ವ್ಹೀಲಿಂಗ್ ಶೋಕಿಗಾಗಿ ಬೈಕ್ ಕಳ್ಳತನ ಮಾಡುತ್ತಿದ್ದ ಇಬ್ಬರು ಯುವಕರ ಬಂಧನ…2.5 ಲಕ್ಷ ಮೌಲ್ಯದ 4 ಬೈಕ್ ವಶ…

  • Crime
  • August 3, 2023
  • No Comment
  • 282

ಮೈಸೂರು,ಆ3,Tv10 ಕನ್ನಡ

ವ್ಹೀಲಿಂಗ್ ಶೋಕಿಗಾಗಿ ಬೈಕ್ ಕಳುವು ಮಾಡುತ್ತಿದ್ದ ಇಬ್ಬರು ಯುವಕರನ್ನ ಬಂಧಿಸುವಲ್ಲಿ ಕುವೆಂಪುನಗರ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ.ಬಂಧಿತರಿಂದ 2.5 ಲಕ್ಷ ಮೌಲ್ಯದ 4 ಬೈಕ್ ಗಳನ್ನ ವಶಪಡಿಸಿಕೊಳ್ಳಲಾಗಿದೆ.ಧನುಷ್ (19) ಹಾಗೂ ನಿತಿನ್ (19) ಬಂಧಿತರು.

ಮೈಸೂರಿನ ಶ್ರೀರಾಂಪುರದಲ್ಲಿ ಹೀರೋ ಹೋಂಡಾ ಸಿಡಿ ಡಾನ್ ಬೈಕ್ ಕಳುವು ಮಾಡಿ ಅದೇ ಬೈಕ್ ನಲ್ಲಿ ಮತ್ತೊಂದು ಬೈಕ್ ಕಳುವು ಮಾಡಲು ಸಂಚು ಹಾಕುತ್ತಿದ್ದ ವೇಳೆ ಆರೋಪಿಗಳು ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ.ಆರೋಪಿಗಳನ್ನ ವಿಚಾರಣೆಗೆ ಒಳಪಡಿಸಿದಾಗ ವ್ಹೀಲಿಂಗ್ ಶೋಕಿಗಾಗಿ ಬೈಕ್ ಗಳನ್ನ ಕಳುವು ಮಾಡುತ್ತಿದ್ದುದಾಗಿ ತಿಳಿಸಿದ್ದಾರೆ.

ವಿದ್ಯಾರಣ್ಯಪುರಂ ಠಾಣೆ,ಕುವೆಂಪುನಗರ ಠಾಣೆ ವ್ಯಾಪ್ತಿಯಲ್ಲಿ ತಲಾ ಒಂದು ಕಳುವು ಪ್ರಕರಣ ಹಾಗೂ ಆಲನಹಳ್ಳಿ ಪೊಲೀಸ್ ಠಾಣೆಯ ಎರಡು ಪ್ರಕರಣಗಳು ಪತ್ತೆಯಾಗಿದೆ.

ಸಂಚಾರ ಮತ್ತು ಅಪರಾಧ ವಿಭಾಗದ ಡಿಸಿಪಿ ಜಾಹ್ನವಿ ರವರ ಮಾರ್ಗದರ್ಶನದಲ್ಲಿ ಕೃಷ್ಣರಾಜ ಉಪವಿಭಾಗದ ಎಸಿಪಿ ಗಂಗಾಧರ ಸ್ವಾಮಿ ಉಸ್ತುವಾರಿಯಲ್ಲಿ ಕುವೆಂಪುನಗರ ಠಾಣೆ ಇನ್ಸ್ಪೆಕ್ಟರ್ ಅರುಣ್ ರವರ ನೇತೃತ್ವದಲ್ಲಿ ಪಿಎಸ್ಸೈ ಗಳಾದ ಕು.ರಾಧಾ,ಗೋಪಾಲ್ ಹಾಗೂ ಸಿಬ್ಬಂದಿಗಳಾದ ಆನಂದ್,ಮಂಜುನಾಥ್,ಪುಟ್ಟಪ್ಪ,ಹಜರತ್,ಸುರೇಶ್,ನಾಗೇಶ್,ಯೋಗೇಶ್,ಸತೀಶ್ ರವರು ಕಾರ್ಯಾಚರಣೆಯನ್ನ ಯಶಸ್ವಿಗೊಳಿಸಿದ್ದಾರೆ.

ನಗರ ಪೊಲೀಸ್ ಆಯುಕ್ತರಾದ ಡಾ.ಬಿರಮೇಶ್ ಹಾಗೂ ಕಾನೂನು ಮತ್ತು ಸುವ್ಯವಸ್ಥೆ ಯ ಡಿಸಿಪಿ ಮುತ್ತುರಾಜ್ ರವರು ಕಾರ್ಯಾಚರಣೆಯನ್ನ ಪ್ರಶಂಸಿಸಿದ್ದಾರೆ..

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *