ಗ್ರಾಹಕನ ಸೋಗಿನಲ್ಲಿ ಚಿನ್ನದ ಸರ ಲಪಟಾಯಿಸಿದ ಖದೀಮನ ಬಂಧನ…2 ಲಕ್ಷ ಮೌಲ್ಯದ 2 ಚಿನ್ನದ ಸರ ವಶ…

ಗ್ರಾಹಕನ ಸೋಗಿನಲ್ಲಿ ಚಿನ್ನದ ಸರ ಲಪಟಾಯಿಸಿದ ಖದೀಮನ ಬಂಧನ…2 ಲಕ್ಷ ಮೌಲ್ಯದ 2 ಚಿನ್ನದ ಸರ ವಶ…

  • Crime
  • August 19, 2023
  • No Comment
  • 215

ಮೈಸೂರು,ಆ19,Tv10 ಕನ್ನಡ

ಗ್ರಾಹಕನ ಸೋಗಿನಲ್ಲಿ ಬಂದು ಚಿನ್ನದ ಸರ ಲಪಟಾಯಿಸಿದ್ದ ಖದೀಮನನ್ನ ಬಂಧಿಸುವಲ್ಲಿ ಲಷ್ಕರ್ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ.ಅರಕಲಗೂಡು ನಿವಾಸಿ ಪ್ರತಾಪ್(25) ಬಂಧಿತ ಆರೋಪಿ.ಬಂಧಿತನಿಂದ 2 ಲಕ್ಷ ಮೌಲ್ಯದ 40 ಗ್ರಾಂ ಚಿನ್ನದ ಸರ ವಶಪಡಿಸಿಕೊಂಡಿದ್ದಾರೆ. ಲಷ್ಕರ್ ಪೊಲೀಸ್ ಠಾಣಾ ವ್ಯಾಪ್ತಿಯ ಶ್ರೀ ಹರಿ ಜ್ಯೂಯಲರ್ಸ್ ನಲ್ಲಿ ಗ್ರಾಹಕನ ಸೋಗಿನಲ್ಲಿ ಬಂದ ಆರೋಪಿ ಗಮನ ಬೇರೆಡ ಸೆಳೆದು 40 ಗ್ರಾಂ ತೂಕದ ಎರಡು ಚಿನ್ನದ ಸರ ಕಳುವು ಮಾಡಿದ್ದ.ಕೃತ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿತ್ತು.ಈ ಸಂಭಂಧ ಶ್ರೀಹರಿ ಜ್ಯೂಯಲರ್ ಮಾಲೀಕರು ಲಷ್ಕರ್ ಠಾಣೆಗೆ ದೂರು ನೀಡಿದ್ದರು.ಖದೀಮನ ಬಂಧನಕ್ಕೆ ಅಪರಾಧ ಮತ್ತು ಸಂಚಾರ ಡಿಸಿಪಿ ಜಾಹ್ನವಿ ಮಾರ್ಗದರ್ಶನದಲ್ಲಿ ಹಾಗೂ ದೇವರಾಜ ಉಪವಿಭಾಗದ ಎಸಿಪಿ ಶಾಂತಮಲ್ಲಪ್ಪ ಉಸ್ತುವಾರಿಯಲ್ಲಿ ಲಷ್ಕರ್ ಠಾಣೆಯ ಇನ್ಸ್ಪೆಕ್ಟರ್ ಪ್ರಸಾದ್ ಹಾಗೂ ಸಬ್ ಇನ್ಸ್ಪೆಕ್ಟರ್ ಚಂದ್ರಶೇಖರ್ ಮಗಣಗೇರಿ ನೇತೃತ್ವದಲ್ಲಿ ಸಿಬ್ಬಂದಿಗಳಾದ ಲೋಕೇಶ್,ಚೇತನ್,ಚಿನ್ನಪ್ಪ,ಮಂಜುನಾಥ್,ಲಾಳೇಸಾಬ್ ನಡಾಫ್,ಮಂಜುನಾಥ್ ಗದಗೈಗೋಳ,ಕುಮಾರ್ ರವರನ್ನೊಳಗೊಂಡ ತಂಡ ರಚಿಸಲಾಗಿತ್ತು.ಆರೋಪಿಯನ್ನ ಸೆರೆ ಹೊಡಿಯುವಲ್ಲಿ ತಂಡ ಯಶಸ್ವಿಯಾಗಿದೆ. ಪತ್ತೆ ಕಾರ್ಯವನ್ನ ನಗರ ಪೊಲೀಸ್ ಆಯುಕ್ತ ಡಾ.ಬಿ.ರಮೇಶ್ ಹಾಗೂ ಡಿಸಿಪಿ ಮುತ್ತುರಾಜ್ ಪ್ರಶಂಸಿಸಿದ್ದಾರೆ..

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *