ಬೈಲುಕುಪ್ಪೆ 1 ನೇ ಟಿಬೆಟ್ ಕ್ಯಾಂಪ್ ಆವರಣದಲ್ಲಿ 29 ಕೆ.ಜಿ.ಗಾಂಜಾ ವಶ…ಐವರ ಬಂಧನ…

  • Crime
  • August 8, 2023
  • No Comment
  • 183

ಪಿರಿಯಾಪಟ್ಟಣ,ಆ8,Tv10 ಕನ್ನಡ

ಇಂದು ಮುಂಜಾನೆ ಬೈಲುಕುಪ್ಪೆ ಒಂದನೇ ಟಿಬೆಟನ್ ಕ್ಯಾಂಪ್ ಆವರಣದಲ್ಲಿ ಪೊಲೀಸರು ದಾಳಿ ನಡೆಸಿ 29 ಕೆ.ಜಿ ಗಾಂಜಾ ಹಾಗೂ ಒಂದು ಕಾರನ್ನ ವಶಪಡಿಸಿಕೊಂಡು ಐದು ಆರೋಪಿಗಳನ್ನ ಬಂಧಿಸಿದ್ದಾರೆ.ಇಂದು
ಮುಂಜಾನೆ ಖಚಿತ ಮಾಹಿತಿ ಮೇರೆಗೆ ಸಾರ್ವಜನಿಕರಿಗೆ ಅಕ್ರಮವಾಗಿ ಮಾರಾಟ ಮಾಡುವ ಉದ್ದೇಶದಿಂದ ತಂದಿರುವ ಕೇರಳ ರಾಜ್ಯದ ವಾಹನ ನೋಂದಣಿ ಸಂಖ್ಯೆ ಕೆ ಎಲ್ 58 ಬಿ 2983 ಸಿಪ್ಟ್ ಕಾರಿನಲ್ಲಿದ್ದ
29 ಕೆ.ಜಿ. ಗಾಂಜಾ ಹಾಗೂ ಕಾರನ್ನು ವಶಪಡಿಸಿಕೊಂಡಿರುವುದಾಗಿ ಮೈಸೂರು ಪೊಲೀಸ್ ಅಧೀಕ್ಷಕಿ ಸೀಮಾ ಲಾಟ್ಕಾರ್ ತಿಳಿಸಿದ್ದಾರೆ. ಬೈಲುಕುಪ್ಪೆ ಪೊಲೀಸ್ ಠಾಣೆಯ ಪೊಲೀಸ್ ಮೈದಾನದಲ್ಲಿ ನಡೆಸಿದ ಸುದ್ದಿ ಗೋಷ್ಟಿಯಲ್ಲಿ ಮಾಹಿತಿ ನೀಡಿದ್ದಾರೆ.

ಮುಂದಿನ ದಿನಗಳಲ್ಲಿ ಸಾರ್ವಜನಿಕರಲ್ಲಿ ಹಾಗೂ ಕಾಲೇಜುಗಳಲ್ಲಿ ಮಾದಕ ವಸ್ತುಗಳ ಬಗ್ಗೆ ಅಭಿಯಾನ ಹಮ್ಮಿಕೊಂಡು ಜಾಗೃತಿ ಮೂಡಿಸಲಾಗುವುದು ಎಂದು ಇದೇ ವೇಳೆ ತಿಳಿಸಿದ್ದಾರೆ. ಒಡಿಸ್ಸಾ ರಾಜ್ಯದ ಬಿಕ್ರಂ ನಾಯಕ್, ಕುಶಾಲನಗರದ ನಯನ್ ದೀಪು , ಮಡಿಕೇರಿ ತಾಲೂಕು ಕಡಕದಾಳು ಗ್ರಾಮದ ಜಂಶೀರ್ , ಪಿರಿಯಪಟ್ಟಣ ತಾಲೂಕಿನ ಆಲನಹಳ್ಳಿ ಗ್ರಾಮದ ಅನಿಲ್ ಕುಮಾರ್, ಕೊಪ್ಪ ಗುಡ್ಡನಹಳ್ಳಿ ಗ್ರಾಮದ ಭರತ್ ಕುಮಾರ್ ರವರನ್ನ ಬಂಧಿಸಲಾಗಿದೆ.

ಸುದ್ದಿಗೋಷ್ಠಿಯಲ್ಲಿ ಹುಣಸೂರು ಡಿವೈಎಸ್ಪಿ ಮಹೇಶ್, ಬೈಲುಕೊಪ್ಪೆ ವೃತ್ತ ನಿರೀಕ್ಷಕ ಪ್ರಕಾಶ್, ಪಿಎಸ್ಐ ಅಜಯ್ ಕುಮಾರ್ ಹಾಜರಿದ್ದರು.
ಕಾರ್ಯಾಚರಣೆಯಲ್ಲಿ ಬೈಲುಕೊಪ್ಪ ಪೊಲೀಸ್ ಠಾಣೆಯ, ಪಿಎಸ್ಐ ಅಜಯ್ ಕುಮಾರ್ , ಅಪರಾಧ ವಿಭಾಗದ ಪಿಎಸ್ಐ ಮಾಲಿಂಗಯ್ಯ, ಸಿಬ್ಬಂದಿಗಳಾದ ಅಜಯ್ ಕುಮಾರ್, ಚೇತನ್ ಕುಮಾರ್,ಮುದ್ದುರಾಜ್, ಕುಮಾರಸ್ವಾಮಿ, ರವಿ, ವೀರೇಶ್ ಕೆ.ಹೆಮಹದೇವಪ್ಪ, ರವಿ ಕುಮಾರ್, ಸುರೇಶ್, ರಾಜೇಶ್ , ಭಾಗವಹಿಸಿದ್ದರು…

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *