ಎರಡು ಬೈಕ್ ಮುಖಾಮುಖಿ ಢಿಕ್ಕಿ…ಸವಾರರಿಬ್ಬರು ಸ್ಥಳದಲ್ಲೇ ಸಾವು…ಬಸ್ ಓವರ್ ಟೇಕ್ ಮಾಡುವ ವೇಳೆ ಅಪಘಾತ…
- CrimeMysore
- July 4, 2023
- No Comment
- 57
ನಂಜನಗೂಡು,ಜು4,Tv10 ಕನ್ನಡ
ಬಸ್ ಓವರ್ ಟೇಕ್ ಮಾಡಲು ಹೋಗಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸವಾರರು ಮೃತಪಟ್ಟ ಘಟನೆ ನಂಜನಗೂಡು ತಾಲೂಕಿನ ಬದನವಾಳು ಗ್ರಾಮದಲ್ಲಿ ನಡೆದಿದೆ.
ಚಾಮರಾಜನಗರ ತಾಲ್ಲೂಕಿನ ಕಾಳನಹುಂಡಿ ಗ್ರಾಮದ ಮಹದೇವಸ್ವಾಮಿ(40) ಹಾಗೂ ಕೆ.ಆರ್.ನಗರ ತಾಲೂಕಿನ ಚಂದಗಾಲ ಪ್ರಜ್ವಲ್(39) ಮೃತ ದುರ್ದೈವಿಗಳಾಗಿದ್ದಾರೆ.
ನಂಜನಗೂಡು – ಚಾಮರಾಜನಗರ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಬದನವಾಳು ಗ್ರಾಮದ ರಸ್ತೆಯಲ್ಲಿ ಪ್ರಜ್ವಲ್ ಬಸ್ ಓವರ್ ಟೇಕ್ ಮಾಡಲು ಹೋಗಿ ಚಾಮರಾಜನಗರದಿಂದ ನಂಜನಗೂಡಿಗೆ ಬರುತ್ತಿದ್ದ ಮಹದೇವಸ್ವಾಮಿ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.ಸ್ಥಳಕ್ಕೆ ಕವಲಂದೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಆಸ್ಪತ್ರೆಯಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಈ ಸಂಬಂಧ ಕವಲಂದೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…