ಸಾಮಾಜಿಕ ಜಾಲತಾಣಗಳಲ್ಲಿ ಮಂಡ್ಯ ಜಿಲ್ಲೆಯ ಹುಲ್ಲೇನಹಳ್ಳಿ ಬಳಿ ಬಸ್ ನಲ್ಲಿ ಕಿಟಕಿ ಮೂಲಕ ಹತ್ತೋವಾಗ ನಡೆದಿರುವ ಘಟನೆ ಎಂದು ಬಿಂಬಿಸಿ ಅಪಘಾತದ ವಿಡಿಯೋವನ್ನು ತಪ್ಪಾಗಿ ತೋರಿಸುತ್ತಿರುವ ಬಗ್ಗೆ ಸ್ಪಷ್ಟೀಕರಣ

  • Crime
  • June 25, 2023
  • No Comment
  • 134

ದಿನಾಂಕ 18/06/2023 ರಂದು ಕ.ರಾ.ರ.ಸಾ.ನಿಗಮ, ಚಾಮರಾಜನಗರ ವಿಭಾಗದ ನಂಜನಗೂಡು ಘಟಕದ ವಾಹನ‌ ಸಂಖ್ಯೆ KA-10-F-151 ಅನುಸೂಚಿ ಸಂಖ್ಯೆ34 ರಲ್ಲಿ ನಂಜನಗೂಡಿನಿಂದ ಟಿ.ನರಸೀಪುರ ಕ್ಕೆ ಕಾರ್ಯಚರಣೆ ಮಾಡುತ್ತಿರುವಾಗ, ಮಧ್ಯಾಹ್ನ ಸಮಯ ಸುಮಾರು 1.45 ರಲ್ಲಿ ಬಸವರಾಜಪುರದ ಹತ್ತಿರ ಎದುರು ದಿಕ್ಕಿನಿಂದ ಅತಿ ವೇಗ ಹಾಗೂ ಅಜಾಗರೂಕತೆಯಿಂದ ಲಾರಿ ಸಂಖ್ಯೆ TN-77-Q-8735 ಯ ಚಾಲಕನು ಸಂಸ್ಥೆಯ ವಾಹನದ ಬಲ‌ಹಿಂಬದಿಯ ಕಿಟಕಿಯ ಬಳಿ ಢಿಕ್ಕಿ ಮಾಡಿ ಅಪಘಾತವಾಗಿರುತ್ತದೆ. ಈ ಅಪಘಾತದಲ್ಲಿ ಕಿಟಕಿಗಳ ಬಳಿ ಇರುವ ಆಸನಗಳಲ್ಲಿ ಕುಳಿತಿದ್ದ ಮಹಿಳಾ ಪ್ರಯಾಣಿಕರಿಗೆ ತೀವ್ರ ಗಾಯಗಳಾಗಿರುತ್ತದೆ. ಶ್ರೀಮತಿ ಶಾಂತ ಕುಮಾರಿ, W/O ಲೇ!! ಬಸವರಾಜು, 33 ವರ್ಷ, ಮಾಗುಡಿಲು, ಹೆಚ್.ಡಿ.ಕೋಟೆ ತಾಲೂಕು ಇವರಿಗೆ ಬಲಗೈ ತುಂಡಾಗಿದೆ ಹಾಗೂ ಶ್ರೀಮತಿ ರಾಜಮ್ಮ, W/O ನಾಗರಾಜ ನಾಯಕ, 50 ವರ್ಷ, ಹುಲ್ಲಹಳ್ಳಿ, ನಂಜನಗೂಡು ತಾಲೂಕು ಇವರಿಗೆ ಬಲಗೈ ತೀವ್ರ ಪೆಟ್ಟಾಗಿರುತ್ತದೆ. ಸಂಸ್ಥೆಯ ಅಧಿಕಾರಿಗಳು ಸ್ಥಳಪರಿಶೀಲನೆ ನಡಿಸಿದ್ದು, ಗಾಯಾಳುಗಳನ್ಬು ನಂಜನಗೂಡಿನ ಸರ್ಕಾರಿ ಆಸ್ಪತ್ರೆಯ ಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ನಂತರ ಹೆಚ್ಚಿನ ಚಿಕಿತ್ಸೆ ಗಾಗಿ ಮೈಸೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ ಹಾಗೂ ಉತ್ತಮ ಚಿಕಿತ್ಸೆಯ ವ್ಯವಸ್ಥೆ ಮಾಡಲಾಗಿರುತ್ತದೆ.
ಲಾರಿ ಚಾಲಕನ ವಿರುಧ್ಧ ಬಿಳಿಗೆರೆ ಪೋಲೀಸ್ ಠಾಣೆಯಲ್ಲಿ ಎಫ್‌ಐ.ಆರ್ ದಾಖಲಾಗಿರುತ್ತದೆ.

ಈ ಅಪಘಾತದಲ್ಲಿ ಸಂಸ್ಥೆಯ ಚಾಲಕರ ತಪ್ಪಿರುವುದಿಲ್ಲ. ಗಾಯಾಳುಗಳ ಚಿಕಿತ್ಸೆಯ ಸಂಪೂರ್ಣ ವೆಚ್ಚವನ್ನು ನಿಗಮವು ಭರಿಸುತ್ತಿದೆ.

ಆದ್ದರಿಂದ ಸಾಮಾಜಿಕ‌ ಜಾಲತಾಣಗಳಲ್ಲಿ ಬಿಂಬಿಸುತ್ತಿರುವ ಹಾಗೆ ಕಿಟಿಕಿಯ ಮೂಲಕ ಬಸ್ಸನ್ನು‌ ಹತ್ತುವಾಗ ನಡೆದಿರುವ ಘಟನೆ ಇದಾಗಿರುವುದಿಲ್ಲ ಎಂದು ಮಂಡ್ಯ ವಿಭಾಗ ಕೆ.ಎಸ್.ಆರ್.ಟಿ.ಸಿ ವ್ಯವಸ್ಥಾಪಕ ನಿರ್ದೇಶಕ ನಾಗರಾಜು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು… ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *