ಕಾಲುವೆಗೆ ಉರುಳಿಬಿದ್ದ ಟಾಟಾ ಇಂಡಿಕಾ…ನಾಲ್ವರು ಸಾವು…ಬದುಕುಳಿದ ಚಾಲಕ…

ಮಂಡ್ಯ,ಜು30,Tv10 ಕನ್ನಡ

ಚಾಲಕನ ನಿಯಂತ್ರಣ ತಪ್ಪಿದ ಟಾಟಾ ಇಂಡಿಕಾ ಕಾಲುವೆಗೆ ಬಿದ್ದ ಪರಿಣಾಮ ನಾಲ್ವರು ಸಾವನ್ನಪ್ಪಿದ ಘಟನೆ ಮಂಡ್ಯ ಜಿಲ್ಲೆ ಕಾಡುಕೊತ್ತನಹಳ್ಳಿ ಸಮೀಪ ನಡೆದಿದೆ. ನಿನ್ನೆ ರಾತ್ರಿ 8:30 ಗಂಟೆ ಸಮಯದಲ್ಲಿ ದುರ್ಘಟನೆ ನಡೆದಿದೆ. ಗಾಮನಹಳ್ಳಿ ಗ್ರಾಮದ ಬನ್ನೂರು ಮಂಡ್ಯ ರಸ್ತೆಯಿಂದ ಗ್ರಾಮದ ನಡುವೆ ಹಾದು ಹೋಗಿರುವ ದೊಡ್ಡ ಮಲಗೂಡು ರಸ್ತೆಯಲ್ಲಿ ಕಾಡುಕೊತ್ತನಹಳ್ಳಿಗೆ ತಿರುಗುವ ವಿಸಿ ನಾಲೆಯ ತಿರುವಿನಲ್ಲಿರುವ ಕಾಲುವೆಗೆ ಕಾರು ಉರುಳಿ ಬಿದ್ದಿದೆ. ಗಾಮನಹಳ್ಳಿ ಗ್ರಾಮದಿಂದ ಬನ್ನೂರು ತಾಲೂಕು ಗೊರವನಹಳ್ಳಿ ಗ್ರಾಮಕ್ಕೆ ಹೋಗುತ್ತಿದ್ದ ಟಾಟಾ ಇಂಡಿಕಾ ಕಾರು ನಿಯಂತ್ರಣ ತಪ್ಪಿ ಕಾಲುವೆಗೆ ಉರುಳಿದೆ. ಕಾರು ಚಾಲಕ ಮನೋಜ್ ತಕ್ಷಣ ಹೊರಗೆ ಹಾರಿದ ಪರಿಣಾಮ ಪಾರಾಗಿದ್ದಾನೆ. ಕಾರಿನಲ್ಲಿದ್ದ ಗಾಮನಹಳ್ಳಿ ವಾಸಿ ಮಹದೇವಮ್ಮ(60) ಗೊರವನಹಳ್ಳಿ ವಾಸಿಗಳಾದ ರೇಖಾ (40 ) ಮಮತಾ(45) ಹಾಗೂ ಸಂಜನಾ (19) ಮೃತಪಟ್ಟಿದ್ದಾರೆ.ಮೃತರು ಒಂದೇ ಕುಟುಂಬದವರು.
ಮೃತದೇಹಗಳನ್ನ ನೀರಿನಿಂದ ಮೇಲಕ್ಕೆ ಎತ್ತಿದ್ದು ಸ್ಥಳಕ್ಕೆ ಅರಕೆರೆ ಪೊಲೀಸರು ಆಗಮಿಸಿ ತನಿಖೆ ಕೈಗೊಂಡಿದ್ದಾರೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ…

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *