ಶಂಕಿತ ವ್ಯಕ್ತಿಗಳ ಬಗ್ಗೆ ಮಾಹಿತಿ ನೀಡಿ…ಸಾರ್ವಜನಿಕರಿಗೆ ಉದಯಗಿರಿ ಇನ್ಸ್ಪೆಕ್ಟರ್ ರಾಜು ಮನವಿ…

ಮೈಸೂರು,ಜು30,Tv10 ಕನ್ನಡ

ಮೈಸೂರು,ಜು30,Tv10 ಕನ್ನಡ

ಬೆಂಗಳೂರಿನಲ್ಲಿ ಶಂಕಿತ ಉಗ್ರರ ಬಂಧನವಾದ ಬೆನ್ನ ಹಿಂದೆಯೇ ಮೈಸೂರು ಪೊಲೀಸರು ಹೈ ಅಲರ್ಟ್ ಆಗಿದ್ದಾರೆ. ಜನಸ್ನೇಹಿ ಪೊಲೀಸ್ ವ್ಯವಸ್ಥೆಯ ಭಾಗವಾಗಿ ದುಷ್ಕರ್ಮಿಗಳ ಸೆದೆಬಡಿಯಲು ನೈಟ್ ಬೀಟ್ ವ್ಯವಸ್ಥೆಯನ್ನ ಮತ್ತಷ್ಟು ಬಿಗಿ ಪಡಿಸುತ್ತಿದ್ದಾರೆ.ಈಗಾಗಲೇ ಜಾರಿಯಲ್ಲಿರುವ ಸ್ಮಾರ್ಟ್ ಈ ಬೀಟ್ ವ್ಯವಸ್ಥೆಯನ್ನ ಕಟ್ಟುನಿಟ್ಟಾಗಿ ಪಾಲಿಸಲು ಮುಂದಾಗಿದ್ದಾರೆ.ಉದಯಗಿರಿ ಠಾಣೆ ಪೊಲೀಸರು ಸಾರ್ವಜನಿಕರ ನೆರವನ್ನೂ ಕೋರಿದ್ದಾರೆ. ಅಪರಿಚಿತ ಹಾಗೂ ಶಂಕಿತ ವ್ಯಕ್ತಿಗಳು ಕಂಡುಬಂದಲ್ಲಿ ಕೂಡಲೇ ಮಾಹಿತಿ ನೀಡುವಂತೆ ಮನವಿ ಮಾಡಿದ್ದಾರೆ.ಮಾಹಿತಿದಾರರ ವಿವರವನ್ನ ಗೌಪ್ಯತೆಯಿಂದ ಕಾಪಾಡುವುದಾಗಿ ಭರವಸೆ ನೀಡಿದ್ದಾರೆ. ಉದಯಗಿರಿ ಪೊಲೀಸ್ ಠಾಣೆಯ ರಾತ್ರಿ ಗಸ್ತು ಕರ್ತವ್ಯದ ಸಿಬ್ಬಂದಿಗೆ ಶಕ್ತಿನಗರದ ಪಾರ್ಕ್ ಸಮೀಪ ಇನ್ಸ್ಪೆಕ್ಟರ್ ಪಿ. ಕೆ. ರಾಜು ರವರು ಕರ್ತವ್ಯದ ಹಂಚಿಕೆಯನ್ನು ಮಾಡಿ ನಂತರ ಸಾರ್ವಜನಿಕರಿಗೆ ಅಭಯ ನೀಡಿದ್ದಾರೆ.
ಶಕ್ತಿನಗರದ ನಾಗರೀಕರೊಂದಿಗೆ ಪೊಲೀಸ್ ಸಿಬ್ಬಂದಿಗಳು ಸಂಭಾಷಣೆ ನಡೆಸಿ ಈ ಹಿಂದೆ ರಾತ್ರಿ ಗಸ್ತಿನ ಸಿಬ್ಬಂದಿಗಳು ಪಾಯಿಂಟ್ ಬುಕ್ ನಲ್ಲಿ ಸಹಿ ಮಾಡುವ ವ್ಯವಸ್ಥೆಯ ಬದಲಾಗಿ ಪೊಲೀಸ್ ಇಲಾಖೆಯ ವತಿಯಿಂದ ಜಾರಿಗೆ ತಂದಿರುವ ಸ್ಮಾರ್ಟ್ ಈ ಬೀಟ್ ವ್ಯವಸ್ಥೆಯ ಬಗ್ಗೆ ನಾಗರಿಕರಿಗೆ ಮಾಹಿತಿ ನೀಡಿದ್ದಾರೆ. ಸಾರ್ವಜನಿಕರಿಗೆ ಆತ್ಮಸ್ಥೈರ್ಯ ತುಂಬುವ ಪೊಲೀಸರ ಕೆಲಸಕ್ಕೆ ಪ್ರಶಂಸೆಗಳ ಸುರಿಮಳೆಯಾಗಿದೆ.ಈ ವೇಳೆ ಸಬ್ ಇನ್ಸ್ಪೆಕ್ಟರ್ ಸುನಿಲ್ ಹಾಗೂ ಸಿಬ್ಬಂದಿಗಳು ಹಾಜರಿದ್ದು ನಿಮ್ಮೊಂದಿಗೆ ನಾವಿದ್ದೇವೆ ಎಂಬ ಧೈರ್ಯ ತುಂಬಿದ್ದಾರೆ.

ನಗರ ಪೊಲೀಸ್ ಆಯುಕ್ತ ಡಾ.ಬಿ.ರಮೇಶ್ ಮಾರ್ಗದರ್ಶನದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ಮುತ್ತುರಾಜ್ ಹಾಗೂ ಸಂಚಾರ ಮತ್ತು ಅಪರಾಧ ವಿಭಾಗದ ಡಿಸಿಪಿ ಜಾಹ್ನವಿ ಉಸ್ತುವಾರಿಯಲ್ಲಿ ಎಸಿಪಿ ಶಾಂತಮಲ್ಲಪ್ಪ ನೇತೃತ್ವದಲ್ಲಿ ಉದಯಗಿರಿ ಠಾಣಾ ಪೊಲೀಸರು ರಾತ್ರಿ ಗಸ್ತನ್ನ ಬಿಗಿಗೊಳಿಸಿದ್ದಾರೆ…

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *