ಶಾಲಾ ಬಾಲಕಿ ಅಪಹರಣ ಯತ್ನ…ಹುಲ್ಲಹಳ್ಳಿ ಠಾಣೆಯಲ್ಲಿ ದೂರು ದಾಖಲು…

ಶಾಲಾ ಬಾಲಕಿ ಅಪಹರಣ ಯತ್ನ…ಹುಲ್ಲಹಳ್ಳಿ ಠಾಣೆಯಲ್ಲಿ ದೂರು ದಾಖಲು…

ನಂಜನಗೂಡು,ಆ19,Tv10 ಕನ್ನಡ

ನಂಜನಗೂಡಿನ ಹುಲ್ಲಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿನಿ ಅಪಹರಣ ಯತ್ನ ನಡೆದಿದೆ. ಎರಡನೇ ತರಗತಿಯ ಅನುಷಾ ಎಂಬಾಕೆಯನ್ನ ಅಪಹರಿಸುವ ಯತ್ನ ನಡೆದಿದೆ. ಶೌಚಾಲಯಕ್ಕೆ ತೆರಳಿದ ವೇಳೆ ಇಬ್ಬರು ಅಪರಿಚಿತ ವ್ಯಕ್ತಿಗಳು ಅಪಹರಿಸಲು ಯತ್ನಿಸಿದ್ದಾರೆ. ಬಾಲಕಿಯ ಬಾಯಿಗೆ ಬಟ್ಟೆ ತುರುಕಿ ಅಪಹರಿಸಲು ಯತ್ನಿಸಿದಾಗ ಕಿರುಚಾಡಿದ್ದಾಳೆ.ಅನುಷಾ ಕಿರುಚಾಡಿದ ಶಬ್ದಕ್ಕೆ ಶಾಲೆಯ ವಿದ್ಯಾರ್ಥಿಗಳು ಮತ್ತು ಶಿಕ್ಷಕರುಗಳು ದೌಡಾಯಿಸಿದಾಗ ಬಾಲಕಿಯನ್ನ ದುಷ್ಕರ್ಮಿಗಳು ಸ್ಥಳದಲ್ಲಿ ಬಿಟ್ಟು ಪರಾರಿಯಾಗಿದ್ದಾರೆ. ಘಟನೆಯನ್ನು ಖಂಡಿಸಿ ಜಯ ಕರ್ನಾಟಕ ಸಂಘಟನೆಯ ಹೋಬಳಿಯ ಅಧ್ಯಕ್ಷ ಜವರ ನಾಯಕ ಘಟನೆಯನ್ನ ಖಂಡಿಸಿದ್ದಾರೆ. ಶಾಲೆಯ ಹಿಂಭಾಗ ಕಾಂಪೌಂಡ್ ಸಂಪೂರ್ಣ ಶಿಥಿಲ ಗೊಂಡಿದ್ದು ಮತ್ತು ಅತಿ ಹೆಚ್ಚು ಮರ ಗಿಡಗಂಟೆಗಳು ಬೆಳೆದಿದ್ದು ವಿಧ್ಯಾರ್ಥಿಗಳಿಗೆ ರಕ್ಷಣೆ ಇಲ್ಲ ಎಂದು ಆರೋಪಿಸಿದ್ದಾರೆ. ಗಿಡಗಂಟೆಗಳನ್ನು ತೆರೆವುಗೊಳಿಸಿ ಕಾಂಪೌಂಡ್ ನಿರ್ಮಿಸಲು ಒತ್ತಾಯಿಸಿದ್ದಾರೆ.ಈ ಸಂಭಂಧ ಶಾಲೆಯ ಮುಖ್ಯ ಶಿಕ್ಷಕರುಗಳು ಹುಲ್ಲಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ…

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *