ಮೈಸೂರು:ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ…ತಂತಿ ಕೆಳಗೆ ಸಿಲುಕಿದ ವಾಹನ ಹೊರ ತೆರೆಯಲು ಯತ್ನಿಸಿ ಇಬ್ಬರು ಸಾವು…ಮೂವರಿಗೆ ಗಾಯ…

  • Crime
  • July 28, 2023
  • No Comment
  • 339

ಮೈಸೂರು,ಜು28,Tv10 ಕನ್ನಡ

ಕಾಂಪೌಂಡ್ ಹಾಗೂ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರನ್ನ ಹೊರತರಲು ಯತ್ನಿಸಿದ ಇಬ್ಬರು ಯುವಕರು ವಿದ್ಯುತ್ ಸಂಪರ್ಕ ಸಾಧಿಸಿ ದಾರುಣವಾಗಿ ಮೃತಪಟ್ಟ ಘಟನೆ ಮೈಸೂರಿನ ಮಾನಂದವಾಡಿ ರಸ್ತೆಯಲ್ಲಿ ನಡೆದಿದೆ.ಯುವಕರ ಸಹಾಯಕ್ಕೆ ಬಂದ ಮೂವರು ಗಾಯಗೊಂಡಿದ್ದಾರೆ.ಅಶೋಕಾ ಪುರಂ ನಿವಾಸಿಗಳಾದ ಕಿರಣ್ ಹಾಗೂ ರವಿಕುಮಾರ್ ಮೃತ ದುರ್ದೈವಿಗಳು.ಇವರ ನೆರವಿಗೆ ಬಂದ ರವಿ,ಸಂದೇಶ್,ಶಿವಕುಮಾರ್ ವಿದ್ಯುತ್ ಶಾಕ್ ನಿಂದ ಗಾಯಗೊಂಡು ಕೆ.ಆರ್.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಗುರುವಾರ ತಡರಾತ್ರಿ ಘಟನೆ ನಡೆದಿದೆ.ಸಂಸದ ಶ್ರೀನಿವಾಸ್ ಪ್ರಸಾದ್ ರವರ ಸಂಬಂಧಿಕರಿಗೆ ಸೇರಿದ ಇನೋವಾ ಕಾರನ್ನ ಟ್ರಯಲ್ ನೋಡುವುದಾಗಿ ರವಿಕುಮಾರ್ ಪಡೆದಿದ್ದಾರೆ.ಮಾನಂದವಾಡಿ ರಸ್ತೆಯಲ್ಲಿ ರವಿಕುಮಾರ್,ಭಾಸ್ಕರ್,ರವಿ,ಸಂದೇಶ್ ಹಾಗೂ ಶಿವಕುಮಾರ್ ಆಶೋಕಾಪುರಂ ನತ್ತ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿದ ಕಾರು ಕಾಂಪೌಂಡ್ ಗೆ ಢಿಕ್ಕಿ ಹೊಡೆದು ನಂತರ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದೆ.ಕಾರಿನಿಂದ ನಾಲ್ವರೂ ಹೊರಬಂದ ನಂತರ ವಿದ್ಯುತ್ ತಂತಿ ಸಂಪರ್ಕ ಪಡೆದಿದೆ.ಕಾಂಪೌಂಡ್ ಹಾಗೂ ಕಂಬದ ನಡುವೆ ಸಿಲುಕಿದ ಕಾರನ್ನ ಹೊರತರಲು ಯತ್ನಿಸಿದ್ದಾರೆ.ಈ ವೇಳೆ ಆಟೋದಲ್ಲಿ ಬರುತ್ತಿದ್ದ ಡ್ರೈವರ್ ಕಿರಣ್ ಕುಮಾರ್ ನೆರವಿಗೆ ಬಂದಿದ್ದಾರೆ.ಕಾರನ್ನ ಹೊರತರುವ ಯತ್ನದಲ್ಲಿದ್ದ ಇವರಿಗೆ ವಿದ್ಯುತ್ ಸಂಪರ್ಕ ಸಾಧಿಸಿದೆ.ಹೈವೋಲ್ಟೇಜ್ ತಂತಿ ಸಂಪರ್ಕ ಸಾಧಿಸಿದ ಪರಿಣಾಮ ರವಿಕುಮಾರ್ ಕುಸಿದುಬಿದ್ದಿದ್ದಾರೆ.ನೆರವಿಗೆ ಬಂದ ಆಟೋಡ್ರೈವರ್ ಕಿರಣ್ ರವರೂ ಸಹ ಮೃತಪಟ್ಟಿದ್ದಾರೆ.ಇವರಿಬ್ಬರ ನೆರವಿಗೆ ಬಂದ ರವಿ,ಸಂದೇಶ್,ಶಿವಕುಮಾರ್ ಗೂ ಶಾಕ್ ಹೊಡೆದಿದೆ.ಐವರನ್ನೂ ಕೆ.ಆರ್.ಆಸ್ಪತ್ರೆಗೆ ಸಾಗಿಸಲಾಗಿದೆ.ರವಿಕುಮಾರ್ ಹಾಗೂ ಕಿರಣ್ ಮೃತಪಟ್ಟಿದ್ದಾರೆ.ಮೂವರಿಗೆ ಗಾಯಗಳಾಗಿವೆ.ಭಾಸ್ಕರ್ ಅವಘಢದಿಂದ ತಪ್ಪಿಸಿಕೊಂಡಿದ್ದಾರೆ.

ಕೆ.ಆರ್.ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ…

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *