ಜುಲೈ 15 ರಂದು ಸಾಂಸ್ಕೃತಿಕ ಹಬ್ಬ: ಕುಲಪತಿ ಡಾ.ಪುಟ್ಟರಾಜು

ಮಂಡ್ಯ ವಿಶ್ವವಿದ್ಯಾಲಯದ ವತಿಯಿಂದ ಜುಲೈ 15 ರಂದು ಬೆಳಿಗ್ಗೆ 9 ಗಂಟೆಗೆ ಮೊದಲ ಬಾರಿಗೆ ವಿವಿ ಆವರಣದಲ್ಲಿ ಸಾಂಸ್ಕೃತಿಕ ಹಬ್ಬವನ್ನು ಆಯೋಜಿಸಲಾಗಿದೆ ಎಂದು ಮಂಡ್ಯ ವಿಶ್ವವಿದ್ಯಾಲಯದ ಕುಲಪತಿ ಡಾ.ಪುಟ್ಟರಾಜು ಅವರು ತಿಳಿಸಿದರು.

ಅವರು ಇಂದು ಮಂಡ್ಯ ವಿವಿ ಆಡಳಿತ ಭವನದ ಕುಲಪತಿಗಳ ಕಛೇರಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು.

ಮಂಡ್ಯ ವಿಶ್ವವಿದ್ಯಾಲಯಕ್ಕೆ 2023-24ನೇ ಶೈಕ್ಷಣಿಕ ವರ್ಷದಿಂದ ಮಂಡ್ಯ ಜಿಲ್ಲೆಯ 47 ಕಾಲೇಜಿನ 25 ಸಾವಿರ ಮಕ್ಕಳು ಕೂಡ ವಿವಿಗೆ ಒಳಪಡುತ್ತಾರೆ. ಈ ಹಿನ್ನೆಲೆಯಲ್ಲಿ ಸಾಂಸ್ಕೃತಿಕ ಹಬ್ಬದ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಯೋಜಿಸಲಾಗಿದೆ ಎಂದರು‌.

ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಚಲುವರಾಯಸ್ವಾಮಿ ಅವರು ಸಾಂಸ್ಕೃತಿಕ ಹಬ್ಬವನ್ನು ಉದ್ಘಾಟಿಸಲಿದ್ದು, ಶಾಸಕ ಪಿ ರವಿಕುಮಾರ್ ಅವರು ಬಹುಮಾನ ವಿತರಣೆ ಮಾಡಲಿದ್ದಾರೆ ಎಂದರು.

ಮುಖ್ಯ ಅತಿಥಿಗಳಾಗಿ ಸಂಸದರಾದ ಸುಮಲತಾ ಅಂಬರೀಶ್, ವಿಧಾನ ಪರಿಷತ್ ಶಾಸಕರಾದ ಮರಿತಿಬ್ಬೇಗೌಡ, ಮಧು ಜಿ ಮಾದೇಗೌಡ, ದಿನೇಶ್ ಗೂಳಿಗೌಡ, ವಿಧಾನಸಭಾ ಶಾಸಕರುಗಳಾದ ಪಿ.ಎಂ ನರೇಂದ್ರಸ್ವಾಮಿ, ಎ.ಬಿ ರಮೇಶ್ ಬಂಡಿಸಿದ್ದೇಗೌಡ, ದರ್ಶನ್ ಪುಟ್ಟಣ್ಣಯ್ಯ, ಹೆಚ್ ಟಿ ಮಂಜುನಾಥ್, ಕೆ.ಎಂ ಉದಯ್ ಭಾಗವಹಿಸಲಿದ್ದಾರೆ ಎಂದರು‌.

ಈ ಸಾಂಸ್ಕೃತಿಕ ಹಬ್ಬದಲ್ಲಿ 4000 ಮಕ್ಕಳು ಭಾಗಿಯಾಗಲಿದ್ದು, ಫ್ಯಾಷನ್ ಸೋ, ಜಾನಪದ ಕಲೆ, ಎಥ್ನಿಕ್ ವೇರ್, ಕ್ಯಾಂಡಿಡ್ ಫೋಟೋ, ಗ್ರೂಪ್ ಫೋಟೋ, ಆಹಾರದ ಮಳಿಗೆ, ತಿಂಡಿ ಪ್ರದರ್ಶನ, ಜಾನಪದ ಉತ್ಸವ ಹಾಗೂ ಮಾರಾಟ ಮಳಿಗೆ ಸೇರಿದಂತೆ ದಿನವಿಡೀ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ಸಾಂಸ್ಕೃತಿಕ ಹಾಗೂ ಕ್ರೀಡಾ ಉತ್ಸವದಲ್ಲಿ ಪಾಲ್ಗೊಂಡವರಿಗೆ ಪ್ರೊತ್ಸಾಹ ನೀಡಿ ಗೌರವಿಸಲಾಗುತ್ತದೆ ಎಂದರು‌.

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು… ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *