ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆಯಿಂದ ಗುರುಪೌರ್ಣಿಮೆ ಆಚರಣೆ…
- MysoreTV10 Kannada Exclusive
- July 3, 2023
- No Comment
- 66
ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆಯಿಂದ ಗುರುಪೌರ್ಣಿಮೆ ಆಚರಣೆ…
ಮೈಸೂರು,ಜು3,Tv10 ಕನ್ನಡ
ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ವತಿಯಿಂದ ರಾಮಾನುಜ ರಸ್ತೆಯಲ್ಲಿ ಗುರುಪೂರ್ಣಿಮೆ ಅಂಗವಾಗಿ ನಡೆದ ಗೋಪೂಜೆ ಹಾಗೂ ಶಾಲಾ ಮಕ್ಕಳಿಗೆ ಪುಸ್ತಕ ಮತ್ತು ಸಸಿ ನೆಡುವ ಮೂಲಕ ಗುರುವಂದನಾ ಕಾರ್ಯಕ್ರಮ ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ರಘುರಾಮ್ ವಾಜಪೇಯಿ ಮಾತನಾಡಿ ನಮ್ಮಲ್ಲಿರುವ ಚಂಚಲ ಬುದ್ಧಿ ಹೋಗಲಾಡಿಸಲು ಗುರುಗಳ ಧ್ಯಾನ ಮಾಡುತ್ತಾ ಆತ್ಮ ಚಿಂತನೆಯನ್ನು ಮಾಡಬೇಕು,
ನಮ್ಮ ಸಂಸ್ಕೃತಿಯಲ್ಲಿ ಗುರುವಿನ ಸಂಪ್ರದಾಯಕ್ಕೆ ವಿಶಿಷ್ಟ ಸ್ಥಾನ ಇದೆ. ಗುರು ವ್ಯಕ್ತಿ ಅಲ್ಲ ಶಕ್ತಿ. ಗುರುವಿನ ಸನ್ಮಾರ್ಗದಲ್ಲಿ ನಡೆದು ಉತ್ತಮ ಸಮಾಜ ನಿರ್ಮಿಸಬೇಕು ಎಂದು ಅಭಿಪ್ರಾಯ ಪಟ್ಟರು.
ಅರ್ಚಕರ ಸಂಘದ ಅಧ್ಯಕ್ಷರಾದ ವಿದ್ವಾನ್ ಕೃಷ್ಣಮೂರ್ತಿ, ವಿಪ್ರ ಮಹಿಳಾ ಸಂಗಮದ ಅಧ್ಯಕ್ಷರಾದ ಡಾ. ಲಕ್ಷ್ಮಿ, ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ಅಧ್ಯಕ್ಷರಾದ ಎಚ್ಎನ್ ಶ್ರೀಧರ್ ಮೂರ್ತಿ, ಪ್ರಧಾನ ಕಾರ್ಯದರ್ಶಿ ವಿಕ್ರಂ ಅಯ್ಯಂಗಾರ್, ಅಜಯ್ ಶಾಸ್ತ್ರಿ, ಗೋ ಪರಿವಾರ ಸಂಚಾಲಕರು, ರಾಕೇಶ್ ಭಟ್, ವಿನಯ್ ಕಣಗಾಲ್, ಸುಚಿಂದ್ರ, ಮಿರ್ಲೆ ಪನಿಷ್, ನಾಗಶ್ರೀ ಸುಚಿಂದ್ರ, ವಿದ್ಯಾ, ಚಿತ್ರ ಸುಚೀಂದ್ರ, ಶಾರದಾ ವಿದ್ಯಾ ಸಂಸ್ಥೆಯ ಅಧ್ಯಕ್ಷರಾದ ಚಮಯ್ಯ, ಮುಖ್ಯ ಶಿಕ್ಷಕರಾದ ಡಿ ಶಿವ್ ಸ್ವಾಮಿ ಹಾಗೂ ಇನ್ನಿತರರು ಹಾಜರಿದ್ದರು…