ಹೂವಿನ ಗಿಡಗಳ ನಡುವೆ ಗಾಂಜಾ ಬೆಳೆ…ಆರೋಪಿ ಬಂಧನ…6 ಕೆಜಿ ಗಾಂಜಾ ವಶ…
- CrimeMysore
- August 22, 2023
- No Comment
- 158

ಹುಣಸೂರು
ಮನೆಯ ಆವರಣದಲ್ಲಿ ಹಾಕಲಾಗಿದ್ದ ಹೂವಿನ ಗಿಡಗಳ ನಡುವೆ ಗಾಂಜಾ ಗಿಡ ಬೆಳೆದಿದ್ದ ಆರೋಪಿಯನ್ನ ಬಂಧಿಸುವಲ್ಲಿ ಹುಣಸೂರು
ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ.
6 ಕೆ.ಜಿ. ತೂಕದ ಎರಡು ಗಾಂಜಾ ಹಸಿ ಗಿಡವನ್ನು ವಶಕ್ಕೆ ಪಡೆದಿದ್ದಾರೆ.
ಹುಣಸೂರು ತಾಲೂಕಿನ ತಟ್ಟೆಕೆರೆ ಗ್ರಾಮದಲ್ಲಿ ಘಟನೆ ಬೆಳಕಿಗೆ ಬಂದಿದೆ.
ಬಸವರಾಜು ಎಂಬುವರ ಪುತ್ರ ವಿಶ್ವನಾಥ್ ಬಂಧಿತ ಆರೋಪಿ.
5 ರಿಂದ 6 ಅಡಿ ಎತ್ತರ ಬೆಳೆದಿದ್ದ ಗಾಂಜಾ ಗಿಡ ವಶಕ್ಕೆ ಪಡೆಯಲಾಗಿದೆ.
ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…