ಸಿಸಿಬಿ ಪೊಲೀಸರ ಕಾರ್ಯಾಚರಣೆ…40ಕೆ.ಜಿ.ಗಾಂಜಾ ವಶ…ಇಬ್ಬರ ಬಂಧನ…
- TV10 Kannada Exclusive
- July 23, 2023
- No Comment
- 64
ಮೈಸೂರು,ಜು23,Tv10 ಕನ್ನಡ
ಸಿಸಿಬಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ 40 ಕೆಜಿ ಗಾಂಜಾ ವಶಪಡಿಸಿಕೊಳ್ಳಲಾಗಿದ್ದು ಇಬ್ಬರು ಆರೋಪಿಗಳನ್ನ ಬಂಧಿಸಿದ್ದಾರೆ.ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯೊಂದರಲ್ಲಿ ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ ಮಾಹಿತಿ ಅರಿತ ಸಿಸಿಬಿ ಪೊಲೀಸರು ದಾಳಿ ನಡೆಸಿ 40 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ.ಪ್ರಕರಣಕ್ಕೆ ಸಂಭಂಧಪಟ್ಟಂತೆ ಇಬ್ಬರನ್ನ ಅರೆಸ್ಟ್ ಮಾಡಲಾಗಿದೆ.ಡಿಸಿಪಿ ಜಾಹ್ನವಿ ರವರ ಮಾರ್ಗದರ್ಶನದಲ್ಲಿ ಸಿಸಿಬಿ ಎಸಿಪಿ ಸಂದೇಶ್ ಕುಮಾರ್ ನೇತೃತ್ವದಲ್ಲಿ ಇನ್ಸ್ಪೆಕ್ಟರ್ ಶೇಖರ್ ರವರು ಕಾರ್ಯಾಚರಣೆಯನ್ನ ಯಶಸ್ವಿಗೊಳಿಸಿದ್ದಾರೆ.ನಗರ ಪೊಲೀಸ್ ಆಯುಕ್ತ ಬಿ.ರಮೇಶ್ ಹಾಗೂ ಡಿಸಿಪಿ ಮುತ್ತುರಾಜ್ ರವರು ಸಿಸಿಬಿ ಪೊಲೀಸರ ಕಾರ್ಯಾಚರಣೆಯನ್ನ ಪ್ರಶಂಸಿಸಿದ್ದಾರೆ…