ಸದನದಲ್ಲಿ ಮೊಳಗಿದ ಮಹಾಘಟಬಂಧನ್ ಸಭೆ ಎಫೆಕ್ಟ್…ಪ್ರತಿಪಕ್ಷಗಳ ಪ್ರತಿಭಟನೆ…

ಬೆಂಗಳೂರು,ಜು19,Tv10 ಕನ್ನಡ
ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ಮಹಾಘಟಬಂಧನ್ ಸಭೆ ಪ್ರಕ್ರಿಯೆಯಲ್ಲಿ ಐಎಎಸ್ ಅಧಿಕಾರಿಗಳನ್ನ ಬಳಸಿಕೊಳ್ಳಲಾಗಿದೆ ಎಂದು ಆರೋಪಿಸಿ ಪ್ರತಿಪಕ್ಷಗಳು ಸದನದಲ್ಲಿ ಪ್ರತಿಭಟನೆ ನಡೆಸಿದವು. ಎರಡು ದಿನಗಳ ಮಹಾಘಟಬಂಧನ್ ಸಭೆಗೆ ಬೇರೆ ರಾಜ್ಯಗಳಿಂದ ಬಂದಿದ್ದ ಗಣ್ಯರ ಅತಿಥಿ ಸೇವೆಗೆ ಐಎಎಸ್ ಅಧಿಕಾರಿಗಳನ್ನು ಬಳಸಿ ಕೊಳ್ಳಲಾಗಿದೆ ಎಂದು ಆರೋಪಿಸಿ ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರು ವಿಧಾನಸಭೆಯಲ್ಲಿ ಪ್ರತಿಭಟನೆ ನಡೆಸಿದರು.
ಸದನ ಸಮಾವೇಶಗೊಂಡ ಕೂಡಲೇ ಬಿಜೆಪಿಯ ಆರ್ ಅಶೋಕ್ ಈ ವಿಷಯ ಪ್ರಸ್ತಾಪಿಸಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಐಎಎಸ್ ಅಧಿಕಾರಿಗಳನ್ನು ಬೇರೆ ಬೇರೆ ವಿಷಯಗಳಿಗೆ ಬಳಸಿಕೊಂಡು ಶಿಷ್ಟಾಚಾರ ಉಲ್ಲಂಘಿಗಸಲಾಗಿದೆ ಎಂದು ಆರೋಪಿಸಿದರು.
ಇದಕ್ಕೆ ಜೆಡಿಎಸ್ ಸದಸ್ಯರು ಕೂಡ ಧ್ವನಿಗೂಡಿಸಿ ಸರ್ಕಾರದ ನಡೆಯನ್ನು ಖಂಡಿಸಿದರು.ಆಗ ಆಡಳಿತ ಪಕ್ಷದ ಸದಸ್ಯರು ಪ್ರತಿಪಕ್ಷಗಳ ನಡೆಯನ್ನು ತೀವ್ರವಾಗಿ ವಿರೋಧಿಸಿದರು.
ಕಾನೂನು ಸಚಿವ ಎಚ್. ಕೆ ಪಾಟೀಲ್ ಮಾತನಾಡಿ ಅಶೋಕ್ ಅವರು ಇಲ್ಲಸಲ್ಲದ ಆರೋಪ ಮಾಡಬಾರದು.
ಸರ್ಕಾರ ಐಎಎಸ್ ಅಧಿಕಾರಿಗಳನ್ನು ಕ್ಷುಲ್ಲಕ ಕಾರಣಗಳಿಗೆ ಬಳಸಿಕೊಂಡಿಲ್ಲ, ರಾಜಕೀಯ ನಾಯಕರನ್ನು ಸ್ವಾಗತಿಸಲು ಅವರನ್ನು ಹೋಟೆಲ್ ನಿಂದ ಕರೆತರಲು ಕಳುಹಿಸಲಾಗಿದೆ ಎಂಬ ಆರೋಪ‌ ಸರಿಯಲ್ಲ.
ನಾವು ಶಿಷ್ಟಾಚಾರ ಉಲ್ಲಂಘಿಸಿಲ್ಲ ಎಂದು ಸ್ಪಷ್ಟಪಡಿಸಿದರು.
ಈ ವೇಳೆ ಹಿರಿಯ ಶಾಸಕ ಸುರೇಶ್ ಕುಮಾರ್ ಮಾತನಾಡಿ ಗಣ್ಯರನ್ನು ಕರೆತರಲು ಖಾಸಗಿ ವ್ಯವಸ್ಥೆಯನ್ನು ಮಾಡಬಹುದಾಗಿತ್ತು ಆದರೆ ಐಎಸ್ ಅಧಿಕಾರಿಗಳನ್ನು ಬಳಸಿಕೊಂಡಿರುವುದು ಸರಿಯಲ್ಲ ಎಂದು ದೂರಿದರು.
ಹೀಗೆ ಒಬ್ಬರಾದ ನಂತರ ಒಬ್ಬರು ಆಡಳಿತ ಪಕ್ಷದ ವಿರುದ್ಧ ಪ್ರತಿಪಕ್ಷದವರು ಮುಗಿಬಿದ್ದರು.
ಈ ಸಂದರ್ಭದಲ್ಲಿ ವಿಧಾನಸಭಾಧ್ಯಕ್ಷ ಯು ಟಿ ಖಾದರ್ ಎಲ್ಲರಲ್ಲೂ ದಯಮಾಡಿ ಗಲಾಟೆ ಮಾಡಬೇಡಿ ಸದನ ಮುಂದುವರೆಯಲಿ ಎಂದು ಹೇಳಿದರು.
ಆದರೂ ಬಗ್ಗದ ಬಿಜೆಪಿ ಮತ್ತು ಜೆಡಿಎಸ್ ಶಾಸಕರು ಸದನದ ಬಾವಿಗಳಿಗೆ ಪ್ರತಿಭಟನೆ ಮಾಡಿ ಗದ್ದಲ ಎಬ್ಬಿಸಿದರು ಈ ವೇಳೆ‌ ಡಾ.ಅಶ್ವಥ್ ನಾರಾಯಣ ಮತ್ತಿತರರನ್ನು ಮಾರ್ಷಲ್ ಗಳು ಹೊರ ಕಳುಹಿಸಿದ ಪ್ರಸಂಗವು ನಡೆಯಿತು.
ಒಟ್ಟಾರೆ ಪ್ರತಿಪಕ್ಷಗಳ ಗದ್ದಲದಿಂದಾಗಿ ಬುಧವಾರದ ಕಲಾಪ ಸ್ಥಗಿತವಾಯಿತು…

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *