸೇರಿದಂತೆ ಇತರೆ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು…

Spread the love

Related post

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ…

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ……

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ… ಮೈಸೂರು,ಆ30,Tv10 ಕನ್ನಡ ಮೈಸೂರು ಮಹಾನಗರ ಪಾಲಿಕೆಯ ಗಾರ್ಬೇಜ್ ಮುಕ್ತ ಪಾಯಿಂಟ್ ಯೋಜನೆ…
ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು… ಮೈಸೂರು,ಆ20,Tv10 ಕನ್ನಡ ಹಳೇ ದ್ವೇಷದ ಹಿನ್ನಲೆ ನಡೆದ ಗಲಾಟೆಯಲ್ಲಿ ಕಾರಿನ ಬ್ಯಾನೆಟ್ ಮೇಲೆ…
50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ… ಮೈಸೂರು,ಆ19,Tv10 ಕನ್ನಡ 14-03-2023 ರ ನಿರ್ದೇಶನ ಉಲ್ಲಂಘಿಸಿ 50-50 ಅನುಪಾತದಡಿ ಹಂಚಿಕೆ ಮಾಡಿರುವ…

Leave a Reply

Your email address will not be published. Required fields are marked *