ಮೈಸೂರಿನಲ್ಲಿ ಸ್ವಾತಂತ್ರೋತ್ಸವ ಸಂಭ್ರಮ…ಸಚಿವ ಡಾ.ಹೆಚ್.ಸಿ.ಮಹದೇವಪ್ಪರಿಂದ ದ್ವಜಾರೋಹಣೆ…
- TV10 Kannada Exclusive
- August 15, 2023
- No Comment
- 87
ಮೈಸೂರಿನಲ್ಲಿ ಸ್ವಾತಂತ್ರೋತ್ಸವ ಸಂಭ್ರಮ…ಸಚಿವ ಡಾ.ಹೆಚ್.ಸಿ.ಮಹದೇವಪ್ಪರಿಂದ ದ್ವಜಾರೋಹಣೆ…
ಮೈಸೂರು,ಆ15,Tv10 ಕನ್ನಡಮೈಸೂರಿನಲ್ಲೂ 77ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಮೊಳಗಿದೆ.
ಮೈಸೂರಿನ ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ಜಿಲ್ಲಾಡಳಿತದ ವತಿಯಿಂದ ಸಮಾರಂಭ ಆಯೋಜನೆ ಮಾಡಲಾಗಿತ್ತು
ಜಿಲ್ಲಾ ಉಸ್ತುವಾರಿ ಸಚಿವ ಡಾ ಹೆಚ್ ಸಿ ಮಹದೇವಪ್ಪರಿಂದ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು
ಬಳಿಕ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ, ಸಂವಿಧಾನ ಶಿಲ್ಪಿ ಡಾ ಬಿ ಆರ್ ಅಂಬೇಡ್ಕರ್ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು.ರಾಷ್ಟ್ರ ಧ್ವಜಾರೋಹಣ ನೆರವೇರಿಸಿದ ಬಳಿಕ ತೆರೆದ ವಾಹನದಲ್ಲಿ ಪೆರೇಡ್ ವೀಕ್ಷಣೆ ಮಾಡಿ ಗೌರವ ಸ್ವೀಕರಿಸಿದರು.
ನಂತರ ಪೊಲೀಸ್ ಇಲಾಖೆಯ ವಿವಿಧ ತುಕಡಿಗಳು, ಎನ್ ಸಿ ಸಿ, ಸ್ಕೌಟ್ಸ್ ಅಂಡ್ ಗೈಡ್ಸ್, ವಿವಿಧ ಶಾಲೆಗಳ ವಿದ್ಯಾರ್ಥಿಗಳು, ಸೇವಾದಳ ಹಾಗು ಪೊಲೀಸ್ ವಾದ್ಯ ವೃಂದದಿಂದ ಆಕರ್ಷಕ ಪಥ ಸಂಚಲನ ನಡೆಯಿತು
ಬಳಿಕ ಸ್ವಾತಂತ್ರ್ಯ ದಿನಾಚರಣೆಯ ಸಂದೇಶ ನೀಡಿದರು.
ಶಾಸಕ ತನ್ವೀರ್ ಸೇಠ್, ವಿಧಾನ ಪರಿಷತ್ ಸದಸ್ಯರಾದ ಮರಿತಿಬ್ಬೇಗೌಡ, ಸಿ ಎನ್ ಮಂಜೇಗೌಡ, ಮೇಯರ್ ಶಿವಕುಮಾರ್, ಉಪ ಮೇಯರ್ ಡಿ ರೂಪ, ಜಿಲ್ಲಾಧಿಕಾರಿ ಡಾ ಕೆ ವಿ ರಾಜೇಂದ್ರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾಲಾಟ್ಕರ್, ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಸೇರಿದಂತೆ ಇತರ ಗಣ್ಯರು ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ ಭಾಗಿಯಾಗಿದ್ದರು…