*ಟಿ.ನರಸೀಪುರದಲ್ಲಿ ಯುವ ಬ್ರಿಗೇಡ್ ಕಾರ್ಯಕರ್ತನ ಕೊಲೆ ಪ್ರಕರಣ…6 ಮಂದಿ ವಿರುದ್ದ FIR ದಾಖಲು…ಪಟ್ಟಣ ಬಂದ್…*
- CrimeMysore
- July 10, 2023
- No Comment
- 135

ಟಿ.ನರಸೀಪುರದಲ್ಲಿ ಯುವ ಬ್ರಿಗೇಡ್ ಕಾರ್ಯಕರ್ತನ ಕೊಲೆ ಪ್ರಕರಣ…6 ಮಂದಿ ವಿರುದ್ದ FIR ದಾಖಲು…ಪಟ್ಟಣ ಬಂದ್…

ಟಿ.ನರಸೀಪುರ,ಜು10,Tv10 ಕನ್ನಡ
ಟಿ.ನರಸೀಪುರದಲ್ಲಿ ಯುವಬ್ರಿಗೇಡ್ ಕಾರ್ಯಕರ್ತನ ಕೊಲೆ ಪ್ರಕರಣಕ್ಕೆ ಸಂಭಂಧಿಸಿದಂತೆ 6 ಜನರ ಮೇಲೆ ಪ್ರಕರಣ ದಾಖಲಾಗಿದೆ.
ಟಿ.ನರಸೀಪುರ ನಿವಾಸಿಗಳಾದ ಮಣಿಕಂಠ, ಸಂದೇಶ್, ಶಂಕರೇಗೌಡ, ಅನಿಲ್, ಮಂಜು, ಹ್ಯಾರಿಸ್ ಸೇರಿದಂತೆ ಇತರರ ಮೇಲೆ ಪ್ರಕರಣ ದಾಖಲಾಗಿದೆ.
ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
ಮರಣೋತ್ತರ ಪರೀಕ್ಷೆಗೆ ಮೈಸೂರಿನ ಕೆv ಆರ್ ಆಸ್ಪತ್ರೆಗೆ ಮೃತ ದೇಹ ರವಾನಿಸಲಾಗಿದೆ.
ಹನುಮ ಜಯಂತಿ ಮೆರವಣಿಗೆಯಲ್ಲಿ ಪುನೀತ್ ರಾಜ್ ಕುಮಾರ್ ಪೋಟೊ ತೆಗೆಸಿದ್ದೆ ಕಾರಣವಾಯಿತಾ ಕೊಲೆಗೆ ಎನ್ನಲಾಗಿದೆ.
ಮೊನ್ನೆ ಟಿ.ನರಸೀಪುರದಲ್ಲಿ ನಡೆದಿದ್ದ ಹನುಮ ಜಯಂತಿ ವೇಳೆ ವ್ಯಾನ್ ನಲ್ಲಿ ಭಾರತ ಮಾತೇ ಪೋಟೊ ಮುಂದೆ ಪುನೀತ್ ರಾಜ್ ಕುಮಾರ್ ಪೋಟೋ ಹಾಕಿದ್ದರು.ಈ ವೇಳೆ ಇದಕ್ಕೆ ಕೆಲವರ ವಿರೋಧ ವ್ಯಕ್ತವಾಗಿತ್ತು.ಈ ವಿಚಾರವಾಗಿ ಇಲ್ಲಿ ಯಾವ ವ್ಯಕ್ತಿಯ ಪೋಟೋ ಹಾಕೋದು ಬೇಡ ಎಂದು ತೆಗೆಸಿದ್ದ ಕೊಲೆಯಾದ ವೇಣುಗೋಪಾಲ್.
ಆ ವೇಳೆ ಯಾವುದೇ ವಿರೋಧ ವ್ಯಕ್ತವಾಗಿರಲಿಲ್ಲ.ನಂತರ ಈ ವಿಚಾರವಾಗಿ ಮಾತಿಗೆ ಮಾತು ಬೆಳೆದು ಅವರ ಗುಂಪಿನಲ್ಲೆ ಗಲಾಟೆಯಾಗಿತ್ತು.
ನಂತರ ನಿನ್ನೆ ಮಧ್ಯಾಹ್ನ ಕೂಡ ಜಗಳವಾಗಿತ್ತು.
ಬಳಿಕ ರಾತ್ರಿ ರಾಜಿ ಪಂಚಾಯಿತಿ ನೆಪದಲ್ಲಿ ಕರೆಸಿಕೊಂಡು ಕೊಲೆ ಮಾಡಲಾಗಿದೆ ಎಂದು
ಕೊಲೆಯಾದ ವೇಣುಗೋಪಾಲ್ ಪತ್ನಿ ಪೂರ್ಣಿಮ ಹೇಳಿಕೆ ನೀಡಿದ್ದಾರೆ.
ವೇಣುಗೋಪಾಲ್ ಕೊಲೆಗೆ ಟಿ.ನರಸೀಪುರದಲ್ಲಿ
ಸ್ವಯಂ ಪ್ರೇರಿತ ಬಂದ್‌ಗೆ ಮಾಡಲಾಗುತ್ತಿದೆ.
ಹಿಂದೂ ಪರ ಸಂಘಟನೆಗಳಿಂದ ಬಂದ್‌ಗೆ ಕರೆ ನೀಡಿದ ಹಿನ್ನಲೆ
ಸ್ವಯಂ ಪ್ರೇರಿತವಾಗಿ ಅಂಗಡಿ ಮಾಲೀಕರು ಬಂದ್ ಮಾಡಿದ್ದಾರೆ.
ಟಿ.ನರಸೀಪುರ ಪಟ್ಟಣದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ.
ಅಹಿತಕರ ಘಟನೆ ಜರುಗದಂತೆ ಪೋಲೀಸ್ ಕಟ್ಟೆಚ್ಚರ ವಹಿಸಿದ್ದಾರೆ.
ಮೃತ ವ್ಯಕ್ತಿ ವೇಣುಗೋಪಾಲ್ ಮನೆ ಮುಂಭಾಗ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ…