ಮೈಸೂರು ತಾಲ್ಲೂಕು ಕಚೇರಿಗೆ ಜಿಲ್ಲಾಧಿಕಾರಿಗಳ ಭೇಟಿ… ಸಾರ್ವಜನಿಕರಿಂದ ಅಹವಾಲು ಸ್ವೀಕಾರ…
- MysoreTV10 Kannada Exclusive
- July 4, 2023
- No Comment
- 68
ಮೈಸೂರು ತಾಲ್ಲೂಕು ಕಚೇರಿಗೆ ಜಿಲ್ಲಾಧಿಕಾರಿಗಳ ಭೇಟಿ… ಸಾರ್ವಜನಿಕರಿಂದ ಅಹವಾಲು ಸ್ವೀಕಾರ…
ಮೈಸೂರು, ಜು 4,Tv10 ಕನ್ನಡ
ಮೈಸೂರು ತಾಲ್ಲೂಕು ಕಚೇರಿಗೆ ಭೇಟಿ ನೀಡಿ ತಾಲ್ಲೂಕಿನ ಎಲ್ಲಾ ಹೋಬಳಿಯ ಉಪತಹಸೀಲ್ದಾರರು, ರಾಜಸ್ವ ನಿರೀಕ್ಷಕರು ಮತ್ತು ಗ್ರಾಮ ಆಡಳಿತ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿದರು.ಈ ಸಂದರ್ಭದಲ್ಲಿ ಆರ್ ಟಿ ಸಿ ಕಾಲಂ 3 ಮತ್ತು 9 ರಲ್ಲಿರುವ ವ್ಯತ್ಯಾಸಗಳನ್ನು ಸರಿಪಡಿಸುವ ನಿಟ್ಟಿನಲ್ಲಿ ಪ್ರಗತಿಯು ಕುಂಠಿತವಾಗಿರುವುದನ್ನು ಗಮನಿಸಿ ಪ್ರಥಮಾಧ್ಯತೆ ಮೇರೆ ಇದನ್ನು ಸರಿಪಡಿಸಲು ಸೂಚನೆ ನೀಡಿದರು.
ತಾಲ್ಲೂಕು ಕಚೇರಿಯಲ್ಲಿ ಇ-ಆಫೀಸ್ ತಂತ್ರಾಂಶವನ್ನು ಅನುಷ್ಠಾನಗೊಳಿಸವಂತೆ ಹಾಗೂ ಗ್ರಾಮಗಳಲ್ಲಿ ಜನಸಂಖ್ಯೆಯ ಅನುಗುಣವಾಗಿ ಸ್ಮಶಾನ ಜಮೀನುಗಳು ಲಭ್ಯವಿರುವ ಬಗ್ಗೆ ಖಚಿತಪಡಿಸಿಕೊಳ್ಳಲು ಹೆಚ್ಚುವರಿ ಜಮೀನು ಅವಶ್ಯವಿದ್ದಲ್ಲಿ ಸರ್ಕಾರಿ ಜಮೀನುಗಳನ್ನು ಕಾಯ್ದಿರಿಸುವ ದಿಸೆಯಲ್ಲಿ ಪ್ರಸ್ತಾವನೆ ಸಲ್ಲಿಸಲು ಸರ್ಕಾರಿ ಜಮೀನು ಲಭ್ಯವಿಲ್ಲದ ಪಕ್ಷದಲ್ಲಿ ಖಾಸಗಿ ಜಮೀನನ್ನು ಖರೀದಿಸಲು ಪ್ರಸ್ತಾವನೆ ಸಲ್ಲಿಸಲು ಸೂಚನೆ ನೀಡಿದರು
ಅಟಲ್ ಜೀ ಜನ ಸ್ನೇಹಿ ಕೇಂದ್ರದಲ್ಲಿ ಸ್ವೀಕರಿಸುತ್ತಿರುವ ಅರ್ಜಿಗಳನ್ನು 7 ದಿವಸದೊಳಗೆ ಕಾನೂನು ಪ್ರಕಾರವಾಗಿ ವಿಲೇವಾರಿ ಮಾಡಲು ಅಗತ್ಯ ಕ್ರಮ ವಹಿಸುವಂತೆ ತಿಳಿಸಿದರು.ಭೂಮಿ ತಂತ್ರಾಂಶದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಗಮನಿಸಿ, ನಿರ್ಧಿಷ್ಠ ಸಮಯದೊಳಗೆ ಇತ್ಯರ್ಥಪಡಿಸಲು ಹಾಗೂ ಕಚೇರಿಗೆ ಹಾಜರಾಗುವ ಸಾರ್ವಜನಿಕರೊಂದಿಗೆ ಸಕರಾತ್ಮಕವಾಗಿ ಸ್ಪಂದಿಸಿ ಅವರ ಕೆಲಸಗಳನ್ನು ಕಾನೂನು ಚೌಕಟ್ಟಿನಲ್ಲಿ ಯಾವುದೇ ವಿಳಂಬ ಮಾಡದೇ ಮಾಡಿಕೊಡಲು ಸ್ಪಷ್ಟ ನಿರ್ದೇಶನ ನೀಡಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಗಿರೀಶ್ ಹಾಗೂ ತಾಲ್ಲೂಕು ಕಚೇರಿಯ ಸಿಬ್ಬಂದಿಗಳು ಉಪಸ್ಧಿತರಿದ್ದರು…