ಮಂಡ್ಯ ಉಪವಿಭಾಗಾಧಿಕಾರಿಯಾಗಿ ಎಂ.ಶಿವಮೂರ್ತಿ ನೇಮಕ
- TV10 Kannada Exclusive
- July 19, 2023
- No Comment
- 104
ಮಂಡ್ಯ: ಮಂಡ್ಯ ಉಪವಿಭಾಗಾಧಿಕಾರಿಯಾಗಿ ಎಂ.ಶಿವಮೂರ್ತಿ ಅವರನ್ನು ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ.
ಮಂಡ್ಯ ಉಪವಿಭಾಗಾಧಿಕಾರಿ (ಪ್ರಭಾರಿ) ಯಾಗಿ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಉಪನಿರ್ದೇಶಕ ಕೃಷ್ಣಕುಮಾರ್ ಕರ್ತವ್ಯ ನಿರ್ವಹಿಸುತ್ತಿದ್ದರು. ಇವರ ಸ್ಥಾನಕ್ಕೆ ಎಂ.ಶಿವಮೂರ್ತಿ ಅವರಿಗೆ ಪದೋನ್ನತಿ ನೀಡಿ ಮಂಡ್ಯ ಉಪವಿಭಾಗಾಧಿಕಾರಿಯಾಗಿ ನಿಯೋಜಿಸಿ ಸರ್ಕಾರ ಆದೇಶ ಹೊರಡಿಸಿದೆ.
ಎಂ.ಶಿವಮೂರ್ತಿ ಅವರು ಈ ಹಿಂದೆ ಕೆ.ಆರ್.ಪೇಟೆಯಲ್ಲಿ ಮೂರು ವರ್ಷ ತಹಶೀಲ್ದಾರ್ ಆಗಿ ಕರ್ತವ್ಯ ನಿರ್ವಹಿಸಿದ್ದರು.
ನಂಜನಗೂಡಿನಲ್ಲಿ ತಹಶಿಲ್ದಾರ್ ಆಗಿ ಕೆಲಸ ನಿರ್ವಹಿಸಿದ್ದಾರೆ ರಾಜೀವ್ ಗಾಂಧಿ ಇನ್ಸ್ಟಿಟ್ಯೂಟ್ ಆಫ್ ಚೆಸ್ಟ್ ಡಿಸೀಸ್ ನಲ್ಲಿ ಆಡಳಿತಾಧಿಕಾರಿಯಾಗಿ ಕೆಲಸ ನಿರ್ವಹಿಸುತ್ತಿದ್ದ ಎಂ.ಶಿವಮೂರ್ತಿ ಅವರಿಗೆ ಪದೋನ್ನತಿ ನೀಡಿ ಸರ್ಕಾರ ಮಂಡ್ಯ ಉಪವಿಭಾಗಾಧಿಕಾರಿಯಾಗಿ ನಿಯೋಜಿಸಿದೆ.