ನದಿಗೆ ಹಾರಿ ದೇವನೂರು ಶ್ರೀಮಠದ ಸ್ವಾಮೀಜಿ ಆತ್ಮಹತ್ಯೆ…ಖಿನ್ನತೆಯಿಂದ ನಿರ್ಧಾರ…

ನಂಜನಗೂಡು,ಜು10,Tv10 ಕನ್ನಡ
ಕಿವಿ ನೋವಿನಿಂದ ಬಳಲುತ್ತಿದ್ದ ಸ್ವಾಮೀಜಿ ಯೊಬ್ಬರು ಖಿನ್ನತೆಗೆ ಒಳಗಾಗಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಂಜನಗೂಡು ತಾಲೂಕಿನ ದೇವನೂರು ಶ್ರೀ ಮಠದಲ್ಲಿ ನಡೆದಿದೆ.
ದೇವನೂರು ಶ್ರೀ ಮಠದ ಶ್ರೀ ಶಿವಪ್ಪ ಸ್ವಾಮಿಗಳೇ ಆತ್ಮಹತ್ಯೆ ಮಾಡಿಕೊಂಡ ಸ್ವಾಮೀಜಿ.
ದೇವನೂರು ಶ್ರೀ ಗುರು ಮಲ್ಲೇಶ್ವರ ಮಠಾಧ್ಯಕ್ಷರಾದ ಶ್ರೀ ಮಹಾಂತ ಸ್ವಾಮಿಗಳವರ ಶಿಷ್ಯ ರಾಗಿದ್ದ ಸ್ವಾಮಿಗಳು ಕಳೆದ 40 ವರ್ಷಗಳಿಂದ ಶ್ರೀಮಠದಲ್ಲಿ ಒಣ ಭಿಕ್ಷೆ, ಕಾಯಕದಲ್ಲಿ ತೊಡಗಿಸಿಕೊಂಡಿದ್ದರು.
ತಮ್ಮ ಕಾಯಕದಿಂದ ಶ್ರೀ ಮಠದಲ್ಲಿ ಉತ್ತಮ ಬಾಂಧವ್ಯ ಹೊಂದಿದ್ದು ಶಿವಪ್ಪ ದೇವರೇ ಎಂದು ಖ್ಯಾತಿ ಪಡೆದಿದ್ದರು.
ಇತ್ತೀಚೆಗೆ ಕಿವಿ ನೋವಿನ ಸಮಸ್ಯೆಯಿಂದ ಬಳಲುತ್ತಿದ್ದ ಶ್ರೀಗಳು ಖಿನ್ನತೆಗೆ ಒಳಗಾಗಿ ಕಳೆದ ಕೆಲವು ದಿನಗಳಿಂದ ಮಠದಿಂದ ಕಾಣೆಯಾಗಿದ್ದರು.

ಟಿ ನರಸೀಪುರ ತಾಲೂಕಿನ ಮುಡುಕುತೊರೆ ಬಳಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು ಸ್ವಾಮೀಜಿ ಮೃತದೇಹ ಇಂದು ನರಸೀಪುರದ ಬಳಿ ನದಿಯಲ್ಲಿ ದೊರೆತಿದೆ.ಶ್ರೀ ಮಠದ ಮಠಾಧ್ಯಕ್ಷರಾದ ಮಹಾಂತ ಸ್ವಾಮಿಗಳು ಸೇರಿದಂತೆ ದೇವನೂರಿನ ಪ್ರಮುಖರು ಹಾಗು ಮಠದ ಭಕ್ತರು ಅವರ ಸಾವಿಗೆ ತೀವ್ರ ಸಂತಾಪ ಸೂಚಿಸಿದ್ದಾರೆ…

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *