ರಾಂಪುರ ಗ್ರಾ.ಪಂ.ಅಧ್ಯಕ್ಷ ಚುನಾವಣೆ…ಮುದುಡಿದ ಕಾಂಗ್ರೆಸ್…ಅರಳಿದ ಕಮಲ…

ನಂಜನಗೂಡು,ಜು28,Tv10 ಕನ್ನಡ
ನಂಜನಗೂಡು ತಾಲೂಕು ರಾಂಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನ ಬಿಜೆಪಿ ಪಾಲಾಗಿದೆ.ಸಿ.ಎಂ ಸ್ವ ಕ್ಷೇತ್ರದ ಗ್ರಾಮ ಪಂಚಾಯ್ತಿ ಅಧಿಕಾರದ ಗದ್ದುಗೆ ಬಿಜೆಪಿ ತೆಕ್ಕೆಗೆ ಬಂದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಗೆಲುವಿಗೆ ಪ್ರಮುಖ ಪಾತ್ರ ನಿರ್ವಹಿಸಿದ್ದ ರಾಂಪುರ ಗ್ರಾ.ಪಂ.ಅಧ್ಯಕ್ಷ ಸ್ಥಾನ ಬಿಜೆಪಿಗೆ ಒಲಿದಿದೆ.ಇಂದು ನಡೆದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ರಾಣಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಕೆಂಬಾಲು ಗ್ರಾಮದ ಸಿದ್ದನಾಯ್ಕ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ರಾಂಪುರ ಗ್ರಾಮ ಪಂಚಾಯಿತಿಯಲ್ಲಿ ಒಟ್ಟು 21 ಜನ ಸದಸ್ಯರಿದ್ದಾರೆ.
ಬಿಜೆಪಿ ಬೆಂಬಲಿತ ಅಭ್ಯರ್ಥಿ ರಾಣಿ 12 ಮತಗಳನ್ನು ಪಡೆದು ಅಧ್ಯಕ್ಷರಾಗಿ ಆಯ್ಕೆಯಾದರೆ.
ಕೆಂಬಾಲು ಗ್ರಾಮದ ಸಿದ್ದನಾಯಕ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಚುನಾವಣಾ ಅಧಿಕಾರಿ ಮಲ್ಲಿಕಾರ್ಜುನ ಸ್ವಾಮಿ, ಮಹದೇವ ಪ್ರಸಾದ್ ಗ್ರಾಪಂ ಅಭಿವೃದ್ಧಿ ಅಧಿಕಾರಿ ವಿಜೇಂದ್ರ ಸಮ್ಮುಖದಲ್ಲಿ ಶಾಂತಿಯುತವಾಗಿ ಚುನಾವಣೆ ನಡೆದಿದೆ. ಹುಲ್ಲಹಳ್ಳಿ ಪೊಲೀಸ್ ಠಾಣೆಯ ಪಿಎಸ್ಐ ಅರಸು ಮತ್ತು ದೊಡ್ಡಯ್ಯ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ರು. ಬಿಜೆಪಿ ಮುಖಂಡರಾದ ಅಹಲ್ಯಾ ಗ್ರಾಮದ ಸೋಮಣ್ಣ ಬಿದರಗೂಡು ಕುಮಾರ್ ಸಿದ್ದರಾಜು ಚಂದ್ರು ಮಹದೇವಸ್ವಾಮಿ ಸುರೇಶ ಪ್ರಕಾಶ್ ಸೇರಿದಂತೆ ಇತರ ಮುಖಂಡರು ಗೆಲುವನ್ನ ಸಂಭ್ರಮಿಸಿದರು…

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *