5 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ.
- Crime
- August 4, 2023
- No Comment
- 112
ಬೆಂಗಳೂರು, ಆಗಸ್ಟ್.4,2023(tv10kannada)5 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಬಿಬಿಎಂಪಿ ಕಂದಾಯ ನಿರೀಕ್ಷಕ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬಿಬಿಎಂಪಿ ಮಹದೇವಪುರ ಕಂದಾಯ ಇಲಾಖೆ ಮೇಲೆ ಲೋಕಾಯುಕ್ತ ದಾಳಿ ಅಧಿಕಾರಿಗಳು ದಾಳಿ ಮಾಡಿದ್ದು ಈ ವೇಳೆ ಲಂಚ ಸ್ವೀಕರಿಸುತ್ತಿದ್ದ ಬಿಬಿಎಂಪಿ ಕಂದಾಯ ನಿರೀಕ್ಷಕ ನಟರಾಜ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಲೋಕಾಯುಕ್ತ ಇನ್ಸ್ ಪೆಕ್ಟರ್ ಮಂಜನಾಥ್ ಹೂಗಾರ್ ನೇತೃತ್ವದಲ್ಲಿ ದಾಳಿ ನಡೆದಿತ್ತು. ಖಾಸಗಿ ವ್ಯಕ್ತಿ ಪವನ್ ಮೂಲಕ ಲಂಚ ಸ್ವೀಕರಿಸುತ್ತಿದ್ದರು . ಇನ್ನು ನಟರಾಜ್ ಫ್ಲ್ಯಾಟ್ ಖಾತೆ ಮಾಡಿಕೊಡಲು 1 ಫ್ಲ್ಯಾಟ್ಗೆ 10 ಸಾವಿರದಂತೆ 79 ಫ್ಲ್ಯಾಟ್ ಗೆ 7.90 ಲಕ್ಷ ಹಣಕ್ಕೆ ಬೇಡಿಕೆಯಿಟ್ಟಿದ್ದರು ಎನ್ನಲಾಗಿದೆ. ಅದರಂತೆ ಮುಂಗಡವಾಗಿ 5 ಲಕ್ಷ ರೂ. ಲಂಚ ಪಡೆಯುವಾಗ ಬಿಬಿಎಂಪಿ ಆರ್ಐ ನಟರಾಜ್, ಆರೋಪಿ ಪವನ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.