ಮಳೆಯಿಂದ ಹಾನಿಯಾದ ಮನೆಗಳಿಗೆ ಪರಿಹಾರ ವಿತರಿಸಲು ಕ್ರಮವಹಿಸಿ…ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅಧಿಕಾರಿಗಳಿಗೆ ಸೂಚನೆ…

ಮಳೆಯಿಂದ ಹಾನಿಯಾದ ಮನೆಗಳಿಗೆ ಪರಿಹಾರ ವಿತರಿಸಲು ಕ್ರಮವಹಿಸಿ…ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅಧಿಕಾರಿಗಳಿಗೆ ಸೂಚನೆ…

ಮೈಸೂರು,ಆ 21,Tv10 ಕನ್ನಡ ಅತಿಯಾದ ಮಳೆಯಿಂದ ಮನೆಗಳಿಗೆ ಹಾನಿಯಾಗಿರುವ ಸಂಬಂಧ ಅಧಿಕಾರಿಗಳು ಪರಿಶೀಲನೆ ನಡೆಸಿ ಪರಿಹಾರ ವಿತರಣೆಗೆ ಕೂಡಲೇ ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿಗಳಾದ ಡಾ. ಕೆ ವಿ ರಾಜೇಂದ್ರ ಅವರು ಸೂಚನೆ ನೀಡಿದ್ದಾರೆ.
ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ವಿಪತ್ತು ನಿರ್ವಹಣೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಳೆ ಹಾನಿಯಿಂದ ಮನೆ ಬಿದ್ದು ಹೋಗಿರುವವರಿಗೆ ಪರಿಹಾರ ನೀಡಿ ಅವರಿಗೆ ಸೂರು ನಿರ್ಮಿಸಿ ಕೊಡಿ. ತಹಶೀಲ್ದಾರ್, ಕಾರ್ಯಪಾಲಕ ಅಭಿಯಂತರರು ಹಾಗೂ ಕಾರ್ಯ ನಿರ್ವಹಣಾಧಿಕಾರಿ ಗಳು ಸೇರಿ ಮನೆ ಹಾನಿ ಕುರಿತು ಖುದ್ದಾಗಿ ಭೇಟಿ ನೀಡಿ ಪರಿಶೀಲನೆ ಮಾಡಬೇಕು. ಮನೆಯು ಮಳೆ ಹಾನಿಯಿಂದ ಬಿದ್ದಿದೆಯೇ ಎಂಬುದನ್ನು ಪರಿಶೀಲನೆ ನಡೆಸಿ. ಮಳೆಯಿಂದ ಹಾನಿ ಆಗಿರುವ ಮನೆಗಳಿಗೆ ಮೊದಲ ಹಂತದ ಪರಿಹಾರ ಕೂಡಲೇ ವಿತರಣೆ ಮಾಡಬೇಕು. ಈ ಕುರಿತ ಮಾಹಿತಿಯನ್ನು ಸಂಬಂಧಪಟ್ಟ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಕಳುಹಿಸಿ ಕೊಡಬೇಕು ಎಂದು ತಿಳಿಸಿದರು.
ಕಳೆದ 2-3 ವರ್ಷಗಳಿಂದ ಮಳೆಯಿಂದ ಹಾನಿ ಉಂಟಾಗಿದೆ ಎಂದು ಪರಿಹಾರ ಪಡೆದು ಸಹ ಕೆಲವರು ಹೊಸ ಮನೆ ನಿರ್ಮಾಣಕ್ಕೆ ಮುಂದಾಗಿಲ್ಲ. ಈ ಬಗ್ಗೆ ಪರಿಶೀಲನೆ ಮಾಡಿ ಮನೆ ಹಾನಿ ಉಂಟಾಗದೆ ಇರುವವರ ಅರ್ಜಿಗಳನ್ನು ರಿಜೆಕ್ಟ್ ಮಾಡಲು ತಹಶೀಲ್ದಾರರು ಪಟ್ಟಿ ಕಳುಹಿಸಿಕೊಡಬೇಕು ಎಂದು ಮಾಹಿತಿ ನೀಡಿದರು.
ಮಳೆಯಿಂದ ಹಾನಿ ಆಗಿರುವ ಅಂಗನವಾಡಿ, ಶಾಲೆಗಳು ಹಾಗೂ ಪ್ರಾಥಮಿಕ ಅರೋಗ್ಯ ಕೇಂದ್ರಗಳ ದುರಸ್ತಿಗೆ 2 ಲಕ್ಷದ ವರೆಗೆ ಅನುದಾನ ನೀಡಲಾಗುವುದು ಎಂದರು.ವಿವಿಧ ಯೋಜನೆಗಳಡಿ ಸರ್ಕಾರದಿಂದ ಪಿಂಚಣಿ ಪಡೆಯುತ್ತಿರುವ ಕೆಲವರು ಮರಣ ಹೊಂದಿದ್ದರೂ ಅವರ ಖಾತೆಗೆ ಪಿಂಚಣಿ ಹೋಗುತ್ತಿದೆ. ಈ ಬಗ್ಗೆ ಪರಿಶೀಲಿಸಿ ಅವರನ್ನು ಪಿಂಚಣಿ ಪಟ್ಟಿಯಿಂದ ಕೈಬಿಡಬೇಕು.ಇಲ್ಲದಿದ್ದರೆ ಸಂಬಂಧಪಟ್ಟ ಗ್ರಾಮ ಆಡಳಿತಾಧಿಕಾರಿ ಹಾಗೂ ಕಂದಾಯ ಅಧಿಕಾರಿಗಳನ್ನು ನೇರ ಹೊಣೆಗಾರರನ್ನಾಗಿ ಮಾಡಿ, ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.ಸಭೆಯಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಕವಿತಾ ರಾಜಾರಾಮ್, ಮೈಸೂರು ಉಪ ವಿಭಾಗಾಧಿಕಾರಿ ರಕ್ಷಿತ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು…

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *