ಕೊತ್ತನಹಳ್ಳಿ ಆದಿವಾಸಿ ಕಾಲೋನಿಗೆ ಪರಿಶಿಷ್ಠ ಪಂಗಡಗಳ ಇಲಾಖೆ ಅಧಿಕಾರಿ ದೌಡು…ಹಾಡಿ ಜನರ ಸಮಸ್ಯೆಗಳಿಗೆ ಸ್ಪಂದಿಸಿದ ಮಹಮದ್ ಷಫೀರ್…Tv10 ಕನ್ನಡ ಇಂಪ್ಯಾಕ್ಟ್…

ನಂಜನಗೂಡು,ಆ4,Tv10 ಕನ್ನಡ

ಅಭಿವೃದ್ದಿ ಕಾಣದೆ ಸರ್ಕಾರದಿಂದ ನಿರ್ಲಕ್ಷ್ಯಕ್ಕೆ ಒಳಗಾದ ನಂಜನಗೂಡು ತಾಲೂಕು ಕೊತ್ತನಹಳ್ಳಿ ಆದಿವಾಸಿ ಕಾಲೋನಿ ನಿವಾಸಿಗಳ ಸಮಸ್ಯೆಗಳನ್ನ ಪ್ರಸಾರ ಮಾಡಿದ ಕೆಲವೇ ಗಂಟೆಗಳಲ್ಲಿ ಪರಿಶಿಷ್ಠ ಪಂಗಡಗಳ ಇಲಾಖೆ ಅಧಿಕಾರಿ ಸ್ಥಳಕ್ಕೆ ಭೇಟಿ ನೀಡಿ ಸ್ಪಂದಿಸಿದ್ದಾರೆ.ಮೂಲಭೂತ ಸೌಕರ್ಯಗಳನ್ನ ಕಲ್ಪಿಸುವುದಾಗಿ ಭರವಸೆ ನೀಡಿದ್ದಾರೆ.ಇದು TV 10 ಕನ್ನಡ ವಾಹಿನಿ ಸುದ್ದಿಯ ಇಂಪ್ಯಾಕ್ಟ್.

ಇಂದು ಬೆಳಿಗ್ಗೆ ಕೊತ್ತನಹಳ್ಳಿ ಆದಿವಾಸಿ ಕಾಲೋನಿ ಜನರ ಸಂಕಷ್ಟಗಳ ಬಗ್ಗೆ Tv10 ಸುದ್ದಿ ವಾಹಿನಿಯಲ್ಲಿ ಪ್ರಸಾರ ಮಾಡಲಾಗಿತ್ತು.ಮೂಲಭೂತ ಸಂಕರ್ಯಗಳಿಂದ ಆದಿವಾಸಿ ಜನ ವಂಚನೆಗೆ ಒಳಗಾಗಿದ್ದಾರೆಂದು ಪ್ರಸಾರ ಮಾಡಲಾಗಿತ್ತು.ಕೇವಲ ಚುನಾವಣೆ ಸಮಯದಲ್ಲಿ ಮಾತ್ರ ಜನಪ್ರತಿನಿಧಿಗಳು ಬರ್ತಾರೆ ನಂತರ ಇತ್ತ ತಿರುಗಿಯೂ ನೋಡಲ್ಲ ಎಂದು ಆರೋಪಿಸಲಾಗಿತ್ತು.ಸುದ್ದಿ ಪ್ರಸಾರವಾದ ಕೆಲವೇ ಗಂಟೆಗಳಲ್ಲಿ ಪರಿಶಿಷ್ಠ ಪಂಗಡಗಳ ಇಲಾಖೆ ಅಧಿಕಾರಿ ಸಿಬ್ಬಂದಿಗಳ ಸಮೇತ ಕೊತ್ತನಹಳ್ಳಿ ಕಾಲೋನಿಗೆ ದೌಡಾಯಿಸಿದ್ದಾರೆ.ಹಾಡಿ ನಿವಾಸಿಗಳ ಸಮಸ್ಯೆಗಳ ಮಾಹಿತಿ ಪಡೆದಿದ್ದಾರೆ.ಶೀಘ್ರದಲ್ಲಿ ಮೂಲಭೂತ ಸೌಕರ್ಯಗಳನ್ನ ಕಲ್ಪಿಸುವುದಾಗಿ ಭರವಸೆ ನೀಡಿದ್ದಾರೆ.ಹಾಡಿಯ ಎಲ್ಲಾ ಸಮಸ್ಯೆಗಳಿಗೆ ತೆರೆ ಎಳೆಯುವುದಾಗಿ ಅಭಯ ನೀಡಿದ್ದಾರೆ.ಇದು Tv10 ಕನ್ನಡ ವರದಿಯ ಫಲಶೃತಿ…

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *