ಮೈಸೂರು ಮಹಾನಗರ ಪಾಲಿಕೆ ಆಡಳಿತ ಪಕ್ಷದ ನಾಯಕರಾಗಿ ಮ.ವಿ. ರಾಮಪ್ರಸಾದ್ ನೇಮಕ…

ಮೈಸೂರು,ಜು28,Tv10 ಕನ್ನಡ

55 ನೇ ವಾರ್ಡ್ ನ ಕಾರ್ಪೊರೇಟರ್ ಮ.ವಿ.ರಾಂಪ್ರಸಾದ್ ರವರನ್ನ ಮೈಸೂರು ಮಹಾನಗರ ಪಾಲಿಕೆ ಆಡಳಿತ ಪಕ್ಷದ ನಾಯಕರಾಗಿ ನೇಮಕ ಮಾಡಲಾಗಿದೆ.ಇಂದು ನಡೆದ ಮೈಸೂರು ಮಹಾನಗರ ಪಾಲಿಕೆಯ ಕೌನ್ಸಿಲ್ ಸಭೆಯಲ್ಲಿ ಮಹಾಪೌರರು ಘೋಷಿಸಿದ್ದಾರೆ.
ನಗರ ಪಾಲಿಕೆಯಲ್ಲಿ ಬಿಜೆಪಿ ಆಡಳಿತ ಪಕ್ಷವಾಗಿರುವುದರಿಂದ ಆ ಪಕ್ಷದ ಅಧ್ಯಕ್ಷರು ಹಾಗೂ ಶಾಸಕರಾದ ಟಿ ಎಸ್ ಶ್ರೀವತ್ಸ ರವರು ಮಹಾಪೌರರಿಗೆ ಪತ್ರ ಬರೆದು ಮ ವಿ ರಾಮಪ್ರಸಾದ್ ಅವರನ್ನು ಆಡಳಿತ ಪಕ್ಷದ ನಾಯಕರಾಗಿ ಮಾಡಬೇಕೆಂದು ತಿಳಿಸಿರುವ ಮೇರೆಗೆ ನೇಮಕ ಮಾಡಲಾಗಿದೆ.

ಮ ವಿ ರಾಮಪ್ರಸಾದ್ ರವರು 55ನೇ ವಾರ್ಡಿನಿಂದ ಮೂರು ಬಾರಿ ನಗರಪಾಲಿಕೆ ಸದಸ್ಯರಾಗಿ ಆಯ್ಕೆಯಾಗಿ ಜನಮನ ಮನ್ನಣೆಯನ್ನು ಗಳಿಸಿರುತ್ತಾರೆ. ರಾಮ್ ಪ್ರಸಾದ್ ಅವರು ಕಳೆದ ಸಾಲುಗಳಲ್ಲಿ ವರ್ಕ್ಸ್ ಕಮಿಟಿ ಅಧ್ಯಕ್ಷರಾಗಿ, ವಿರೋಧ ಪಕ್ಷದ ನಾಯಕರಾಗಿ ಸೇವೆಯನ್ನು ಸಲ್ಲಿಸಿರುತ್ತಾರೆ. ಅಲ್ಲದೆ ಮ ವಿ ರಾಮಪ್ರಸಾದ್ ಅವರು ಕುಡಿಯವ ನೀರಿನ ಬಗ್ಗೆ, ಬೀದಿ ದೀಪದ, ನಾಗರೀಕರ ಕುಂದು ಕೊರತೆಗಳ ಬಗ್ಗೆ ವಿನೂತನವಾಗಿ ಕೌನ್ಸಿಲ್ ಸಭೆಗಳಲ್ಲಿ ಗಮನ ಸೆಳೆದಿರುತ್ತಾರೆ…

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *