ವರ್ಗಾವಣೆಗೆ ಬೇಸತ್ತು ಡಿಪೋ ಮುಂದೆ ವಿಷ ಕುಡಿದ ಚಾಲಕ…ಸಚಿವರ ವಿರುದ್ದ ಆಕ್ರೋಷ…

ಮಂಡ್ಯಾ,ಜು5,Tv10 ಕನ್ನಡ
ವರ್ಗಾವಣೆಯಿಂದ ಬೇಸತ್ತ ಕೆ.ಎಸ್.ಆರ್.ಟಿ.ಸಿ.ಚಾಲಕ ಡಿಪೋ ಮುಂದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಡ್ಯ ಜಿಲ್ಲೆ ನಾಗಮಂಗಲ ಡಿಪೋ ಬಳಿ ನಡೆದಿದೆ.ವರ್ಗಾವಣೆ ಹಿಂದೆ ಸಚಿವರ ಚಿತಾವಣೆ ಇದೆ ಎಂದು ಆಕ್ರೋಷ ವ್ಯಕ್ತಪಡಿಸಿದ್ದಾರೆ.
ಸಚಿವರ ವಿರುದ್ಧ ಚಾಲಕ ಗಂಭೀರ ಆರೋಪ ಮಾಡಿದ್ದಾರೆ.
ಚಾಲಕ ಜಗದೀಶ್ ಎಂಬುವರು ವಿಷ ಸೇವಿಸಿದ ಚಾಲಕ.
ಕಳೆದ ಚುನಾವಣೇಲಿ ಜೆಡಿಎಸ್ ಪರ ಕೆಲಸ ಮಾಡಿದ್ದಕ್ಕೆ ವರ್ಗಾವಣೆ ಎಂದು ಜಗದೀಶ್ ಆರೋಪಿಸಿದ್ದಾರೆ.
ವರ್ಗಾವಣೆಗೆ ಡಿಪೋ ಮ್ಯಾನೇಜರ್ ಬೇರೆ ಕಾರಣ ನೀಡಿದ್ದಾರೆ. ಮಹಿಳಾ ನಿರ್ವಾಹಕಿ ಜೊತೆ ಅನುಚಿತವಾಗಿ ವರ್ತಿಸಿದ್ದಾರೆಂದು ದೂರಿದ್ದಾರೆ.
ದೂರಿನನ್ವಯ ಮದ್ದೂರು ಡಿಪೋಗೆ ವರ್ಗಾವಣೆ ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ವಿಷ ಕುಡಿದ ಜಗದೀಶ್ ಗೆ ನಾಗಮಂಗಲ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಲಾಗಿದೆ.
ಹೆಚ್ಚಿನ ಚಿಕಿತ್ಸೆಗೆ ಆದಿಚುಂಚನಗಿರಿ ಆಸ್ಪತ್ರೆಗೆ ರವಾನಿಸಲಾಗಿದೆ.
ನಾಗಮಂಗಲ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಗದಗ ನಗರದ ರೇಪ್ ಕೇಸ್…ಆರೋಪಿಗಳು ಇಬ್ಬರಲ್ಲ ನಾಲ್ವರು…

ಗದಗ ನಗರದ ರೇಪ್ ಕೇಸ್…ಆರೋಪಿಗಳು ಇಬ್ಬರಲ್ಲ ನಾಲ್ವರು…

ಗದಗ ನಗರದ ರೇಪ್ ಕೇಸ್…ಆರೋಪಿಗಳು ಇಬ್ಬರಲ್ಲ ನಾಲ್ವರು… ಗದಗ,ಆ17,Tv10 ಕನ್ನಡ ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ನಿರಂತರ ಅತ್ಯಚಾರ ನಡೆದ ಪ್ರಕರಣದಲ್ಲಿ ಆರೋಪಿಗಳ ಸಂಖ್ಯೆ ನಾಲ್ಕಕ್ಕೆ ಏರಿದೆ.ಮೂರು…
ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…

Leave a Reply

Your email address will not be published. Required fields are marked *