ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆಗೆ ವಿರೋಧ…ರೈತರ ಬಂಧನ…

ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆಗೆ ವಿರೋಧ…ರೈತರ ಬಂಧನ…

ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆಗೆ ವಿರೋಧ…ರೈತರ ಬಂಧನ…

ಟಿ.ನರಸೀಪುರ,ಆ19,Tv10 ಕನ್ನಡ

ತಮಿಳುನಾಡಿಗೆ ನೀರು ಬಿಡುವುದನ್ನ ವಿರೋಧಿಸಿ ಟಿ ನರಸೀಪುರದಲ್ಲಿ ಅನ್ನದಾತರು ರಾಷ್ಟ್ರೀಯ ಹೆದ್ದಾರಿ ರಸ್ತೆತಡೆ ಚಳುವಳಿ ನಡೆಸಿದರು.ಪ್ರತಿಭಟನಾ ನಿರತ ರೈತರನ್ನ ಪೊಲೀಸರು ಬಂಧಿಸಿದರು.ರಾಜ್ಯ ರೈತ ಸಂಘಟನೆಗಳ ಒಕ್ಕೂಟ ರಾಜ್ಯ ಕಬ್ಬುಬೆಳೆಗಾರರ ಸಂಘ.ಟಿ ನರಸೀಪುರ ತಾಲೂಕು ಘಟಕದ ವತಿಯಿಂದ ನೂರಾರು ರೈತರು ಪ್ರತಿಭಟನೆ ನಡೆಸಿದರು ರಾಷ್ಟ್ರೀಯ ಹೆದ್ದಾರಿ ಬಿಂದಿಗೆ ಫ್ಯಾಕ್ಟರಿ ಹತ್ತಿರ ರೈತರು ಸುಮಾರು ಒಂದು ಗಂಟೆ ಕಾಲ ರಸ್ತೆ ಬಂದ್ ಮಾಡಿ ಆಕ್ರೋಷ ವ್ಯಕ್ತಪಡಿಸಿದರು. ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ಕೂಡಲೇ ನಿಲ್ಲಿಸಿ ರಾಜ್ಯದ ರೈತರ ಹಿತರಕ್ಷಣೆ ಕಾಪಾಡಬೇಕು ಎಂದು ಒತ್ತಾಯಿಸಿದರು. ಪ್ರತಿಭಟನೆ ಕೈ ಬಿಡಲು ನಿರಾಕರಿಸಿದ ರೈತರನ್ನ ಪೊಲೀಸರು ಬಂಧಿಸಿದರು.ಪ್ರತಿಭಟನೆಯಲ್ಲಿ ರಾಜ್ಯ ಸಂಘಟನಾ ಕಾರ್ಯದರ್ಶಿ ಹತ್ತಳ್ಳಿ ದೇವರಾಜ್, ಹಳ್ಳಿ ಕೆರೆಹುಂಡಿ ಭಾಗ್ಯರಾಜ್, ಕಿರಗಸೂರ್ ಶಂಕರ್, ತಾಲೂಕು ಅಧ್ಯಕ್ಷ ಕುರುಬೂರು ಸಿದ್ದೇಶ್, ಪ್ರಸಾದ್ ನಾಯಕ್, ಪ್ರದೀಪ್ ಕುರುಬೂರು,ರಾಜೇಶ್, ಆದಿ ಬೆಟ್ಟಳ್ಳಿ ನಂಜುಂಡಸ್ವಾಮಿ, ಅನಿಲ್ ಹೊಸೂರು, ಗೌರಿಶಂಕರ್, ವಾಜ್ ಕುಮಾರ್, ತರಕಾರಿ ನಿಂಗರಾಜು, ಅಪ್ಪಣ್ಣ, ಮಾದೇವ ಪ್ರಸಾದ್, ಜಾಲಹಳ್ಳಿ ರಾಜೇಶ್, ಉಮೇಶ್ ಇನ್ನು ಹಲವು ರೈತರು ಚಳುವಳಿಯಲ್ಲಿ ಭಾಗವಹಿಸಿದ್ದರು..

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *